ಹೆದ್ದಾರಿ ಹೊಂಡಕ್ಕೆ ಬಿದ್ದು ಬಲ ಗೈ ಮುರಿತ: ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ!

By Ravi Nayak  |  First Published Jul 25, 2022, 4:06 PM IST

ರಾ.ಹೆ.66ರ ನೇತ್ರಾವತಿ ಸೇತುವೆಯ ಮಧ್ಯಭಾಗದಲ್ಲಿ ನಿರ್ಮಾಣಗೊಂಡ ಬೃಹತ್‌ ಗಾತ್ರದ ಹೊಂಡಕ್ಕೆ ಬಿದ್ದು ವಿದ್ಯಾರ್ಥಿ ಕೈ ಮುರಿದುಕೊಂಡು ಶಸ್ತ್ರಚಿಕಿತ್ಸೆಗಾಗಿ ಒಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು

ಮಂಗಳೂರು (ಜು.25):  ರಾ.ಹೆ.66ರ ನೇತ್ರಾವತಿ ಸೇತುವೆಯ ಮಧ್ಯಭಾಗದಲ್ಲಿ ನಿರ್ಮಾಣಗೊಂಡ ಬೃಹತ್‌ ಗಾತ್ರದ ಹೊಂಡಕ್ಕೆ ಬಿದ್ದು ಸ್ಕೂಟರ್‌ ಸವಾರೆ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಬಲಗೈ ಮೂಳೆ ಮುರಿತಕ್ಕೊಳಗಾಗಿ, ಗಂಭೀರವಾಗಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಘಟನೆ ನಡೆದಿದೆ.  

Tap to resize

Latest Videos

ಘಟನೆಯಿಂದ ಮುಂದಿನ ತಿಂಗಳು ನಡೆಯಲಿರುವ ಯುಜಿಸಿ ಪರೀಕ್ಷೆ(UGC Exams) ಹಾಗೂ ಆಂತರಿಕ ಪರೀಕ್ಷೆ()Internal examination( ಬರೆಯಲು ಸಾಧ್ಯವಾಗದೆ ಶಿಕ್ಷಣದಿಂದ ಒಂದು ವರ್ಷವೇ ವಂಚಿತಳಾಗುವ ಆತಂಕಕ್ಕೆ ಒಳಗಾಗಿದ್ದಾರೆ.

ಕಾಲೇಜಿಗೆ ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ!
ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ(Konaje Mangaluru University) ಪರಿಸರ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ಎಂ.ಎಸ್ಸಿ ವಿದ್ಯಾರ್ಥಿನಿ, ಕೊಟ್ಟಾರ ನಿವಾಸಿ ನಿಶ್ಮಿತಾ(Nishmitha) (19) ಗಾಯಾಳು. ಜು.22 ರಂದು ಸಂಜೆ ಕೊಣಾಜೆ ಕಡೆಯಿಂದ ಮಂಗಳೂರಿಗೆ ತನ್ನ ಸ್ಕೂಟಿ(Scooty) ವಾಹನದಲ್ಲಿ ತೆರಳುವ ಸಂದರ್ಭ ಜೋರಾಗಿ ಮಳೆ(Heavy Rain falls)ಯಾಗುತಿತ್ತು. ರಾಷ್ಟ್ರೀಯ ಹೆದ್ದಾರಿ(Highway) 66ರ ನೇತ್ರಾವತಿ ಸೇತುವೆಯಲ್ಲಿ ಪ್ರಯಾಣಿಸುವ ಸಂದರ್ಭ ಸೇತುವೆ ಮಧ್ಯಭಾಗದಲ್ಲಿ ಬೃಹತ್‌ ಗಾತ್ರದ ಹೊಂಡಕ್ಕೆ ಸ್ಕೂಟಿ ಸಿಲುಕಿ ರಸ್ತೆಗೆ ಉರುಳಿದೆ. ಮಳೆಯಿಂದಾಗಿ ಹೊಂಡದ ಅರಿವು ಅವರಿಗೆ ಬಂದಿರಲಿಲ್ಲ. ರಸ್ತೆಯಲ್ಲಿ ಗಂಭೀರ ಗಾಯಗೊಂಡು ಬಿದ್ದ ವಿದ್ಯಾರ್ಥಿನಿಯನ್ನು ಕಂಡ ರಿಕ್ಷಾ ಚಾಲಕರೊಬ್ಬರು ತಕ್ಷಣ ಆಕೆಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ  ಬಲಗೈ ಮೂಳೆ ಮುರಿತಕ್ಕೊಳಗಾಗಿರುವುದು ಎಕ್ಸ್‌ ರೇ ಮೂಲಕ ಗೊತ್ತಾಗಿದೆ. ಅಲ್ಲದೆ ಕೈ ಹಾಗೂ ಮೈ ಪೂರ್ತಿ ಅಲ್ಲಲ್ಲಿ ಗಾಯಗಳಾಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಲಗೈ ಮೂಳೆ ಜೋಡಿಸಲು ಶಸ್ರ್ತಚಿಕಿತ್ಸೆ ನಡೆಸಿ ರಾಡನ್ನು ಅಳವಡಿಸಲಾಗಿದೆ. ಮುಂದಿನ ಆರು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

ಹೆದ್ದಾರಿ ಅವ್ಯವಸ್ಥೆಯೇ ಅಪಘಾತಕ್ಕೆ ಕಾರಣ: ವಿದ್ಯಾರ್ಥಿನಿ:

Udupi: ಚಾಕಲೇಟ್ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು!

ಅಂದು ಪ್ರಾಜೆಕ್ಟ್‌ ಕೆಲಸಗಳಿದ್ದುದರಿಂದ ಸ್ಕೂಟರನ್ನು ಕಾಲೇಜಿಗೆ ತಂದಿದ್ದೆನು. ಮನೆಗೆ ವಾಪಸ್ಸು ಮರಳುವ ಸಂದರ್ಭ ನೇತ್ರಾವತಿ ಸೇತುವೆಯಲ್ಲಿನ ಹೊಂಡ ಅರಿವಿಗೆ ಬಾರದೆ ಬಿದ್ದು ಕೈ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದೇನೆ. ಎಂ.ಎಸ್ಸಿ ಅಂತಿಮ ವರ್ಷವಾಗಿರುವುದರಿಂದ ಆಗಸ್ಟ್‌ ತಿಂಗಳಿನಲ್ಲಿ ಆಂತರಿಕ ಪರೀಕ್ಷೆಗಳಿವೆ. ಅದನ್ನು ಎದುರಿಸಲು ಸಾಧ್ಯವಿಲ್ಲ. ಜೊತೆಗೆ ಆ.12 ರಂದು ಯುಜಿಸಿ ಪರೀಕ್ಷೆಯೂ ಇರುವುದರಿಂದ ಭವಿಷ್ಯವೇ ಅತಂತ್ರವಾಗಿದೆ.

click me!