Chikkamagaluru: ಡಿಸಿ ಕಛೇರಿಯ ಮಹಾತ್ಮ ಗಾಂಧಿ ಪ್ರತಿಮೆಗೆ ಮನವಿ ಕೊಟ್ಟ ರೈತ ಮುಖಂಡ!

By Govindaraj S  |  First Published Jan 10, 2024, 10:03 PM IST

ತಮ್ಮ ಮನವಿಗೆ ಯಾರು ಸ್ಪಂದಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮಹಾತ್ಮ ಗಾಂಧಿ ಪ್ರತಿಮೆಗೆ ರೈತ ಸಂಘದ ಮುಖಂಡ ಮನವಿಯನ್ನು ಸಲ್ಲಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಆವರಣದ ಒಳಗೆ ಇರುವ ರಾಷ್ಟ್ರಪಿತಾ ಮಹಾತ್ಮ ಗಾಂಧಿ ಪ್ರತಿಮೆಗೆ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮಂಜುನಾಥ್ ಮನವಿ ಸಲ್ಲಿಸಿದ್ದಾರೆ. 
 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.10): ತಮ್ಮ ಮನವಿಗೆ ಯಾರು ಸ್ಪಂದಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮಹಾತ್ಮ ಗಾಂಧಿ ಪ್ರತಿಮೆಗೆ ರೈತ ಸಂಘದ ಮುಖಂಡ ಮನವಿಯನ್ನು ಸಲ್ಲಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಆವರಣದ ಒಳಗೆ ಇರುವ ರಾಷ್ಟ್ರಪಿತಾ ಮಹಾತ್ಮ ಗಾಂಧಿ ಪ್ರತಿಮೆಗೆ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮಂಜುನಾಥ್ ಮನವಿ ಸಲ್ಲಿಸಿದ್ದಾರೆ. 

Tap to resize

Latest Videos

undefined

ಪಹಣಿ ತಿದ್ದುಪಡಿ ಬಗ್ಗೆ ಹಲವು ಬಾರಿ ಮನವಿ: ಕಂದಾಯ ಇಲಾಖೆಯ ಪಹಣಿ ತಿದ್ದುಪಡಿ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರು ಕ್ಯಾರೇ ಎನ್ನದ ಜಿಲ್ಲಾಡಳಿತದ ಬಗ್ಗೆ ಅಸಮಾಧಾನ ಗೊಂಡ ರೈತ ಮುಖಂಡ ಮಂಜುನಾಥ್ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಒಳಗಿರುವ ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಆದರೆ ಗಾಂಧೀಜಿ ಪ್ರತಿಮೆ ಬಳಿ ತೆರಳಲು ಮಂಜುನಾಥ್ ಅವರಿಗೆ ಪೊಲೀಸರು ಅವಕಾಶ ಕೊಡದ ಕಾರಣ ಕೆಲಕಾಲ ಹೈಡ್ರಾಮ ಸಹಾ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಿತು. ಕೊನೆಗೆ ಕೆಲಕಾಲ ಗಾಂಧಿ ಪ್ರತಿಮೆ ಬಳಿ ನಿಂತು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲು ಅನುವು ಮಾಡಿಕೊಡಲಾಯಿತು. 

ರೆಸಾರ್ಟ್‌ನಲ್ಲಿ ಮಾಜಿ ಸಿಎಂ ಎಚ್‌ಡಿಕೆ ತಂತ್ರಗಾರಿಕೆ: ರಾಜಕೀಯ ಲೆಕ್ಕಚಾರದಲ್ಲಿ ಕುಮಾರಸ್ವಾಮಿ!

ಜನತಾದರ್ಶನ ಒಂದು ಬೋಗಸ್ ಕಾರ್ಯಕ್ರಮ: ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಪಹಣಿ ದೋಷಮುಕ್ತ ರಾಜ್ಯ ಮಾಡುತ್ತೆವೆ ಎನ್ನುತ್ತಾರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆದರೆ ಅದು ಸಾಧ್ಯವಿಲ್ಲ, ಅಧಿಕಾರಿಗಳು ಅದಕ್ಕೆ ಬಿಡುವುದಿಲ್ಲ ಎಂದರು. ರಾಜ್ಯ ಸರ್ಕಾರದ ಜನತಾದರ್ಶನ ಒಂದು ಬೋಗಸ್ ಕಾರ್ಯಕ್ರಮ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮಂಜುನಾಥ್ ಅವರಿಂದ ಮನವಿ ಸ್ವೀಕರಿಸಿ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

click me!