ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಭಾರೀ ಆಕ್ರೋಶ

By Suvarna NewsFirst Published Aug 14, 2020, 7:58 AM IST
Highlights

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮನೆಗೆ ಮುತ್ತಿಗೆ ಹಾಕಲುಪ್ರಯತ್ನ ನಡೆದಿದ್ದು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ಹತೋಟಿಗೆ ತರಲಾಗಿದೆ. 

ಗೋಕಾಕ್ (ಆ.14) ‌: ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಪಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಗೋಕಾಕ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ, ನಂತರ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಗರದಲ್ಲಿ ನಡೆದಿದೆ. 

ನೂತನ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಜಿಲ್ಲೆಯ ನಾನಾ ಭಾಗಗಳಿಂದ ನೂರಾರು ರೈತರು ಆಗಮಿಸಿದ್ದರು. ಈ ವೇಳೆ ರೈತರು ಪ್ರತಿಭಟನೆ ನಡೆಸುತ್ತಾ ಸಚಿವ ರಮೇಶ್‌ ಜಾರಕಿಹೊಳಿ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆಗ ಪೊಲೀಸರು ಮಧ್ಯಸ್ಥಿಕೆ ವಹಿಸಿ, ತಡೆಯುವ ಯತ್ನ ಮಾಡಿದರು. ನಂತರ ರೈತ ಮುಖಂಡರನ್ನು ಮನವೊಲಿಸುವಲ್ಲಿ ಪೊಲೀಸ್‌ ಅಧಿಕಾರಿಗಳು ಕೊನೆಗೂ ಸಫಲರಾದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಾಲ್ಯ ಗೆಳೆಯನ ಸಾವಿಗೆ ಬಿಕ್ಕಿ-ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ

ಆದರೆ, ಮುಖಂಡರು ಇದಕ್ಕೆ ಜಗ್ಗಲಿಲ್ಲ. ನಂತರ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ರೈತ ಸಂಘದ ಕಾರ್ಯಕರ್ತರು, ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟರು. ಆಗ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಕಾರ್ಯಕರ್ತರನ್ನು ತಡೆಯುವ ಯತ್ನ ಮಾಡಿದರು. ಆಗ ರೈತರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ನಂತರ ರೈತ ಮುಖಂಡರನ್ನು ಮನವೊಲಿಸುವಲ್ಲಿ ಪೊಲೀಸ್‌ ಅಧಿಕಾರಿಗಳು ಕೊನೆಗೂ ಸಫಲರಾದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

click me!