Tumakuru : ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ 18ಕ್ಕೆ ವಿಧಾನಸೌದ ಚಲೋ

By Kannadaprabha News  |  First Published Oct 14, 2022, 4:22 AM IST

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಅ.18ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದ್ದು ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ತಾಲೂಕಿನ ಬಗರ್‌ಹುಕುಂ ಸಾಗುವಳಿದಾರ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಜಿಲ್ಲಾ ಸಂಚಾಲಕ ಎಸ್‌.ಎನ್‌.ಸ್ವಾಮಿ ತಿಳಿಸಿದರು.


   ತಿಪಟೂರು (ಅ.14):ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಅ.18ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದ್ದು ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ತಾಲೂಕಿನ ಬಗರ್‌ಹುಕುಂ ಸಾಗುವಳಿದಾರ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಜಿಲ್ಲಾ ಸಂಚಾಲಕ ಎಸ್‌.ಎನ್‌.ಸ್ವಾಮಿ ತಿಳಿಸಿದರು.

ನಗರದ ರೈತ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್‌ಹುಕುಂ ಸಾಗುವಳಿ ರೈತರ ಗೋಳು ಹೇಳತೀರದಾಗಿದ್ದು ಯಾವುದೇ ವಿದ್ಯೆ, ಕೌಶಲ್ಯವಿಲ್ಲದೇ ಎರಡು ಹೊತ್ತಿನ ತುತ್ತಿಗಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ. ಸರ್ಕಾರದ ಅನುಮತಿಯೊಂದಿಗೆ, ಲಕ್ಷಾಂತರ ರೈತರು ಇದನ್ನೇ ಜೀವನಾಧಾರವೆಂದು ನಂಬಿ ಹಲವಾರು ವರ್ಷಗಳಿಂದ ಕರ್ನಾಟಕದ ಉದ್ದಗಲಕ್ಕೂ ಸಾಗುವಳಿ ಮಾಡುತ್ತಿದ್ದಾರೆ. ಉಪಯೋಗವಿಲ್ಲದೆ ಬೀಳು ಬಿದ್ದಿದ್ದ ಅರಣ್ಯದಂಚಿನ ಭೂಮಿ ಸೇರಿದಂತೆ ಸರ್ಕಾರಿ ಭೂಮಿಯನ್ನು ಹಗಲು ರಾತ್ರಿ ಬೆವರು ಸುರಿಸಿ, ಭೂಮಿ ಹಸನು ಮಾಡಿ, ಅದನ್ನು ಕೃಷಿಯೋಗ್ಯವನ್ನಾಗಿಸಿಕೊಂಡಿದ್ದಾರೆ. ಈ ರೈತರಿಗೆ ಇಲ್ಲಿಯವರೆಗೆ ಸರ್ಕಾರಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸಲು ವಿಫಲವಾಗಿವೆ. ಅಧಿಕಾರ ನಡೆಸಿದ ಎಲ್ಲಾ ಸರ್ಕಾರಗಳೂ ಬಡರೈತರಿಗೆ ಭೂಮಿಯ ಮೇಲಿನ ಹಕ್ಕನ್ನು ದೊರಕಿಸಿ ಕೊಡಲು ಯಾವ ಕಾಳಜಿಯನ್ನೂ ವಹಿಸಿಲ್ಲ. ಒಂದು ಅಂದಾಜಿನ ಪ್ರಕಾರ 12 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸರ್ಕಾರದ ಮುಂದೆ ಬಾಕಿ ಉಳಿದಿದೆ. ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ರೈತರು ಪದೇ ಪದೇ ಕಿರುಕುಳ ಅನುಭವಿಸುತ್ತಿದ್ದಾರೆ ಮತ್ತು ಭೂಮಿಯಿಂದ ಒಕ್ಕಲೆಬ್ಬಿಸುವ ಬೆದರಿಕೆ ಒಡ್ಡುತ್ತಿದ್ದಾರೆ. ಕಂದಾಯ ಸಚಿವರು ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಖಾಯಂ ಹಕ್ಕು ಪತ್ರ ನೀಡುವುದಿಲ್ಲವೆಂದು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಿದೆ. ಬದಲಿಗೆ ರೈತರು ಸಾಗುವಳಿ ಮಾಡುತ್ತಿರುವ ಭೂಮಿಗೆ ಶುಲ್ಕ ಪಡೆದು ನಿಶ್ಚಿತ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗುವುದು ಎಂದು ಹೇಳಿರ ಹೇಳಿಕೆ ರೈತ ವಿರೋಧಿಯಾಗಿದೆ. ಈಗಾಗಲೇ ನಿರುದ್ಯೋಗ, ಬಡತನದ ಬೇಗೆಯಿಂದ ಬಳಲುತ್ತಿರುವ ರೈತರಿಗೆ ಸರ್ಕಾರದ ನಿರ್ಧಾರದಿಂದ ಸಹನೆಯಕಟ್ಟೆಯೊಡೆದಿದೆ. ಬಗರ್‌ಹುಕುಂ ರೈತರಿಗೆ ನ್ಯಾಯ ಕೊಡಿಸಲೆಂದೆ ನಮ್ಮ ಸಂಘಟನೆ ವತಿಯಿಂದ ಅ.18ರÜಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಬಗರ್‌ಹುಕುಂ ಸಾಗುವಳಿದಾರ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.

