ನಾಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳಿಗೂ ಈ ನಿಯಮ ಕಡ್ಡಾಯ ಮಾಡಲಾಗಿದೆ. ಏನದು ಕಡ್ಡಾಯ ಸೂಚನೆ?
ಹಾಸನ [ನ.30]: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಮೂಲಕ ಸಂಚರಿಸುವ ಎಲ್ಲ ವಾಹನಗಳಿಗೆ ಡಿ.1 ರಿಂದ ಫಾಸ್ಟ್‌ಟ್ಯಾಗ್ ಅಳವಡಿಕೆ ಕಡ್ಡಾಯ ಆದೇಶ ಜಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರಚಾರದ ಮೂಲಕ ವ್ಯಾಪಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಫಾಸ್ಟ್‌ಟ್ಯಾಗ್ ಅಳವಡಿಕೆ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಲು ನಿರ್ದೇಶನಗಳನ್ನು ನೀಡಲು ಜನಸಾಮಾನ್ಯರಿಗೆ ಫಾಸ್ಟ್‌ಟ್ಯಾಗ್ ಬಳಕೆ ಉದ್ದೇಶ ಸ್ವರೂಪಗಳ ಬಗ್ಗೆ ಸರಿಯಾಗಿ ಅರಿವು ಮಾಡಿಸಲು ಜಿಲ್ಲಾಧಿಕಾರಿ ತಿಳಿಸಿದರು.
undefined
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಮಾಲೋಚಕರು ಹೆದ್ದಾರಿಗಳಲ್ಲಿ ವಾಹನ ದಟ್ಟಣೆಯಿಂದಾಗುವ ಸಮಯ ಹಾಗೂ ಇಂಧನ ಅಪವ್ಯಯ ತಪ್ಪಿಸಲು ಫಾಸ್ ಟ್ಯಾಗ್ ಕಡ್ಡಾಯ ಯೋಜನೆ ಜಾರಿಗೆ ತರಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸಭೆಯಲ್ಲಿ ವಿವರಿಸಿದರು.
ಫಾಸ್ಟ್‌ಟ್ಯಾಗ್ ಅಳವಡಿಕೆ ಉದ್ದೇಶ ಬಳಕೆಯ ಹಾಗೂ ಅಳವಡಿಸದೇ ಇದ್ದರೆ ಟೋಲ್‌ನಲ್ಲಿ ದುಪ್ಪಟ್ಟು ಹಣ ಪಾವತಿಸಬೇಕಾಗುತ್ತದೆ ಎಂಬ ಮಾಹಿತಿಯನ್ನು ಹೆದ್ದಾರಿಯಲ್ಲಿ ನಿಗದಿತ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸೂಚಿಸಿದರು.
ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳುಸಭೆಯಲ್ಲಿ ಮಾತನಾಡಿ, ಫಾಸ್ಟ್‌ಟ್ರ್ಯಾಕ್ ಬಳಕೆಕಡ್ಡಾಯ ಜಾರಿ ಮಾಡುವ ಮುನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸರ್ವಿಸ್ ರಸ್ತೆಗಳನ್ನು ನಿರ್ಮಿಸಬೇಕು ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯನಿಯಂತ್ರಣಾಧಿಕಾರಿ ಅನಿಲ್ ಕುಮಾರ್ ಹಾಗೂ ವಿಭಾಗೀಯ ಸಂಚಾರಿ ಅಧಿಕಾರಿ ಕಮಲ್ ಕುಮಾರ್, ಹಾಸನ ಶಾಂತಿಗ್ರಾಮ ಮತ್ತು ಕದಬಳ್ಳಿ ಟೋಲ್‌ಗಳಲ್ಲಿ ಇತರೆಲ್ಲಾಜಿಲ್ಲೆಗಳ ಟೋಲ್‌ಗಳಿಗಿಂತ ವಿಭಿನ್ನ ನಿಯಮ ಅನುಸರಿಸಲಾಗಿದೆ. 24 ಗಂಟೆಗಳ ಅವಧಿಯಲ್ಲಿ ಹೋಗಿ ಬರುವ ಎಲ್ಲ ಸಂಚಾರಿಗಳಿಗೆ ನೀಡಲಾಗುತ್ತಿರುವ ರಿಯಾಯ್ತಿಯಲ್ಲಿರುವ ವ್ಯತ್ಯಾಸಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ರಾಜ್ಯಾ ದ್ಯಂತ ಏಕರೂಪದ ನಿಯಮಗಳು ಜಾರಿಗೆ ಬರಲಿವೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ರಾಷ್ಟ್ರೀಯಹೆದ್ದಾರಿ ಪ್ರಾಧಿಕಾರದ ಪಿಐಯುನ ಯೋಜನಾ ನಿರ್ದೇಶಕ ಫ್ರಾನ್ಸಿಸ್ ಜಾರ್ಜ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅನಿಲ್ ಕುಮಾರ್, ವಿಭಾಗೀಯ ಸಂಚಾರಿ ಅಧಿಕಾರಿ ಕಮಲ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಾಲೋಚಕ ಕರ್ನಲ್ ನಟೇಶ್, ಲಾರಿ ಮತ್ತು ಟ್ರಕ್ ಮಾಲೀಕರ ಸಂಘದ ಅಧ್ಯಕ್ಷ ಗುರುನಾಥ, ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಂಗೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.