ಪಿಎಂ ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಅನುಕೂಲ: ಶಾಸಕ ಜನಾರ್ದನ ರೆಡ್ಡಿ

By Kannadaprabha News  |  First Published Jun 20, 2024, 5:42 PM IST

ಪಿಎಂ ಕಿಸಾನ್ ಸಮ್ಮಾನ್ ನಿಧಿಯು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಗಂಗಾವತಿಯ 15376 ರೈತರು ₹52 ಕೋಟಿಯಷ್ಟು ಪ್ರಯೋಜನ ಪಡೆದಿದ್ದಾರೆ. ದೇಶದಲ್ಲಿ 11 ಕೋಟಿಗೂ ಹೆಚ್ಚು ರೈತರು ಇದರ ಸದುಪಯೋಗ ಪಡೆದಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. 
 


ಗಂಗಾವತಿ (ಜೂ.20): ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಇಲ್ಲಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡುವ ಮತ್ತು ಕೃಷಿ ಸಖಿಯರಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಗಂಗಾವತಿಯ 15376 ರೈತರು ₹52 ಕೋಟಿಯಷ್ಟು ಪ್ರಯೋಜನ ಪಡೆದಿದ್ದಾರೆ. ದೇಶದಲ್ಲಿ 11 ಕೋಟಿಗೂ ಹೆಚ್ಚು ರೈತರು ಇದರ ಸದುಪಯೋಗ ಪಡೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತು ಪಶು ಸಖಿಯರು ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಕೃಷಿಕರ ಉನ್ನತಿಗೆ ಶ್ರಮಿಸಬೇಕೆಂದು ತಿಳಿಸಿದರು. ಡ್ರೋಣ್ ಸಖಿಯರು ಡ್ರೋಣ್ ತಂತ್ರಜ್ಞಾನವನ್ನು ರೈತರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ತಲುಪಿಸಬೇಕೆಂದು ತಿಳಿಸಿದರು.

Latest Videos

undefined

ಮುಖ್ಯ ಅತಿಥಿಯಾಗಿದ್ದ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಪ್ರಧಾನಮಂತ್ರಿಗಳು ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, 10ನೇ ತರಗತಿ ಪಾಸಾದ ಯುವತಿಯವರಿಗೆ ಗ್ರಾಮೀಣ ಪ್ರದೇಶದಲ್ಲಿ ಪಶು ಸಖಿಯರಾಗಿ ಮತ್ತು ಕೃಷಿ ಸಖಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚೆನ್ನಾಗಿ ಕಾರ್ಯನಿರ್ವಹಿಸುವ ಸಖಿಯರಿಗೆ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕೆಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರ: ಸಂಸದ ಸುಧಾಕರ್

ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲ ಮತ್ತು ಕೃಷಿ ಮಹಾವಿದ್ಯಾಲಯ ಗಂಗಾವತಿಯ ವಿಶೇಷಾಧಿಕಾರಿ ಡಾ. ವಿಶ್ವನಾಥ ಜೆ. ಮಾತನಾಡಿದರು. ಪ್ರಾಸ್ತಾವಿಕವಾಗಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಾಘವೇಂದ್ರ ಎಲಿಗಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ. ಕವಿತಾ ಉಳ್ಳಿಕಾಶಿ, ಡಾ. ಜ್ಯೋತಿ ಆರ್., ಜೆ. ರಾಧಾ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳಾದ ಜಿ. ನಾರಪ್ಪ, ಶೃತಿ ಹಾಗೂ ಫಕೀರಪ್ಪ ಅರಭಾಂವಿ ಭಾಗವಹಿಸಿದ್ದರು.

click me!