ಹೊಲದಲ್ಲಿ ತಾಳೆ ತೋಟ ಮಾಡಿಕೊಂಡಿದ್ದೇನೆ. ಅದನ್ನು ನಾಶಪಡಿಸಿ ಕೆಲವರು ತೊಂದರೆ ಕೊಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಶಾಸಕರು ನನಗೆ ನ್ಯಾಯ ಕೊಡಿಸಬೇಕು ಎಂದು ಕಣ್ಣೀರಿಡುತ್ತಾ ವಿಷ ಸೇವಿಸಿದ ರೈತ.
ದಾವಣಗೆರೆ(ಜೂ.28): ಅನೇಕ ವರ್ಷದಿಂದ ಉಳುಮೆ ಮಾಡಿಕೊಂಡು ಬಂದ ಜಮೀನನ್ನು ಬೇರೊಬ್ಬರು ಅತಿಕ್ರಮಿಸಿಕೊಂಡ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲವೆಂದು ಬೇಸರಗೊಂಡ ರೈತನೊಬ್ಬ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ನಿವಾಸದೆದುರು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಹೊನ್ನಾಳಿ ತಾಲೂಕಿನ ಮಾದೇನಹಳ್ಳಿ ಗ್ರಾಮದ ರೈತ ಪರಮೇಶ್ವರಪ್ಪ, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದವರು. ಶಾಸಕರ ಹೊನ್ನಾಳಿಯ ನಿವಾಸದ ಬಳಿ ಆಗಮಿಸಿದ ಇವರು, ನನ್ನ ಜಮೀನನ್ನು ಬೇರೊಬ್ಬರು ಅತಿಕ್ರಮಿಸಿಕೊಂಡಿದ್ದಾರೆ. ಹೊಲದಲ್ಲಿ ತಾಳೆ ತೋಟ ಮಾಡಿಕೊಂಡಿದ್ದೇನೆ. ಅದನ್ನು ನಾಶಪಡಿಸಿ ಕೆಲವರು ತೊಂದರೆ ಕೊಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಶಾಸಕರು ನನಗೆ ನ್ಯಾಯ ಕೊಡಿಸಬೇಕು ಎಂದು ಕಣ್ಣೀರಿಡುತ್ತಾ ವಿಷ ಸೇವಿಸಿದರು.
ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ಆಂತರಿಕ ಸಂಘರ್ಷ ತೀವ್ರ!
ತಕ್ಷಣವೇ ಅಲ್ಲಿದ್ದವರು ಅವರಿಗೆ ಹೊನ್ನಾಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.