ರಾಜ್ಯದಲ್ಲಿ ಭೀಕರ ಬರ ಇರುವ ಹಿನ್ನೆಲೆಯಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅಧಿವೇಶನ ಮುಗಿಯುವವರೆಗೆ ನಮ್ಮ ಮನೆಯಲ್ಲೇ ಆತಿಥ್ಯ ಸ್ವೀಕರಿಸುವಂತೆ ರೈತ ಮುಖಂಡರು ಆಹ್ವಾನ ನೀಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಬರದ ನಡುವೆಯೇ ರಾಜ್ಯ ಸರ್ಕಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಶ್ರೀಶೈಲ ಮಠದ
ಬೆಳಗಾವಿ(ನ.11): ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ವಿಧಾನ ಮಂಡಲ ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಆತಿಥ್ಯ ನೀಡಲು ರೈತ ಮುಖಂಡರು, ರೈತರು ಮುಂದಾಗಿದ್ದಾರೆ.
ರಾಜ್ಯದಲ್ಲಿ ಭೀಕರ ಬರ ಇರುವ ಹಿನ್ನೆಲೆಯಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅಧಿವೇಶನ ಮುಗಿಯುವವರೆಗೆ ನಮ್ಮ ಮನೆಯಲ್ಲೇ ಆತಿಥ್ಯ ಸ್ವೀಕರಿಸುವಂತೆ ರೈತ ಮುಖಂಡರು ಆಹ್ವಾನ ನೀಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಬರದ ನಡುವೆಯೇ ರಾಜ್ಯ ಸರ್ಕಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿಗೆ ಊಟ, ಉಪಚಾರ, ವಸತಿ ವ್ಯವಸ್ಥೆಗೆ ಕೋಟ್ಯಂತರ ರೂಪಾಯಿ ವೆಚ್ಚವಾಗುತ್ತದೆ. ಈ ಆರ್ಥಿಕ ಹೊರೆ ತಗ್ಗಿಸಲು ಬೆಳಗಾವಿ ಜಿಲ್ಲೆಯ ರೈತ ಮುಖಂಡರು, ರೈತರು ತಮ್ಮ ಮನೆಗಳಲ್ಲೇ ಆತಿಥ್ಯ ನೀಡಲು ಮುಂದಾಗಿದ್ದಾರೆ.
ಬಿಜೆಪಿಯಲ್ಲಿ ಯಡಿಯೂರಪ್ಪಗೆ ಇದ್ದಷ್ಟು ಆಕರ್ಷಣೆ ಯಾರಿಗೂ ಇಲ್ಲ: ಸತೀಶ ಜಾರಕಿಹೊಳಿ
40 ಗ್ರಾಮಗಳಲ್ಲಿ ವ್ಯವಸ್ಥೆ:
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆತಿಥ್ಯ ನೀಡಲು ಬೆಳಗಾವಿ ತಾಲೂಕಿನ ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಕೋಳಿಕೊಪ್ಪ, ಧಾಮನೆ, ಕೆ.ಕೆ.ಕೊಪ್ಪ, ಮಜಗಾವಿ, ಮಚ್ಛೆ, ಹಿರೇಬಾಗೇವಾಡಿ, ಸಾಂಬ್ರಾ, ಬಸ್ಸಾಪುರ, ಅರಳೀಕಟ್ಟಿ, ಚಂದನಹೊಸೂರು, ಗಣಿಕೊಪ್ಪ, ಹೊನಗಾ, ಕಡೋಲಿ, ಅಂಬೇವಾಡಿ, ಉಚಗಾವಿ, ಪೀರನವಾಡಿ ಸೇರಿದಂತೆ 40 ಗ್ರಾಮಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. 500ಕ್ಕೂ ಅಧಿಕ ರೈತರು ಆತಿಥ್ಯದ ಹೊಣೆ ವಹಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಳಗಾವಿ ಅಧವೇಶನದ ಹಿನ್ನೆಲೆಯಲ್ಲಿ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಬೇಕು. ಹೊಟೇಲ್‌ಗಳಲ್ಲಿ ವಾಸ್ತವ್ಯ ಮಾಡದೇ ಜನಪ್ರತಿನಿಧಿಗಳು, ಅಧಿಕಾರಿಗಳು ರೈತರ ಮನೆಯಲ್ಲೇ ವಾಸ್ತವ್ಯ ಮಾಡಬೇಕು. ಬರದಿಂದ ರೈತರು ಎದುರಿಸುತ್ತಿರುವ ಸಂಕಷ್ಟ ಖುದ್ದು ನೋಡಬೇಕು. ರೈತರ ಸಮಸ್ಯೆಗಳ ಕುರಿತು ಅಧಿವೇಶನದ ವೇಳೆ ಚರ್ಚಿಸಿ, ಪರಿಹರಿಸಬೇಕು ಎಂದು ರೈತರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಮ್ಮ ಆತಿಥ್ಯ ಸ್ವೀಕರಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಫರ್ವೇಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯಿದೆ. ಅಧಿವೇಶನಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಬದಲು ಆ ಹಣ ಬರ ಪರಿಹಾರಕ್ಕೆ ಉಪಯೋಗಿಸಬೇಕು. ಅಧಿವೇಶನಕ್ಕೆ ಆಗಮಿಸುವ ಜನಪ್ರತಿನಿಧಿಗಳು, ಅಧಿಕಾರಿಗಳ ಆತಿಥ್ಯ ಸ್ವೀಕರಿಸಲು ನಾವು ಮುಂದಾಗಿದ್ದೇವೆ. ಇದರಿಂದಾಗಿ ಸರ್ಕಾರ ರೈತಾಪಿ ಜನರ ಸಮಸ್ಯೆ ತಿಳಿದುಕೊಳ್ಳಬಹುದಾಗಿದೆ. ಅವರಿಗೆ ನಾವು ನಮ್ಮ ಮನೆಯಲ್ಲಿ ಆತಿಥ್ಯ ಸ್ವೀಕರಿಸಿ, ಉಚಿತವಾಗಿ ವಸತಿ, ಊಟದ ವ್ಯವಸ್ಥೆ ಮಾಡುತ್ತೇವೆ ಎಂದು ರೈತ ಮುಖಂಡ ಪ್ರಕಾಶ ನಾಯಿಕ ತಿಳಿಸಿದ್ದಾರೆ.