ಸಚಿವ ಈಶ್ವರಪ್ಪ ಮನೆಯಲ್ಲಿ ಬೆಂಕಿ: ಪತಿ, ಪತ್ನಿ ಅಪಾಯದಿಂದ ಪಾರು

Kannadaprabha News   | Asianet News
Published : Mar 17, 2020, 08:14 AM ISTUpdated : Mar 17, 2020, 04:56 PM IST
ಸಚಿವ ಈಶ್ವರಪ್ಪ ಮನೆಯಲ್ಲಿ ಬೆಂಕಿ: ಪತಿ, ಪತ್ನಿ ಅಪಾಯದಿಂದ ಪಾರು

ಸಾರಾಂಶ

ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. 

ಬೆಂಗಳೂರು [ಮಾ.17]: ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಮಂಗಳವಾರ ರಾತ್ರಿ ಸಂಭವಿಸಿದ್ದು, ಸಚಿವರು ಮತ್ತು ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.

"

ನಗರದ ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯಲ್ಲಿ ಎಸಿ ಸ್ವಿಚ್‌ ಹಾಕುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ತಕ್ಷಣ ಈಶ್ವರಪ್ಪ ಮತ್ತು ಅವರ ಪತ್ನಿ ಮನೆಯಿಂದ ಹೊರಗೆ ಬಂದು ಅಳಿಯ ಸಂತೋಷ್‌ಗೆ ವಿಷಯ ತಿಳಿಸಿದ್ದಾರೆ. ಹಾಗೇ ಅಗ್ನಿ ಶಾಮಕದಳಕ್ಕೂ ಮಾಹಿತಿ ನೀಡಿದ್ದಾರೆ. 

ಬಿಜೆಪಿಗೆ ವಲಸೆ ಬಂದ 15 ಜನರಿಂದ ಕಚೇರಿ ಕಸ ಗುಡಿಸುತ್ತೇವೆ!'...

ತಕ್ಷಣ ಅಗ್ನಿ ಶಾಮಕದಳದವರು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದಾಗಲೇ ಈಶ್ವರಪ್ಪ ಅವರು ಮಲಗುವ ಕೋಣೆ ಸಂಪೂರ್ಣ ಭಸ್ಮವಾಗಿದೆ. ರೂಮ್‌ನಲ್ಲಿದ್ದ ಬೆಡ್‌, ಎಸಿ, ಬಟ್ಟೆಗಳು, ಸೋಫಾ, ಕರ್ಟನ್‌ ಎಲ್ಲವೂ ಸುಟ್ಟು ಭಸ್ಮವಾಗಿದೆ. ರಾತ್ರಿ ವೇಳೆಯೇ ದುರಸ್ತಿಗೊಳಿಸುವ ಕಾರ್ಯ ನಡೆದಿದೆ.

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್