ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ಕ್ಷಣಗಣನೆ ಪ್ರಾರಂಭವಾಗಿದ್ದು, ಗುರುವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ 13 ದಿನಗಳ ಕಾಲ ದರ್ಶನ ಭಾಗ್ಯ ದೊರೆಯಲಿದೆ.
ಹಾಸನ (ಅ. 17): ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ಕ್ಷಣಗಣನೆ ಪ್ರಾರಂಭವಾಗಿದ್ದು, ಗುರುವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ 13 ದಿನಗಳ ಕಾಲ ದರ್ಶನ ಭಾಗ್ಯ ದೊರೆಯಲಿದೆ.
ಗುರುವಾರ ಮಧ್ಯಾಹ್ನ 12.30ಕ್ಕೆ ಶಾಸೊತ್ರೕಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಅ.29ರಂದು ಬಾಗಿಲು ಹಾಕಲಾಗುತ್ತದೆ. ಬಾಗಿಲು ತೆರೆಯುವ ಅ.17 ಮತ್ತು ಮುಚ್ಚುವ ಅ.29ರಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ.
11 ದಿನಗಳವರೆಗೆ ದಿನದ 24 ಗಂಟೆಯೂ ದರ್ಶನ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಮಧ್ಯಾಹ್ನ 2ರಿಂದ 3ಗಂಟೆವರೆಗೆ ದೇವರಿಗೆ ನೈವೇದ್ಯ ಇರುವ ಕಾರಣ ಈ ವೇಳೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.