
ಮಂಗಳೂರು(ನ.26): ಸೇನಾಧಿಕಾರಿ ಎಂದು ಪರಿಚಯ ಹೇಳಿಕೊಂಡು ಉದ್ಯೋಗ ಕೊಡಿಸುತ್ತೇನೆ ಎಂದು ಪೊಳ್ಳು ಭರವಸೆ ನೀಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಅಫೀಶಿಯಲ್ ಯನಿಫಾರ್ಮ್ ಧರಿಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ನಕಲಿ ಭಾರತೀಯ ಸೇನಾಧಿಕಾರಿಯನ್ನು ಬಂಧಿಸಲಾಗಿದ್ದು, ಸುರತ್ಕಲ್ ಸಮೀಪದ ಶ್ರೀಕೃಷ್ಣ ಎಸ್ಟೇಟ್ ನಿವಾಸಿ ಮಂಜುನಾಥ ರೆಡ್ಡಿ ಬಂಧಿತ ಆರೋಪಿ. ಮಂಗಳೂರು ಉತ್ತರ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ಅಸಲಿ ಕೆಎಎಸ್ ಅಧಿಕಾರಿಗೆ ಸಿಕ್ಕಿಬಿದ್ದ ನಕಲಿ ಐಎಎಸ್!
ಸೇನಾ ಸಮವಸ್ತ್ರ ಧರಿಸಿ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ವಶದಲ್ಲಿದ್ದಾನೆ. ಸೇನಾ ಸಮವಸ್ತ್ರ, ನಕಲಿ ಗುರುತಿನ ಚೀಟಿಗಳು, ಸೇನೆಯ ಹೆಸರಿನಲ್ಲಿರುವ ನಕಲಿ ರಬ್ಬರ್ ಸ್ಟಾಂಪ್‌ನ್ನೂ ಪೊಲೀಸರು ವಶಕ್ಕ ಪಡೆದಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನಕಲಿ IAS ಆಯ್ತು, ಈಗ ನಕಲಿ CBI..!