ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್ 2022-23 ಡೌನ್‌ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ.
ಚಾಮರಾಜನಗರ (ಜೂನ್ 22): ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂಬರ್‌ವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾ ಚಿತ್ರಸಹಿತ ತಮ್ಮ ಅಂಡ್ರ್ಯಾಡ್ ಮೊಬೈಲ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ‘‘ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್ 2022-23 ಡೌನ್‌ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ.
ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕಲು, ಬೆಳೆ ವಿಮೆ ಯೋಜನೆಯ ಸರ್ವೆ ನಂ. ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹಾಗೂ ಆರ್.ಟಿ.ಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್. ನಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸಲು ಬೆಳೆ ಆ್ಯಪ್ ಸಹಾಯಕವಾಗಲಿದೆ.
undefined
ಕೆಎಸ್‌ಆರ್‌ಟಿಸಿಯಲ್ಲಿ ಭಾರಿ ವಾಹನ ತರಬೇತಿಗೆ ಅರ್ಜಿ ಆಹ್ವಾನ
ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಸಿದ್ದಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್ 2022-23 ನಲ್ಲಿ ನಮೂದಿಸಬಹುದಾಗಿದೆ.
ಶತಶೃಂಗ ಪರ್ವತದಲ್ಲಿ ಯೋಗ ಮಾಡಿ ದಾಖಲೆ ಸೃಷ್ಠಿಸಿದ ಕೋಲಾರ
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಯ ಮಾಹಿತಿಯನ್ನು ಖಾಸಗಿ ನಿವಾಸಿಗಳ (ಪಿ.ಆರ್) ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾ ಚಿತ್ರದೊಂದಿಗೆ ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ನಮೂದಿಸಬಹುದಾಗಿದೆ.
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಪಾರ್ಕಿಂಗ್ ಪರದಾಟ!
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.