ಫೆಂಗಲ್ ಚಂಡಮಾರುತ ಎಫೆಕ್ಟ್‌: ನಾಳೆಯೂ ಕೂಡ ಶಾಲೆ-ಕಾಲೇಜುಗಳಿಗೆ ರಜೆ

By Santosh Naik  |  First Published Dec 2, 2024, 5:07 PM IST

ಫೆಂಗಲ್ ಚಂಡಮಾರುತದಿಂದಾಗಿ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊರತುಪಡಿಸಿ ಉಳಿದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.


ಕೊಡಗು (ಡಿ.2): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಫೆಂಗಲ್‌ ಚಂಡಮಾರುತ ಉಂಟಾಗಿದ್ದು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಭಾರೀ ಪರಿಣಾಮ ಬೀರಿದೆ. ತಮಿಳುನಾಡು ಸಂಪೂರ್ಣ ಮಳೆಯಲ್ಲಿ ತೊಯ್ದು ಹೋಗಿದ್ದರೆ, ಕರ್ನಾಟಕದಲ್ಲೂ ಮಳೆ ಕೆಲವು ಜಿಲ್ಲೆಗಳಲ್ಲಿ ಅಬ್ಬರಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜಿಗೆ ರಜೆ ನೀಡುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದ್ದರೆ, ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ.  ಫೆಂಗಲ್ ಚಂಡಮಾರುತದ ಎಫೆಕ್ಟ್ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಶೋಭಿತಾ ಶಿವಣ್ಣ ಮರಣೋತ್ತರ ಪರೀಕ್ಷೆ ಮುಕ್ತಾಯ, ವೈದ್ಯರು ಹೇಳಿದ್ದೇನು?

Latest Videos

undefined

'ಫೆಂಗಲ್‌ ಚಂಡಮಾರುತದ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ 03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ' ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ ಪ್ರಕಾಶ್‌ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸರಿಗೆ ಸಿಕ್ತು ಶೋಭಿತಾ ಶಿವಣ್ಣ ಡೆತ್‌ ನೋಟ್‌, ಸ್ಫೋಟಕ ಮಾಹಿತಿ ಬಹಿರಂಗ..

ಚಿಕ್ಕಮಗಳೂರು ಜಿಲ್ಲೆಯ ಶಾಲೆ-ಕಾಲೇಜಿಗೂ ರಜೆ: ಫೆಂಗಲ್‌ ಚಂಡಮಾರುತ ಹಿನ್ನೆಲೆ ಭಾರೀ ಮಳೆ ಮುನ್ಸೂಚನೆ ಇರುವ ಕಾರಣ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. 3-12-24ರ ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೋಲಾರದ ಶಾಲಾ ಕಾಲೇಜಿಗೂ ರಜೆ: ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ, ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಮಂಗಳವಾರವೂ ಕೋಲಾರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ ಡಿಸಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ಸೂಚನೆ ನೀಡಲಾಗಿದೆ.

ಉಡುಪಿಯಲ್ಲೂ ರಜೆ ಘೋಷಣೆ: ಉಡುಪಿ ಜಿಲ್ಲೆಯ ಅಂಗನವಾಡಿ ಶಾಲೆ ಹಾಗೂ ಪದವಿಪೂರ್ವ ಕಾಲೇಜಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮಂಡ್ಯದಲ್ಲೂ ರಜೆ: ನಾಳೆಯೂ ನಿರಂತರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 2ನೇ ದಿನವೂ ರಜೆ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶ ಹೊರಡಿಸಿದ್ದಾರೆ. ನಾಳೆಯೂ ನಿರಂತರ ಮಳೆಯಾಗುವ ಮುನ್ಸೂಚನೆ ವರದಿ ಇದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ನಾಳೆ(ಡಿ.3ರಂದು) ರಜೆ ಇರಲಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಇರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

click me!