'ಮಹದಾಯಿ ಹೋರಾಟಗಾರರೊಬ್ಬ ಸಿಎಂ ಆಗಿದ್ದು ಸಂತಸ ತಂದಿದೆ'

Kannadaprabha News   | Asianet News
Published : Aug 02, 2021, 02:04 PM ISTUpdated : Aug 02, 2021, 02:15 PM IST
'ಮಹದಾಯಿ ಹೋರಾಟಗಾರರೊಬ್ಬ ಸಿಎಂ ಆಗಿದ್ದು ಸಂತಸ ತಂದಿದೆ'

ಸಾರಾಂಶ

* ಮಹದಾಯಿ ಯೋಜನೆ ಜಾರಿಗೆ ಸಿಎಂ ಬೊಮ್ಮಾಯಿ ಕ್ರಮಕೈಗೊಳ್ಳಬೇಕು *  ಬಿಜೆಪಿ ಅಧಿಕಾರಕ್ಕೆ ಬಂದರೆ ಯೋಜನೆಯನ್ನು 6 ತಿಂಗಳಲ್ಲಿ ಪೂರ್ಣಗೊಳಿಸುತ್ತೇನೆ ಎಂದಿದ್ದ ಬೊಮ್ಮಾಯಿ *  ಅಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಬೊಮ್ಮಾಯಿ  

ನರಗುಂದ(ಆ.02): ಉತ್ತರ ಕರ್ನಾಟಕ ಭಾಗದ ಮಹದಾಯಿ ಹೋರಾಟಗಾರರೊಬ್ಬರು ಮುಖ್ಯಮಂತ್ರಿಯಾಗಿದ್ದು ಈ ಭಾಗದ ಜನತೆಗೆ ಹರ್ಷ ತಂದಿದೆ ಎಂದು ರೈತ ಮುಖಂಡ ಚಂದ್ರಗೌಡ ಪಾಟೀಲ ಹೇಳಿದ್ದಾರೆ. 

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಕ್ತದಲ್ಲಿ ಪತ್ರ ಬರೆದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯೋಜನೆಯನ್ನು ಕೇವಲ 6 ತಿಂಗಳಲ್ಲಿ ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದರು. 

ನರಗುಂದ: 7ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ

ಸದ್ಯ ಕೇಂದ್ರ, ಗೋವಾ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು, ಹೀಗಾಗಿ ಯೋಜನೆ ಜಾರಿಗೆ ಕ್ರಮಕೈಗೊಳ್ಳಬೇಕು. ಅಂದು ಯೋಜನೆ ಜಾರಿಗೆ ಹೋರಾಟ ಮಾಡಿದ್ದ ವ್ಯಕ್ತಿ ಮುಖ್ಯಮಂತ್ರಿಯಾಗಿದ್ದು ಈ ಭಾಗದ ರೈತರಿಗೆ ದೊಡ್ಡ ಶಕ್ತಿ ತಂದಿದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಶಹರ ಘಟಕದ ಅಧ್ಯಕ್ಷ ವಿಠ್ಠಲ ಜಾಧವ, ಕರವೇ ಅಧ್ಯಕ್ಷ ನಭಿಸಾಬ್‌ ಕಿಲ್ಲೇದಾರ, ಚನ್ನು ನಂದಿ, ಜಗದೀಶ ಬೆಳವಟಿಗಿ,ವೀರಣ್ಣ ಸೋಪ್ಪಿನ,ಬಸವರಾಜ ಭೋಸ್ಲೆ ಸೇರಿದಂತೆ ಇತರರು ಇದ್ದರು.
 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