ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತುಮಕೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಡಿ.ಕೆ ಸುರೇಶ್ ವಿರುದ್ಧ ವೈಯಕ್ತಕವಾಗಿ ನಿಂದನೆ ಮಾಡಿದ ಆರೋಪದಲ್ಲಿ ಎಫ್ಐಆರ್ ಮಾಡಲಾಗಿದೆ. ಡಿ.ಕೆ ಸುರೇಶ್ ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಅವರು ದೇಶ, ರಾಜ್ಯ ಉಳಿಸುತ್ತಾರಾ..? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆಂದು ಕುಮಾರಸ್ವಾಮಿ ಟೀಕಿಸಿದ್ದರು.
undefined
ಏಪ್ರಿಲ್ 13 ರಂದು ಗುಬ್ಬಿಯಲ್ಲಿ ನಡೆದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತ ಯಾಚನೆ ವೇಳೆ ಈ ಹೇಳಿಕೆ ನೀಡಿದ್ದರು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಸ್.ಎಫ್.ಟಿ ಮಹೇಶ್ ದೂರು ನೀಡಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ಬಿಜೆಪಿಯವರು ಸೋಲಿನ ಭೀತಿಯಿಂದ ದಾಳಿ ಮಾಡಿಸುತ್ತಾರೆ
ರಾಮನಗರ (ಏ.17): ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಡಿ.ಕೆ.ಬ್ರದರ್ಸ್ ಆಪ್ತರ ಮೇಲೆ ಐಟಿ ದಾಳಿ ಮಾಡಲಾಗುತ್ತಿದೆ. ಇದನ್ನ ಬಿಟ್ಟು ಅವರು ಬೇರೆ ಏನೂ ಮಾಡೋಕಾಗಲ್ಲ. ನಮ್ಮನ್ನ ಏನಾದ್ರೂ ಮಾಡಿ ಕುಗ್ಗಿಸಬೇಕು ಅಂತ ಪ್ರಯತ್ನ ಮಾಡ್ತಿದ್ದಾರೆ. ಆ ಪ್ರಯತ್ನ ಯಶಸ್ವಿಯಾಗಲ್ಲ. ಸೋಲಿನ ಭೀತಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ಡಿ.ಕೆ.ಬ್ರದರ್ಸ್ ಆಪ್ತರ ಮೇಲೆ ಐಟಿ ದಾಳಿ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪ ಮಾಡಿದರು. ಬಿಜೆಪಿ-ಜೆಡಿಎಸ್ ನಾಯಕರಿಗೆ ಸೋಲಿನ ಭಯ ಕಾಡ್ತಿದೆ. ನಮ್ಮನ್ನ ಏನಾದ್ರೂ ಮಾಡಿ ಕುಗ್ಗಿಸಬೇಕು ಅಂತ ಪ್ರಯತ್ನ ಮಾಡ್ತಿದ್ದಾರೆ. ಆ ಪ್ರಯತ್ನ ಯಶಸ್ವಿಯಾಗಲ್ಲ. ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಇರೋದು ಇದೊಂದೆ ಅಸ್ತ್ರ. ಐಟಿ, ಇಡಿ ಅಧಿಕಾರಿಗಳು ಬಿಜೆಪಿ ಪಕ್ಷ ಕೈಗೊಂಬೆಯಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.
ಡಿಕೆಶಿ 9 ವರ್ಷದ ಹೆಣ್ಣು ಮಗು ಕಿಡ್ನಾಪ್ ಮಾಡಿ ಅವರಪ್ಪನ ಆಸ್ತಿ ಬರೆಸಿಕೊಂಡ ದಾಖಲೆಯಿದೆ; ಹೆಚ್.ಡಿ. ದೇವೇಗೌಡ ಆರೋಪ
ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಿ ಅಂದ್ರೆ ಇವರಿಗೆ ಆಗಲ್ಲ. ಅವರು ಹಿಂದೆ ಕೊಟ್ಟ ಭರವಸೆ ಏನು, ಅದು ಇಡೇರಿದ್ಯಾ.? ಶ್ರೀರಾಮನವಮಿದಿನ ಸತ್ಯ ಹೇಳಬೇಕು. ಬಿಜೆಪಿಯವ್ರು ಮೊದಲು ಸತ್ಯ ಹೇಳಲಿ. ನಮ್ಮನ್ನ ಏನಾದ್ರೂ ಮಾಡಿ ಕುಗ್ಗಿಸಬೇಕು ಅಂತ ಪ್ರಯತ್ನ ಮಾಡ್ತಿದ್ದಾರೆ. ಆ ಪ್ರಯತ್ನ ಯಶಸ್ವಿಯಾಗಲ್ಲ.ಅವರು ಕೇವಲ ಕಾಂಗ್ರೆಸ್ ಪಕ್ಷವನ್ನ ಕಟ್ಟಿಹಾಕಲು ಬಂದಿದ್ದಾರೆ. ಇದನ್ನ ನಾವು ಹೊಸದಾಗಿ ನೋಡ್ತಿಲ್ಲ. ಎಲ್ಲಾ ಚುನಾವಣೆಗಳಲ್ಲೂ ಇದೇ ರೀತಿ ಮಾಡ್ತಿರೋದು ಗೊತ್ತಾಗಿದೆ ಎಂದು ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್ ಹೇಳಿದರು.