ಎಡದಂಡೆ ಮುಖ್ಯ ಕಾಲುವೆಗೆ ಏಪ್ರಿಲ್ 1ರಿಂದ 10ರವರೆಗೆ ಪ್ರತಿನಿತ್ಯ 2500 ಕ್ಯೂಸೆಕ್ಸ್ ನೀರು ಹರಿಸಲು ನಿರ್ಧಾರ| ಸಂಸದ ಕರಡಿ ಸಂಗಣ್ಣ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ರೈತರಿಂದ ಅಭಿನಂದನೆ|
ಮುನಿರಾಬಾದ್(ಏ.02): ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಏಪ್ರಿಲ್ 15ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಇಲಾಖೆಯ ಮುಖ್ಯ ಅಭಿಯಂತರ ಮಂಜಪ್ಪ ತಿಳಿಸಿದ್ದಾರೆ.
ಅವರು ಬುಧವಾರ ಇಲ್ಲಿನ ಕಾಡಾ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು. ನವೆಂಬರ್ 21ರಂದು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಎಡದಂಡೆ ಮುಖ್ಯ ಕಾಲುವೆಗೆ ಏಪ್ರಿಲ್ 1ರಿಂದ 10ರವರೆಗೆ ಪ್ರತಿನಿತ್ಯ 2500 ಕ್ಯೂಸೆಕ್ಸ್ ನೀರು ಹರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಆದರೆ ನೀರನ್ನು ಸದ್ಬಳಕೆ ಮಾಡುವ ಮೂಲಕ ಜಲಾಶಯದಲ್ಲಿ ಹೆಚ್ಚುವರಿ ನೀರು ಉಳಿದಿದ್ದು, ಇದಲ್ಲದೇ ಭದ್ರಾ ಜಲಾಶಯದಿಂದ 3 ಟಿಎಂಸಿ ನೀರನ್ನು ತುಂಗಭದ್ರಾ ಜಲಾಶಯಕ್ಕೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಎಡದಂಡೆ ಕಾಲುವೆಯಲ್ಲಿ ರೈತರ ಅನುಕೂಲಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುವುದು ಎಂದು ಮುಖ್ಯ ಅಭಿಯಂತರ ಮಂಜಪ್ಪ ತಿಳಿಸಿದರು.
undefined
ಕಳ್ಳತನ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು
ಸಿಎಂಗೆ ಸಂಸದ ಅಭಿನಂದನೆ:
ರೈತರ ಬೆಳೆ ರಕ್ಷಿಸಲು ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುವಂತೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದೆ. ಅವರು ನನ್ನ ಮನವಿಗೆ ಸ್ಪಂದಿಸಿ ಭದ್ರಾ ಜಲಾಶಯದಿಂದ ತುಂಗಭದ್ರಾ ಜಲಾಶಯಕ್ಕೆ 3 ಟಿಎಂಸಿ ನೀರು ಬಿಡುಗಡೆ ಮಾಡಿದ್ದಕ್ಕೆ ಸಂಸದ ಕರಡಿ ಸಂಗಣ್ಣ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಯವರನ್ನು ಅಭಿನಂದಿಸಿದ್ದಾರೆ.
ಬಸವನಗೌಡ ತುರ್ವಿಹಾಳ, ಶಾಸಕರಗಳಾದ ಬಸವರಾಜ ದಡೇಸಗೂರು, ಪರಣ್ಣ ಮುನವಳ್ಳಿ, ಮಾಜಿ ಶಾಸಕ ಕೆಸರಟ್ಟಿವೀರಪ್ಪ, ಬಿಜೆಪಿ ಮುಖಂಡರುಗಳಾದ ವಸಂತ ನಾಯಕ್, ಪ್ರದೀಪ್ ಹಿಟ್ನಾಳ, ಕಾರ್ಯಪಾಲಕ ಅಭಿಯಂತರರಾದ ನಾಗಭೂಷಣ ಉಪಸ್ಥಿತರಿದ್ದರು.