ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ವಿರುದ್ಧ FIR

Suvarna News   | Asianet News
Published : Jan 31, 2021, 03:45 PM IST
ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ವಿರುದ್ಧ FIR

ಸಾರಾಂಶ

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 

ಹೊಸಕೋಟೆ (ಜ.31) : ಶಾಸಕ ಶರತ್ ಬಚ್ಚೇಗೌಡ ವಿರುದ್ದ FIR ದಾಖಲು ಮಾಡಲಾಗಿದೆ. ಜನವರಿ30 ರಂದು ಪೊಲೀಸರ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ, ಪ್ರತಿಭಟನೆ ಮಾಡಿದ ಶಾಸಕ ಶರತ್ ಸೇರಿದಂತೆ 15 ಜನರ ವಿರುದ್ದ ಎಪ್ಐಆರ್ ದಾಖಲಾಗಿದೆ. 

ಹೊಸಕೋಟೆ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಶಿಷ್ಟಾಚಾರ ಉಲ್ಲಂಘಿಸಿ ಎಂಟಿಬಿ ಗುದ್ದಲಿ ಪೂಜೆ ಮಾಡುತ್ತಿದ್ದಾರೆ ಎಂದು  ಶರತ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.

ಈ‌ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿ ಪೊಲೀಸರು ಸ್ಥಳದಿಮದ ಚದುರಿಸಿದ್ದರು. ಪೊಲೀಸರ ಕ್ರಮ ವಿರೋಧಿಸಿ ಪೊಲೀಸ್ ಠಾಣೆ ಮುಂದೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಬೆಂಬಲಿಗರು ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. 

ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ ..

ಈ‌ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿ ತಡೆ  ನಡೆಸಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.  ಐಪಿಸಿ 143, 147, 341,283 ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಫ್‌ಐಆರ್ ದಾಖಲಾಗಿದೆ. 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC