Haveri: ರಸ್ತೆಯಲ್ಲಿ ಅಡ್ಡ ಮಲಗಿ ವಿಭಿನ್ನ ಪ್ರತಿಭಟನೆ ಮಾಡಿದ ರೈತ ಮುಖಂಡರು

By Govindaraj SFirst Published Nov 2, 2022, 6:46 PM IST
Highlights

ರಸ್ತೆಯಲ್ಲಿ ಮಲಗಿ ಸರ್ಕಾರದ ವಿರುದ್ದ ರೈತ ಮುಖಂಡರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಇಂದು ಮಧ್ಯಾಹ್ನ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಬಳಿ ಈ ವಿಶಿಷ್ಟ ಪ್ರತಿಭಟನೆ ನಡೆಯಿತು. 

ಹಾವೇರಿ (ನ.02): ರಸ್ತೆಯಲ್ಲಿ ಮಲಗಿ ಸರ್ಕಾರದ ವಿರುದ್ದ ರೈತ ಮುಖಂಡರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಇಂದು ಮಧ್ಯಾಹ್ನ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಬಳಿ ಈ ವಿಶಿಷ್ಟ ಪ್ರತಿಭಟನೆ ನಡೆಯಿತು. ಹಲಗೇರಿ ಗ್ರಾಮದ ಬಳಿ ಹಾದು ಹೋಗಿರುವ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ತಗ್ಗು ಗುಂಡಿಗಳು ಬಿದ್ದಿದ್ದು, ದುರಸ್ತಿಗೆ ರೈತ ಸಂಘಟನೆ ಮುಖಂಡರು ಗುಂಡಿಯಲ್ಲಿ ಮಲಗಿ ಸರ್ಕಾರ ಗಮನ ಸೆಳೆಯಲು ವಿಶೇಷ ಪ್ರತಿಭಟನೆ ನಡೆಸಿದರು. 

ಹಲಗೇರಿ ಗ್ರಾಮದ ಪ್ರಮುಖ ರಸ್ತೆಯಾಗಿರುವ ರಾಜ್ಯ ಹೆದ್ದಾರಿ ಮೂಲಕ ನಿತ್ಯವೂ ಸಾವಿರಾರು ವಾಹನಗಳ ಓಡಾಡುತ್ತವೆ. ಅಲ್ಲದೇ ಈ ಮಾರ್ಗದ ಮೂಲಕ ಉತ್ತರಕನ್ನಡ, ಮಂಗಳೂರು, ಶಿವಮೊಗ್ಗ ಜಿಲ್ಲೆಯ ಸಂಪರ್ಕವನ್ನು ಕಲ್ಪಿಸುವ ರಸ್ತೆಯಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ಗುಂಡಿಗಳು ಬಿದ್ದಿವೆ. ಆದರೆ ಸರ್ಕಾರದ ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಕಣ್ಣಿಗೆ ಈ ರಸ್ತೆ ಕಾಣುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಈ ರಾಜ್ಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನ.8ರಂದು ಬೃಹತ್ ಜನಸಂಕಲ್ಪ ಸಮಾವೇಶಕ್ಕೆ ಬಿಜೆಪಿ ಸಜ್ಜು: ತವರು ಜಿಲ್ಲೆಯಲ್ಲಿ ರಣಕಹಳೆ ಮೊಳಗಿಸಲು ಸಜ್ಜಾದ ಸಿಎಂ

