ತುಮಕೂರು: ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

By Girish GoudarFirst Published Jun 7, 2024, 7:27 PM IST
Highlights

ಸ್ಥಳಕ್ಕೆ ಅಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು. 

ತುಮಕೂರು(ಜೂ.07): ವಸತಿ ಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ವಸತಿ ನಿಲುಯದ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿ‌ನಿಯರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು ಎಂದು ತಿಳಿದು ಬಂದಿದೆ. 

Latest Videos

ಭಯೋತ್ಪಾದಕರಿಂದ ಪಾಕಿಸ್ತಾನದ ಶಾಲೆಗೆ ಬೆಂಕಿ: 1400 ವಿದ್ಯಾರ್ಥಿಗಳು ಪಾರು

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಡಿಸಿ ಶುಭಕಲ್ಯಾಣ್ ಅವರು ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. 

click me!