Davanagere: ಪಹಣಿ ಬೆಲೆ ಹೆಚ್ಚಳ ವಿರೋಧಿಸಿ ರೈತರಿಂದ ಪ್ರತಿಭಟನೆ

By Sathish Kumar KH  |  First Published Jan 3, 2023, 7:28 PM IST

ಪಹಣಿ ಬೆಲೆ ಹೆಚ್ಚಳ ವಿರೋಧಿಸಿ ಮತ್ತು ಪ್ರತಿ ರೈತನಿಗೆ ವಾರ್ಷಿಕವಾಗಿ ಬೇಕಾದ ಪಹಣಿಗಳನ್ನು ಸಂಪೂರ್ಣ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ದಾವಣಗೆರೆ (ಜ.03): ಪಹಣಿ ಬೆಲೆ ಹೆಚ್ಚಳ ವಿರೋಧಿಸಿ ಮತ್ತು ಪ್ರತಿ ರೈತನಿಗೆ ವಾರ್ಷಿಕವಾಗಿ ಬೇಕಾದ ಪಹಣಿಗಳನ್ನು ಸಂಪೂರ್ಣ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ಇದೇ ಜನವರಿಯಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಪಹಣಿ ಬೆಲೆಯನ್ನು 15 ರಿಂದ 25 ರೂಗೆ ಹೆಚ್ಚಳ ಮಾಡಿರುವುದು ಖಂಡನೀಯ.ಕೂಡಲೇ ಬೆಲೆ ಹೆಚ್ಚಳ ಆದೇಶ ವಾಪಾಸು ಪಡೆಯಬೇಕೆಂದು ಆಗ್ರಹಿಸಿದರು. ಬೆಳೆ ವಿಮೆ, ಬೆಳೆಸಾಲ, ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಸೇರಿದಂತೆ ಅನೇಕ ಸರ್ಕಾರಿ ಸೌಲಭ್ಯ ಪಡೆಯಲು ಪ್ರತಿವರ್ಷ ಒಬ್ಬ ರೈತರಿಗೆ ಕನಿಷ್ಟ 40 ಪಹಣಿಗಳು ಬೇಕಾಗುತ್ತವೆ.ಇದರಿಂದ ಪ್ರತಿ ರೈತನಿಗೆ 1 ಸಾವಿರ ರೂ ಅನಾವಶ್ಯಕವಾಗಿ ವೆಚ್ಚವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ 40 ಪಹಣಿಗಳನ್ನು ಸಂಪೂರ್ಣ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿದರು.

Tap to resize

Latest Videos

ಕುಡಿವ ನೀರು ಸರಬರಾಜು ಕಾಮಗಾರಿ ಶೀಘ್ರ ಪೂರ್ಣ: ಶಾಸಕ ರೇಣುಕಾಚಾರ್ಯ

ಅರ್ಜಿ ಶುಲ್ಕ ಹೆಚ್ಚಳ ಹಿಂಪಡೆಯಿರಿ: ಜನ ಸಾಮಾನ್ಯರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅಟಲ್‌ಜಿ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಇದ್ದ 25 ರೂ ಶುಲ್ಕವನ್ನು ಕೂಡ 40 ರೂಗೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಇದರಿಂದ ಕಡುಬಡವ ಮತ್ತು ಮಧ್ಯವ ವರ್ಗದ ಜನರಿಗೆ ಕಷ್ಟವಾಗಲಿದೆ. ಈ ರೀತಿಯಲ್ಲಿ ಜನ ಸಾಮಾನ್ಯರಿಂದ ಸರ್ಕಾರ ಹಣ ಲೂಟಿ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಅಟಲ್ ಜಿ ಜನಸ್ನೇಹಿ ಕೇಂದ್ರದ ಅರ್ಜಿ ಶುಲ್ಕ ದರವನ್ನು ಕೂಡ 10 ರೂ.ಗೆ ಇಳಿಕೆ ಮಾಡಬೇಕೆಂದು ಆಗ್ರಹಿಸಿದರು.

 

Davanagere: ಶಾಮನೂರು ಶಿವಶಂಕರಪ್ಪ ಬಗ್ಗೆ ಹಗುರ ಮಾತು ಬೇಡ: ವೀರಶೈವ ಮಹಾಸಭಾ ಎಚ್ಚರಿಕೆ

ನಿರ್ಲಕ್ಷ್ಯ ಮಾಡಿದರೆ ಉಗ್ರ ಪ್ರತಿಭಟನೆ: ಸರ್ಕಾರ ತ್ವರಿತವಾಗಿ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ತೀವ್ರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಪ್ರಭಾರ  ತಹಶೀಲ್ದಾರ್ ನಾಗಲಿಂಗೇಶ್ವರ ಮತ್ತು ಉಪತಹಶೀಲ್ದಾರ್ ಶಕೀಲ್ ಅಹಮದ್ ಖಾನ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಗುಮ್ಮನೂರು ಬಸವರಾಜ್, ಶಿವಪುರ ಕೃಷ್ಣಪ್ಪ, ಹುಚ್ಚವ್ವನಹಳ್ಳಿ ಸಿದ್ದೇಶ್, ವಿ,ಎನ್.ಪ್ರಕಾಶ್, ಕೋಲ್ಕುಂಟೆ ಹುಚ್ಚೆಂಗಪ್ಪ,ಹೂವಿನ ಮಡು ನಾಗರಾಜ್, ಕೈದಾಳೆ ರವಿಕುಮಾರ್, ಲಕ್ಷ್ಮಣ್ ಇತರರು ಉಪಸ್ಥಿತರಿದ್ದರು.

click me!