ಭೀಕರ ಪ್ರವಾಹ: ಬೆಳೆಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿ

By Kannadaprabha NewsFirst Published Jan 23, 2020, 7:22 AM IST
Highlights

ಬೆಳೆಗಳು ಬೆಣ್ಣಿಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹಕ್ಕೆ ಬೆಳೆ ಹಾನಿ| ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಸೇನಾ ಸದಸ್ಯ ಸಂಗಪ್ಪ ಶಾನವಾಡ ಒತ್ತಾಯ| ಸರ್ಕಾರ ನದಿ ಹಾಗೂ ಹಳ್ಳದ ಪ್ರವಾಹಕ್ಕೆ ಬೆಳೆ ಹಾನಿ ಮಾಡಿಕೊಂಡ ರೈತರ ಪ್ರತಿ ಎಕರೆಗೆ 1 ಲಕ್ಷ ಪರಿಹಾರ|

ನರಗುಂದ(ಜ.23): ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗಳು ಬೆಣ್ಣಿಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹಕ್ಕೆ ತಾಲೂಕಿನ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಅನುಭವಿಸಿದ್ದು, ಸರ್ಕಾರ ಈ ಎಲ್ಲ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ತಾಲೂಕಿನ ಮೂಗನೂರ ಗ್ರಾಮದ ರೈತ ಸೇನಾ ಸದಸ್ಯ ಸಂಗಪ್ಪ ಶಾನವಾಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

1651ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ವೇದಿಕೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನರಗುಂದ ತಾಲೂಕಿನ ಮಲಪ್ರಭಾ ನದಿ ಹಾಗೂ ಬೆಣ್ಣಿಹಳ್ಳಕ್ಕೆ 2018ರ ಆಗಸ್ಟ ಮತ್ತು ಅಕ್ಟೋಬರ್‌ ತಿಂಗಳಲ್ಲಿ 2 ಬಾರಿ ನದಿ ಹಾಗೂ ಹಳ್ಳದ ಪಕ್ಕದ ಜಮೀನುಗಳಿಗೆ ಪ್ರವಾಹ ಬಂದು ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಗೋವಿನ ಜೋಳ, ಬಿಟಿ ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಮುಂತಾದ ಬೆಳೆಗಳು ಸಂಪೂರ್ಣ ಹಾಳಾಗಿ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಸರ್ಕಾರ ನದಿ ಹಾಗೂ ಹಳ್ಳದ ಪ್ರವಾಹಕ್ಕೆ ಬೆಳೆ ಹಾನಿ ಮಾಡಿಕೊಂಡ ರೈತರ ಪ್ರತಿ ಎಕರೆಗೆ 1ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರೈತ ಸೇನಾ ಸಂಘಟನೆ ಕೋಶಾಧ್ಯಕ್ಷ ಎಸ್‌.ಬಿ. ಜೋಗಣ್ಣವರ ಮಾತನಾಡಿ, ರಾಜ್ಯದ ಉತ್ತರ ಕರ್ನಾಟಕ ಭಾಗದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಬಂಡಾಯ ನೆಲದಲ್ಲಿ ಮಹದಾಯಿ ಹೋರಾಟಗಾರರು ಕಳೆದು 4 ವರ್ಷಗಳಿಂದ ವರ್ಷಗಳಿಂದ ಮಹದಾಯಿ ನೀರಿಗಾಗಿ ನಿರಂತರ ಹೋರಾಟ ಮಾಡಿದರೂ ಕೂಡ ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಕಾರ್ಯಕ್ರಮಕ್ಕೆ ಬಂದಾಗ ಈ ಬಗ್ಗೆ ಯಾವುದೇ ರೀತಿ ಹೇಳಿಕೆ ನೀಡಿದೆ ಈ ಭಾಗದ ರೈತರಿಗೆ ಅನ್ಯಾಯ ಮಾಡಿ ಗೋವಾ ರಾಜ್ಯದವರ ಪರವಾಗಿ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಅಡಿಯಪ್ಪ ಕೋರಿ, ಆನಂದ ತೊಂಡಿಹಾಳ, ವಿಜಯ ಕೋತಿನ, ಮಲ್ಲಪ್ಪ ಗೋನಾಳ, ಎ.ಪಿ. ಪಾಟೀಲ, ಬಸವರಾಜ ಐನಾಪೂರ, ಅರ್ಜುನ ಮಾನೆ, ಮಲ್ಲೇಶಪ್ಪ ಅಣ್ಣಿಗೇರಿ, ಸುಭಾಸ ಗಿರಿಯಣ್ಣವರ, ವೆಂಕಪ್ಪ ಹುಜರತ್ತಿ, ಹನಮಂತ ಸರನಾಯ್ಕರ, ವಾಸು ಚವ್ಹಾಣ, ಯಲ್ಲಪ್ಪ ಗುಡದೇರಿ, ಮಾರುತಿ ಬಡಿಗೇರ, ಬಸವ್ವ ಪೂಜಾರ, ಮಹಾದೇವಪ್ಪ ಐನಾಪೂರ, ಮಂಜುಳಾ ಸರನಾಯ್ಕರ, ಮಲ್ಲಪ್ಪ ಐನಾಪೂರ, ಕೆ.ಎಚ್‌. ಮೊರಬದ, ನಾಗರತ್ನ ಸವಳಬಾವಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಈರಣ್ಣ ಗಡಗಿ, ಸೋಮಲಿಂಗಪ್ಪ ಆಯಿಟ್ಟಿ ಸೇರಿದಂತೆ ಮುಂತಾದವರು ಇದ್ದರು.
 

click me!