ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ

By Kannadaprabha News  |  First Published Jun 30, 2023, 8:17 AM IST

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತಡವಾಗಿ ಪ್ರಾರಂಭವಾಗಿದ್ದು, ರೈತರು, ಕೃಷಿ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಸದಾ ನಿಮ್ಮ ಬೆಂಬಲಕ್ಕಿದೆ ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.


  ಮಧುಗಿರಿ :  ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತಡವಾಗಿ ಪ್ರಾರಂಭವಾಗಿದ್ದು, ರೈತರು, ಕೃಷಿ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಸದಾ ನಿಮ್ಮ ಬೆಂಬಲಕ್ಕಿದೆ ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.

ಗುರುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಈ ಸಲ ಹಾಸನ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ತಡವಾಗಿ ಪ್ರಾರಂಭವಾಗಿದೆ. ಸರ್ಕಾರದಿಂದ ರೈತರಿಗೆ ಬೇಸಾಯಕ್ಕೆ ಅಗತ್ಯವಾಗಿ ಬೇಕಾದ ಬಿತ್ತನೆ ಬೀಜ ರಸಗೊಬ್ಬರ ಶೇಖರಣೆ ಮಾಡಲಾಗಿದೆ. ಪ್ರಸ್ತುತ ರೈತರು ಬೇಸಾಯದಲ್ಲಿ ತೊಡಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ, ಸಕಾಲಕ್ಕೆ ಬಿತ್ತನೆ ಬೀಜ ರಸಗೊಬ್ಬರ ಒದಗಿಸಲಾಗುವುದು ಎಂದರು.

Latest Videos

undefined

ತಾಲೂಕಿನಾದ್ಯಂತ ಕುಡಿವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಗ್ರಾಪಂಗಳಲ್ಲೂ ಅಗತ್ಯ ಕ್ರಮ ವಹಿಸಲಾಗಿದೆ. ಪಟ್ಟಣದಲ್ಲಿನ ಯುಜಿಡಿ ತ್ವರಿತ ಕಾಮಗಾರಿ ಕೈಗೊಳ್ಳಲು ಸಂಬಂಧಪಟ್ಟವರ ಬಳಿ ಚರ್ಚಿಸಿದ್ದು ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಇದೇ ವೇಳೆ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿ, ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಸಮಸ್ಯೆಗಳನ್ನು ಆದಷ್ಟುಬಗೆಹರಿಸಲಾಗುವುದು ಎಂದರು.

ಜಿಪಂ ಇಇ ಸುರೇಶ್‌ ರೆಡ್ಡಿ, ಡಿಡಿಪಿಐ ಮಂಜುನಾಥ್‌, ಡಿವೈಎಸ್‌ಪಿ ವೆಂಕಟೇಶ್‌ನಾಯ್ಡು, ತಾಪಂ ಇಓ ಲಕ್ಷಣ್‌, ಎಡಿಓ ಮಧುಸೂದನ್‌, ಕೃಷಿ ಅಧಿಕಾರಿ ಹನುಮಂತರಾಯಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೋಪಾಲಯ್ಯ, ಆದಿನಾರಾಯಣರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟರಂಗಾರೆಡ್ಡಿ , ತಾಲೂಕು ಸಂಘದ ಅಧ್ಯಕ್ಷ ಸಂಜಯ್‌ ಸೇರಿದಂತೆ ಇತರರಿದ್ದರು.

ಮಳೆಯ ಕೊರತೆಯಿಂದ ಜಲ ಮೂಲಗಳು ದಿನದಿಂದ ದಿನಕ್ಕೆ ಬರಿದು

ಬೆಂಗಳೂರು (ಜೂ.30): ಮುಂಗಾರು ಮಳೆಯ ಕೊರತೆಯಿಂದ ಜಲ ಮೂಲಗಳು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು, ರಾಜ್ಯದ ಕೆರೆಗಳಲ್ಲಿ ನೀರಿನ ಪ್ರಮಾಣ ಕಳೆದ ನಾಲ್ಕು ವರ್ಷಕ್ಕೆ ಹೋಲಿಕೆ ಮಾಡಿದರೆ ಅತ್ಯಂತ ಕನಿಷ್ಠಕ್ಕೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಮಳೆಯಾಗದೇ ಜಲಾಶಯಗಳಲ್ಲಿ ನೀರಿನ ಮಟ್ಟಕುಸಿಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಭೀತಿಯ ನಡುವೆ ಸಣ್ಣ ಪ್ರಮಾಣದ ನೀರಿನ ಸಂಗ್ರಹ ಮೂಲಗಳಾದ ಕೆರೆಗಳಲ್ಲಿಯೂ ಸಹ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದು ಕಳವಳ ಉಂಟುಮಾಡಿದೆ.

click me!