ಬೆಂಗಳೂರು: ಕುಡಿಯುವ ನೀರಲ್ಲಿ ವಾಹನ ತೊಳೆದ 22 ಮಂದಿಗೆ ದಂಡ

By Kannadaprabha NewsFirst Published Mar 26, 2024, 9:17 AM IST
Highlights

ಬೆಂಗಳೂರಿನಲ್ಲಿ ನೀರಿನ ಅಭಾವ ಹಿನ್ನೆಲೆಯಲ್ಲಿ ಕುಡಿಯಲು ಮತ್ತು ಗೃಹ ಬಳಕೆಗೆ ಬಳಸಲಾಗುವ ನೀರಿನಲ್ಲಿ ವಾಹನ ತೊಳೆಯಬಾರದು ಎಂದು ಜಲಮಂಡಳಿ ಕಟ್ಟುನಿಟ್ಟಿನ ಆದೇಶ ಮಾಡಿದೆ. ಆದರೂ, ಅದನ್ನು ಲೆಕ್ಕಿಸದ ಕೆಲವರು ಕುಡಿಯಲು ಮತ್ತು ಗೃಹ ಬಳಕೆಗೆ ಬಳಸಲಾಗುವ ನೀರಿನಲ್ಲಿಯೇ ವಾಹನಗಳನ್ನು ತೊಳೆಯುತ್ತಿರುವುದು ಕಂಡು ಬಂದಿದೆ. 

ಬೆಂಗಳೂರು(ಮಾ.26):  ಸ್ಪಷ್ಟ ಆದೇಶದ ನಡುವೆಯೂ ಕಾವೇರಿ ಮತ್ತು ಕೊಳವೆಬಾವಿ ನೀರನ್ನು ಬಳಸಿ ವಾಹನ ಸ್ವಚ್ಛಗೊಳಿಸುತ್ತಿದ್ದ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವ ಜಲಮಂಡಳಿ, ₹1.10 ಲಕ್ಷ ದಂಡ ವಸೂಲಿ ಮಾಡಿದೆ.

ನೀರಿನ ಅಭಾವ ಹಿನ್ನೆಲೆಯಲ್ಲಿ ಕುಡಿಯಲು ಮತ್ತು ಗೃಹ ಬಳಕೆಗೆ ಬಳಸಲಾಗುವ ನೀರಿನಲ್ಲಿ ವಾಹನ ತೊಳೆಯಬಾರದು ಎಂದು ಜಲಮಂಡಳಿ ಕಟ್ಟುನಿಟ್ಟಿನ ಆದೇಶ ಮಾಡಿದೆ. ಆದರೂ, ಅದನ್ನು ಲೆಕ್ಕಿಸದ ಕೆಲವರು ಕುಡಿಯಲು ಮತ್ತು ಗೃಹ ಬಳಕೆಗೆ ಬಳಸಲಾಗುವ ನೀರಿನಲ್ಲಿಯೇ ವಾಹನಗಳನ್ನು ತೊಳೆಯುತ್ತಿರುವುದು ಕಂಡು ಬಂದಿದೆ. ಅದನ್ನು ತಡೆಯುವ ಸಲುವಾಗಿ ಜಲಮಂಡಳಿಯು ಸೋಮವಾರದಿಂದ ವಿಶೇಷ ತಪಾಸಣಾ ಕಾರ್ಯ ಕೈಗೊಂಡಿದೆ. ಅದರಂತೆ ಸೋಮವಾರ 22 ಮಂದಿ ನಿಯಮ ಮೀರಿ ವಾಹನ ಸ್ವಚ್ಛಗೊಳಿಸುತ್ತಿರುವುದು ಕಂಡು ಬಂದಿದ್ದು, ಅವರ ವಿರುದ್ಧ ನಿಯಮದಂತೆ ಪ್ರಕರಣ ದಾಖಲಿಸಿ ತಲಾ ₹5 ಸಾವಿರ ದಂಡ ವಿಧಿಸಲಾಗಿದೆ.

BREAKING: ಬೆಂಗಳೂರು ಸ್ವಿಮ್ಮಿಂಗ್ ಪೂಲ್‌ಗಳಿಗೆ ಕಾವೇರಿ ನೀರು ಬಳಕೆ ನಿಷೇಧ; ನಿಯಮ ಉಲ್ಲಂಘಿಸಿದರೆ ದಂಡ

ರೈನ್‌, ಪೂಲ್‌ ಡ್ಯಾನ್ಸ್‌ ಆಯೋಜಿಸಿದ್ದರೆ ಕ್ರಮ

ಜಲಮಂಡಳಿ ಎಚ್ಚರಿಕೆ ನಡುವೆಯೂ ಹೋಟೆಲ್‌ಗಳು ಹೋಳಿ ಹಬ್ಬದ ಅಂಗವಾಗಿ ಕಾವೇರಿ ಹಾಗೂ ಕೊಳವೆಬಾವಿ ನೀರಿನಲ್ಲಿ ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ ಆಯೋಜಿಸಿರುವ ಕುರಿತು ದೂರುಗಳು ಬಂದರೆ ಕೂಡಲೇ ಅಂತಹ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.

click me!