ಮೋದಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು: ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ

By Suvarna NewsFirst Published Dec 2, 2020, 3:01 PM IST
Highlights

ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು| ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ| ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ| ರೈತ ವಿರೋಧಿ ಕಾನೂನು ಹಿಂಪಡೆಯಲು ಒತ್ತಾಯ| 

ಹುಬ್ಬಳ್ಳಿ(ಡಿ.02): ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿ ಕಳಸಾ- ಬಂಡೂರಿ ಹೋರಾಟ ಸಮಿತಿ ಇಂದು(ಬುಧವಾರ) ನಗರದಲ್ಲಿ ಪ್ರತಿಭಟನೆ ನಡೆಸಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ರೈತರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. 

ಕಪ್ಪು ಬಟ್ಟೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ‌ ಕೂಗುವ ಮೂಲಕ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ. 

'ಮೋದಿ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ'

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಹೋರಾಟಗಾರರ ಜೊತೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಮಾತುಕತೆ ನಡೆಸಿ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್ ಪಡೆಯಲು ಮನವಿ ಮಾಡಲಾಗಿದೆ. 
 

click me!