Tap to resize

Latest Videos

ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ತಾಲೂಕು ಸಮಿತಿ ಕಾರ್ಯದರ್ಶಿ ಪ್ರಶಾಂತ್‌ ಹಾಲ್ಕುರಿಕೆ, ಉಪಾಧ್ಯಕ್ಷ ರಂಗಧಾಮಯ್ಯ, ಸಹ ಕಾರ್ಯದರ್ಶಿ ವಿಜಯ್‌, ಗೋಪಿನಾಥ್‌, ಲೋಕೇಶ್‌ ಭೈರನಾಯಕನಹಳ್ಳಿ ಮತ್ತಿತರರಿದ್ದರು.

ರೈತರಿಗೆ ನೀಡಿರುವ ನೋಟಿಸ್‌ ವಾಪಸ್‌ ಪಡೆಯಿರಿ

ಹಿರಿಯ ರೈತ ಮುಖಂಡ ಬಿ.ಬಿ.ಸಿದ್ದಲಿಂಗಮೂರ್ತಿ ಮಾತನಾಡಿ, ಅರಣ್ಯ ಭೂಮಿ, ಗೋಮಾಳ, ಬಗರ್‌ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕು, ಗುತ್ತಿಗೆ ಆಧಾರದಲ್ಲಿ ಜಮೀನು ಕೊಡುವ ನೀತಿಯನ್ನು ಕೈಬಿಡಬೇಕು, ಈ ಹಿಂದೆ ಹಂಗಾಮಿ ಸಾಗುವಳಿ ಚೀಟಿ ವಿತರಿಸಿದ್ದರೂ ಸಹ ದುರಸ್‌್ತ ಆಗಿರುವುದಿಲ್ಲ. ಈ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಬಗರ್‌ಹುಕುಂ ರೈತರ ಮೇಲೆ ಹಾಕಿರುವ ಎಲ್ಲಾ ಕೇಸುಗಳನ್ನು ಕೂಡಲೇ ವಾಪಸ್‌ ಪಡೆಯಬೇಕು. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಮೂಲಕ ರೈತರಿಗೆ ನೀಡಿರುವ ನೋಟಿಸ್‌ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದರು.

  • ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ 18ಕ್ಕೆ ವಿಧಾನಸೌದ ಚಲೋ
  • ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ರೈತರಿಗೆ ಕಿರುಕುಳ
  • ಖಾಯಂ ಹಕ್ಕು ಪತ್ರ ನೀಡಿ: ಎಸ್‌.ಎನ್‌. ಸ್ವಾಮಿ
  • ಬಗರ್‌ಹುಕುಂ ಸಾಗುವಳಿ ರೈತರ ಗೋಳು ಹೇಳತೀರದಾಗಿದ್ದು ಯಾವುದೇ ವಿದ್ಯೆ, ಕೌಶಲ್ಯವಿಲ್ಲದೇ ಎರಡು ಹೊತ್ತಿನ ತುತ್ತಿಗಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ.
click me!