ಸಿಡಿಲು ಬಡಿದು ರೈತ ಮಹಿಳೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಕೊಂಚಾವರಂ ಗಡಿಪ್ರದೇಶದ ಶಿವರೆಡ್ಡಿಪಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಅವಘಡ ನಡೆದಿದೆ.
ಕಲಬುರಗಿ (ಏ.27): ಸಿಡಿಲು (Thunderbolt) ಬಡಿದು ರೈತ ಮಹಿಳೆಯೊಬ್ಬರು (Farmer Woman) ದಾರುಣವಾಗಿ ಸಾವಿಗೀಡಾದ (Died) ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಕೊಂಚಾವರಂ ಗಡಿಪ್ರದೇಶದ ಶಿವರೆಡ್ಡಿಪಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಅವಘಡ ನಡೆದಿದೆ. ನಾಗಮಣಿ ಎನ್ನುವ 30 ವರ್ಷದ ಮಹಿಳೆಯೇ ಸಿಡಿಲಿಗೆ ಬಲಿಯಾದ ದುರ್ದೈವಿ. ಬುಧವಾರ ಸಂಜೆ 4ಗಂಟೆ ಸುಮಾರಿಗೆ ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿದ್ದು, ಈ ಸಂದರ್ಭದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಈ ಮಹಿಳೆ ಮೇಲೆ ಸಿಡಿಲು ಬಿದ್ದಿದೆ.
ಘಟನೆಯಲ್ಲಿ ರೈತ ಮಹಿಳೆ ನಾಗಮಣಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಿಂಚಿನ ಆರ್ಭಟ ಮಳೆ ಸುರಿದ ಪರಿಣಾಮವಾಗಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೊಂಚಾವರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರಿಕ್ಷೆ ನಡೆಸಲಾಗಿದ್ದು, ಈ ಕುರಿತು ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Rains: ಕರ್ನಾಟಕದ ಹಲವೆಡೆ ವರುಣನ ಅಬ್ಬರ: ನಾಲ್ಕು ಮಂದಿ ಬಲಿ
ಸಿಡಿಲು ಬಡಿದು ಇಬ್ಬರು ಬಲಿ: ಕಲ್ಯಾಣ ಕರ್ನಾಟಕದ (Kalyana Karnataka) ಕೆಲಭಾಗಗಳಲ್ಲಿ ಶುಕ್ರವಾರ ಬೇಸಿಗೆ ಮಳೆಯಾಗಿದ್ದು (Rain) ಬಾಲಕ ಸೇರಿ ಇಬ್ಬರು ಸಿಡಿಲಿಗೆ (Lightning Strike) ಬಲಿಯಾಗಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಂತ್ರಪಳ್ಳಿ ಗ್ರಾಮದ ಬಾಲಕ ನಾಗರಾಜ(11) ಹೊಲಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ (Death). ಕಲಬುರಗಿ ಜಿಲ್ಲೆ ರೇವನೂರ ಗ್ರಾಮದಲ್ಲಿರುವ ತನ್ನ ಜಮೀನಿನಲ್ಲಿ ಶುಕ್ರವಾರ ಸಂಜೆ ಶೇಂಗಾ ಬಿಡಿಸುತ್ತಿದ್ದ ರೈತ ಮಹಾದೇವಪ್ಪ(44) ಸಿಡಿಲಿಗೆ ಬಲಿಯಾಗಿದ್ದಾರೆ.
ಬಿರುಗಾಳಿ, ಆಲಿಕಲ್ಲು ಮಳೆಗೆ ನೆಲಕ್ಕುರುಳಿದ ಕೋಳಿ ಫಾರ್ಮ್ ಶೆಡ್‌ಗಳು: ಬಿರುಗಾಳಿ ಜತೆ ಆಲಿಕಲ್ಲು ಮಳೆ (Rain) ಸುರಿದ ಪರಿಣಾಮ ಹತ್ತಕ್ಕೂ ಹೆಚ್ಚು ಕೋಳಿ ಫಾರ್ಮ್ ಶೆಡ್‌ಗಳು ನೆಲಕ್ಕುರುಳಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದ ಘಟನೆ ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಜರುಗಿದೆ. ದೇವರಮನಿ ಹೊನ್ನೂರ ಸ್ವಾಮಿ, ಹೋಗಪ್ಪ, ಸಂಪತ್‌ಕುಮಾರ್ ಹಾಗೂ ಮಾರುತಿ ಎಂಬವರಿಗೆ ಸೇರಿದ ಕೋಳಿ ಫಾಮ್‌ರ್‍ನಲ್ಲಿ 35 ಸಾವಿರಕ್ಕೂ ಹೆಚ್ಚು ಕೋಳಿಗಳನ್ನು ಸಾಕಲಾಗಿತ್ತು. ದಿಢೀರನೆ ಸುರಿದ ಆಲಿಕಲ್ಲು ಮಳೆಗೆ ಶೆಡ್‌ಗಳೆಲ್ಲಾ ಸಂಪೂರ್ಣವಾಗಿ ನಾಶವಾಗಿವೆ.
Karnataka Rains: ಕರ್ನಾಟಕದಲ್ಲಿ ಮುಂದಿನ 4 ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ..!
ಮೂರು ಸಾವಿರಕ್ಕೂ ಹೆಚ್ಚು ಕೋಳಿಗಳು(Chicken) ಸತ್ತಿವೆ ಹಾಗೂ ಶೆಡ್‌ಗೆ ಹಾನಿಯಾಗಿದೆ. ಶೆಡ್‌ಗಳ ನಿರ್ಮಾಣಕ್ಕೆಂದು ಸಾಕಷ್ಟುಹಣ ಖರ್ಚು ಮಾಡಲಾಗಿತ್ತು, ಭಾರಿ ಪ್ರಮಾಣದಲ್ಲಿ ನಷ್ಟಸಂಭವಿಸಿದೆ. ರೈತರಿಗೆ ಧೈರ್ಯ ತುಂಬಲು ಸರ್ಕಾರ ಆರ್ಥಿಕ ಸಹಾಯ ಮಾಡಬೇಕೆಂದು ಕೋಳಿ ಸಾಕಣೆದಾರರಾದ ಸಂಪತ್‌ಕುಮಾರ್ ಆಗ್ರಹಿಸಿದರು. ಘಟನಾ ಸ್ಥಳಕ್ಕೆ ಕುರುಗೋಡು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.