ಸಿಲಿಕಾನ್ ಸಿಟಿ ಬೆಂಗಳೂರಿನ ಸುತ್ತಲಿನ ಪ್ರದೇಶದಲ್ಲಿ 75 ಸಾವಿರ ಎಕರೆಯಷ್ಟು ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗಿದೆ ತನಿಖೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು (ಸೆ.19): ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರು ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಲಿನ ಪ್ರದೇಶ ಹಾಗೂ ಹೊರವಲಯದಲ್ಲಿ ಬರೋಬ್ಬರಿ 75 ಸಾವಿರ ಎಕರೆಯಷ್ಟು ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗಿದೆ ಎಂಬ ದೂರು ಬಂದಿದ್ದು, ಕೂಡಲೇ ತನಿಖೆಯನ್ನು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಮತ್ತು ಸುತ್ತಮುತ್ತ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದ್ದು, ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಲಾಗುತ್ತಿದೆ. ನಗರದ ಸುತ್ತಮುತ್ತ 100 ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಿತವಾಗಿರುವ ರೆಸಾರ್ಟ್ ಮತ್ತು ಅತಿಥಿ ತಂಗುದಾಣಗಳು ಸಹ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಬಗ್ಗೆ, ದೂರುಗಳು ದಾಖಲಾಗಿರುತ್ತವೆ. ಅಂದರೆ, ಬೆಂಗಳೂರು ನಗರದ ಸುತ್ತಮುತ್ತ ಸುಮಾರು 75,000 ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ತಿಳಿಸಲಾಗಿದೆ.
undefined
ಕರ್ನಾಟಕ ಜನತೆಗೆ ಮತ್ತೊಂದು ದರ ಏರಿಕೆ ಶಾಕ್: ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ಹೆಚ್ಚಳ!
ತಂಗುದಾಣ ನಿರ್ಮಿಸಲು ಸರ್ಕಾರಿ ಭೂಮಿ ಒತ್ತುವರಿ: ಇದರೊಂದಿಗೆ 5ರಿಂದ 6 ಸಾವಿರ ಎಕರೆ ಭೂಮಿಯಲ್ಲಿ ಕಾನೂನುಬಾಹಿರವಾಗಿ ತಂಗುದಾಣಗಳನ್ನು ನಿರ್ಮಿಸಲು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ದೂರು ದಾಖಲಾಗಿದೆ.. ಇನ್ನು ಅಂಕಿಅಂಶಗಳ ಸಮೇತವಾಗಿ ಒತ್ತುವರಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿ ಹಾಗೂ ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ದೃಷ್ಟಿಯಿಂದ ತಂಗುದಾಣಗಳ ಅಕ್ರಮ ಭೂಮಿ ಸ್ವಾಧೀನ ಕುರಿತು ಲ್ಯಾಂಡ್ ಆಡಿಟಿಂಗ್ ಮಾಡಲು ಕ್ರಮ ಕೈಗೊಳ್ಳಬೇಕಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ದೂರು ಮನವಿ ಮಾಡಿದ್ದಾರೆ. ಈ ಕುರಿತಂತೆ ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ.
ಕರ್ನಾಟಕ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ಹೆಚ್ಚಳ! ಬೆಂಗಳೂರು (ಸೆ.19): ರಾಜ್ಯದ ಕಂದಾಯ ಇಲಾಖೆಯ ನಿಯಮಾವಳಿ ಪ್ರಕಾರ ಪ್ರತಿವರ್ಷ ಆಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಬೇಕು ಅಂತ ನಿಯಮ ಇದೆ. ಅದಕ್ಕಾಗಿ ನಾವು ಅಕ್ಟೋಬರ್ 1ರಿಂದ ಆಸ್ತಿ ನೊಂದಣಿ ಮಾರ್ಗಸೂಚಿ ದರ ಹೆಚ್ಚಳ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಸ್ತಿ ನೊಂದಣಿ ಮಾರ್ಗಸೂಚಿ ದರ ಏರಿಕೆ ಮಾಡುವ ಬಗ್ಗೆ ಈಗಾಗಲೇ ಚರ್ಚೆ ಮಾಡಿ ತೀರ್ಮಾನ ಮಾಡಲಾಗಿದೆ. ಪ್ರತಿವರ್ಷ ಆಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಬೇಕೆಂಬ ನಿಯಮವಿದೆ. ಆದರೆ, ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಅದಕ್ಕಾಗಿ ನಾವು ಆಸ್ತಿ ನೊಂದಣಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಅಕ್ಟೋಬರ್ 1ರಿಂದ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದರು.
ಹಿಂದೂ ಧಾರ್ಮಿಕ ಸ್ಥಳ ಅಂತರಗಂಗೆ ಬೆಟ್ಟದಲ್ಲಿ ಪಾಕಿಸ್ಥಾನ ಬಾವುಟ ಬಿಡಿಸಿದ ಪಾಪಿಗಳು
ವಾರ್ಷಿಕ 2000 ಕೋಟಿ ರೂ. ಆದಾಯ ನಿರೀಕ್ಷೆ: ಪ್ರಸ್ತುತವಾಗಿ ರಾಜ್ಯದಲ್ಲಿ ಸರಾಸರಿ ಶೇಕಡಾ 30 ಪರ್ಸೆಂಟ್ ಮಾರ್ಗಸೂಚಿ ದರ ಏರಿಕೆ ಆಗಲಿದೆ. ಈ ಬಗ್ಗೆ ಆಕ್ಷೇಪ ಇದ್ದರೆ ಸಲ್ಲಿಸಲು ಅವಕಾಶ ಇದೆ. ಆಕ್ಷೇಪ ಗಮನಿಸಿ ಅಧಿಸೂಚನೆ ನಂತರ ಪ್ರಕಟ ಆಗಲಿದೆ. ಇನ್ನು ರಾಜ್ಯದಲ್ಲಿ ಮಾರ್ಗಸೂಚಿ ದರ ಏರಿಕೆಯಾದರೆ ವರ್ಷಕ್ಕೆ 2000 ಕೋಟಿ ರೂ ಆದಾಯ ಬರಲಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲ ಆಗಲಿದೆ. ಹೊಸದನ್ನು ಮಾಡಿದಾಗ ಪರ ವಿರೋಧ ವ್ಯಕ್ತವಾಗಬಹುದು. ಅದನ್ನು ನಾವು ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.