Support Price For Paddy : ರೈತರಿಗೆಗುಡ್ ನ್ಯೂಸ್ : ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ

By Kannadaprabha News  |  First Published Dec 4, 2021, 6:27 AM IST
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟ 
  •  ಆಸಕ್ತ ರೈತರ ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಪ್ರಾರಂಭ

 ಚಿಕ್ಕಬಳ್ಳಾಪುರ(ಡಿ.04): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ (Paddy)  ಮಾರಾಟ ಮಾಡಲು ಇಚ್ಚಿಸುವ ಜಿಲ್ಲೆಯ ಆಸಕ್ತ ರೈತರ (Farmers)  ನೋಂದಣಿ ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಿದ್ದು, ಆಸಕ್ತ ರೈತರು ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲೂಕು ಕೇಂದ್ರದಲ್ಲಿ ತೆರೆದಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ (DC) ಆರ್‌.ಲತಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (Support Price) ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ ಗೆ 1,940 ಹಾಗೂ ಗ್ರೇಡ್‌-ಎ ಭತ್ತಕ್ಕೆ 1,960 ರು. ನಿಗದಿಗೊಳಿಸಲಾಗಿದೆ ಎಂದರು.

Tap to resize

Latest Videos

undefined

2 ಕಡೆ ಖರೀದಿ ಕೇಂದ್ರ:

ಸರ್ಕಾರದ ಸೂಚನೆಯಂತೆ 2021-22ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಂದ (Farmers) ಭತ್ತವನ್ನು ಖರೀದಿಸಲು ನಿರ್ಧರಿಸಲಾಗಿದೆ.. ಸರ್ಕಾರವು ನಿಗದಿಪಡಿಸಿರುವ ಗುಣಮಟ್ಟಕ್ಕೆ ಅನುಗುಣವಾಗಿ ಭತ್ತವನ್ನು ನೀಡಲು ಇಚ್ಚೆಯನ್ನು ವ್ಯಕ್ತಪಡಿಸುವ ಜಿಲ್ಲೆಯ ರೈತರ (Farmers) ನೊಂದಣೆ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗಿದೆ. ಜಿಲ್ಲೆಯ ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲೂಕಿನಲ್ಲಿ ಭತ್ತವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಬಾಗೇಪಲ್ಲಿ ತಾಲ್ಲೂಕಿನಲ್ಲಿ 1,896 ಹೆಕ್ಟೇರ್‌ ಮತ್ತು ಗೌರಿಬಿದನೂರು ತಾಲ್ಲೂಕಿನಲ್ಲಿ 353 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿದೆ ಎಂದರು.

ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಭತ್ತ ಬೆಳೆಯುವುದರಿಂದ ಆ ತಾಲೂಕುಗಳನ್ನು  ಹೊರತು ಪಡಿಸಿ ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಆಸಕ್ತ ರೈತರು ಆಧಾರ್‌ ಮತ್ತು ದಾಖಲೆಗಳ ಪ್ರತಿಯೊಂದಿಗೆ ಕೇಂದ್ರಗಳನ್ನು ಸಂಪರ್ಕಿಸಿ ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದು. ಜಿಲ್ಲೆಯ ಹೆಚ್ಚಿನ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
 
ಫೋರ್ಸ್‌ ಸಮಿತಿ

ರೈತರು ನೀಡುವ ಭತ್ತದ ಗುಣಮಟ್ಟ ಮತ್ತು ಪ್ರಮಾಣವನ್ನು ಪರಿಶೀಲಿಸಲು ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್‌ (tahasildar) ಅವರ ಅಧ್ಯಕ್ಷತೆಯಲ್ಲಿ ಟಾÓ್ಕ… ಪೋರ್ಸ್‌ ಸಮಿತಿ ಇರುತ್ತದೆ. ಈ ಸಮಿತಿಯಲ್ಲಿ ಕೃಷಿ, ಕಾನೂನು ಮತ್ತು ಮಾಪನ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಸದಸ್ಯರಿರುತ್ತಾರೆ. ಇವರು ಗುಣಮಟ್ಟವನ್ನು ಪರಿಶೀಲಿಸಿ ಭತ್ತ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರಗಳಿಂದ ಖರೀದಿಸಿದ ಭತ್ತವನ್ನು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಸಂಗ್ರಹಿಸಲಾಗುವುದು ಎಂದರು.

ಸಭೆಯಲ್ಲಿ ಕೃಷಿ  ಇಲಾಖೆಯ (Agriculture Department) ಜಂಟಿ ನಿರ್ದೇಶಕಿ ಎಲ್. ರೂಪ, ಆಹಾರ ಮತ್ತು ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ, ಬಾಗೇಪಲ್ಲಿ ತಾಲ್ಲೂಕು ತಹಸೀಲ್ದಾರ್‌ ದಿವಾಕರ್‌, ಶಿಡ್ಲಘಟ್ಟತಾಲ್ಲೂಕು ತಹಸೀಲ್ದಾರ್‌ ರಾಜೀವ, ಆಹಾರ ಮತ್ತು ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚೌಡೇಗೌಡ, ಕೃಷಿ ಮತ್ತು ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ರಾಮದಾಸ…, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಮಂಜುಳ, ಎಸ್‌ಡಬ್ಲ್ಯೂಸಿ ಜಿಲ್ಲಾ ವ್ಯವಸ್ಥಾಪಕಿ ಶಿಲ್ಪ, ವಿವಿಧ ತಾಲೂಕುಗಳ ಆಹಾರ ಶಿರಸ್ತೇದಾರ್‌ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಹಾಯವಾಣಿ ಆರಂಭ

ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ಮಾರಾಟ ಮಾಡಲು ಇಚ್ಚಿಸುವ ಜಿಲ್ಲೆಯ ರೈತರಿಗೆ ನೋಂದಣಿ ಹಾಗೂ ಮಾರಾಟದ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಸಮಸ್ಯೆಗಳು ಉಂಟಾದಲ್ಲಿ ಅಥವಾ ಹೆಚ್ಚಿನ ಮಾಹಿತಿಯ ಅಗತ್ಯವಿದ್ದಲ್ಲಿ 08156-277108 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಈ ಸಹಾಯವಾಣಿಯು ಕಚೇರಿ ಅವಧಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಕೋರಿದರು.

click me!