ಬಿಜೆಪಿ ಪಕ್ಷದ ಕೆಲವು ನಾಯಕರು 1000 ಸಾವಿರ ಕೋಟಿ ಹಣ ಸಂಗ್ರಹಿಸಿಟ್ಟುಕೊಂಡಿದ್ದು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸರ್ಕಾರವನ್ನು ಪಥನಗೊಳಿಸಿ ತಾವು ಮುಖ್ಯಮಂತ್ರಿಯಾಗಲು ಸಂಚು ರೂಪಿಸುತ್ತಿದ್ದಾರೆ. 1 ಸಾವಿರ ಕೋಟಿ ಹಣ ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಸರ್ಕಾರ ಪಥನಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.
ದಾವಣಗೆರೆ(ಅ.17): ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ.
ಪ್ರಕರಣ ವರ್ಗಾವಣೆಗೊಂಡು ಅಕ್ಟೋಬರ್ 14 ಕ್ಕೆ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಿಂದ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಸೆಪ್ಟೆಂಬರ್ 26 ರಂದು ದಾವಣಗೆರೆ ಜಿ ಎಂಐಟಿ ಗೆಸ್ಟ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ಆಧರಿಸಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ದೂರು ನೀಡಿದ್ದಾರೆ.
ಜಮೀರ್ ಅಹಮದ್ ಖಾನ್ ಮುತ್ತಜ್ಜನ ಹೆಸರು ಮಲ್ಲಪ್ಪ, ಕಲ್ಲಪ್ಪ ಇರಬಹುದು: ಶಾಸಕ ಯತ್ನಾಳ್!
ಬಿಜೆಪಿ ಪಕ್ಷದ ಕೆಲವು ನಾಯಕರು 1000 ಸಾವಿರ ಕೋಟಿ ಹಣ ಸಂಗ್ರಹಿಸಿಟ್ಟುಕೊಂಡಿದ್ದು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸರ್ಕಾರವನ್ನು ಪಥನಗೊಳಿಸಿ ತಾವು ಮುಖ್ಯಮಂತ್ರಿಯಾಗಲು ಸಂಚು ರೂಪಿಸುತ್ತಿದ್ದಾರೆ. 1 ಸಾವಿರ ಕೋಟಿ ಹಣ ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಸರ್ಕಾರ ಪಥನಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.
2024 ಡಿಸಂಬರ್ 24 ರಲ್ಲೇ ರಾಜಕೀಯ ಕ್ರಾಂತಿ ಉಂಟಾಗಿ ಕಾಂಗ್ರೆಸ್ ಸರ್ಕಾರ ಪಥನವಾಗುತ್ತದೆ ಎಂಬ ಹೇಳಿಕೆ ವಿಡಿಯೋ ಆಧರಿಸಿ ದೂರು ದಾಖಲಾಗಿದೆ. ಜನಾದೇಶಕ್ಕೆ ಅಪಚಾರ ಮಾಡಿ ಭ್ರಷ್ಟ ಅಕ್ರಮ ಹಣ ವರ್ಗಾವಣೆ ಶಂಕೆ ಯಿದ್ದು ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಭಾರತೀಯ ನ್ಯಾಯಸನ್ನಿಹಿತೆ 2023 ,192 ಕಲಂ ನ ಅನ್ವಯ ಪ್ರಕರಣ ದಾಖಲಾಗಿದೆ.