ವೈಜ್ಞಾನಿಕ ಬೆಲೆ ಸಿಗುವ ವರೆಗೂ ಪ್ರತಿಭಟನೆ: ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನೀಡುವ ವರೆಗೂ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಏಳುವ ಪ್ರಶ್ನೆಯೇ ಇಲ್ಲ. ಈ ಬೇಡಿಕೆಗಳ ವಿಚಾರದಲ್ಲಿ ಸರ್ಕಾರದ ಭರವಸೆಗಳನ್ನು ಕೇಳಿ ಬೇಸತ್ತಿದ್ದು ಈ ಬಾರಿ ಸರ್ಕಾರದಿಂದ ಸ್ಪಷ್ಟಆದೇಶ ಬರುವವರೆಗೂ ಹಗಲು-ರಾತ್ರಿ ಧರಣಿ ಮುಂದುವರಿಸುವುದಾಗಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಸ್ಪಷ್ಟಪಡಿಸಿದ್ದಾರೆ. ಇಡೀ ದಿನ ಧರಣಿ ನಡೆಸಿದ ರೈತರು, ರಾತ್ರಿ ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡಿದ್ದರು. 

ಮಂಗಳವಾರ ಬೆಳಗ್ಗೆಯಿಂದ ಧರಣಿ ಆರಂಭಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನೆ ಕೈ ಬಿಡುವಂತೆ ಮಾಡಿದ ಮನವಿ ತಿರಸ್ಕರಿಸಿ ಬೇಡಿಕೆ ಈಡೇರಿಸುವವರೆಗೂ ಧರಣಿ ನಡೆಯಲಿದೆ ಎಂಬ ಸ್ಪಷ್ಟಸಂದೇಶವನ್ನು ಸರ್ಕಾರಕ್ಕೆ ರವಾನಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ಹಾಗೂ ಶಾಸಕ ಅಮೃತ ದೇಸಾಯಿ, ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಪ್ರಸಕ್ತ ಸಾಲಿಗೆ ಕಬ್ಬು ದರ ನಿಗದಿ ಕುರಿತು ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ಹೀಗಾಗಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ಆದರೆ ಸಚಿವರ, ಶಾಸಕರ ಮನವಿ ತಿರಸ್ಕರಿಸಿದ ಹೋರಾಟಗಾರರು, ಸತತ ನಾಲ್ಕು ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಹಲವು ಬಾರಿ ಸಭೆ ನಡೆಸಿದ್ದರೂ ಪ್ರಯೋಜನವಾಗಿಲ್ಲ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದರು. ಆದರೆ ಇನ್ನೂ ನೀಡಿಲ್ಲ. ಕಬ್ಬು ದರವನ್ನು ವೈಜ್ಞಾನಿಕವಾಗಿ ಹೆಚ್ಚಿಸಬೇಕು. ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಹಣ ಬಿಡುಗಡೆ ಸೇರಿ ಬೇಡಿಕೆಗಳ ಬಗ್ಗೆ ಸರ್ಕಾರ ಸ್ಪಷ್ಟತೀರ್ಮಾನ ಕೈಗೊಳ್ಳುವವರೆಗೂ ಹೋರಾಟ ಹಿಂದಕ್ಕೆ ಪಡೆಯುವುದಿಲ್ಲ ಎಂದು ಸಂಘದ ಕುರುಬೂರು ಶಾಂತಕುಮಾರ ಸ್ಪಷ್ಟಪಡಿಸಿದರು.

ಹಾನಗಲ್ ಕ್ಷೇತ್ರದವರು ಎಂದರೆ ಸರ್ಕಾರಕ್ಕೆ ಮಲತಾಯಿ ಮಕ್ಕಳು ಇದ್ದ ಹಾಗೆ: ಶಾಸಕ ಶ್ರೀನಿವಾಸ್ ಮಾನೆ

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್‌ ಆಯುಕ್ತ ಲಾಬೂರಾಮ, ಜಿಪಂ ಸಿಇಒ ಡಾ. ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ರೈತರು, ಅಧಿಕಾರಿಗಳು, ಇತರರು ಇದ್ದರು. ಮಂಗಳವಾರ ರೈತರು ಸರ್ಕಾರದ ಗಮನ ಸೆಳೆಯಲು ಕಚೇರಿ ಆವರಣದಲ್ಲಿಯೇ ಉರುಳು ಸೇವೆ ಮಾಡಿದ ಘಟನೆಯೂ ನಡೆಯಿತು.

click me!