ದುಬಾರೆ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡು, ಅಪಾರ ನಷ್ಟಸಂಭವಿಸಿದೆ. ಸುಮಾರು 12 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಮಡಿಕೇರಿ (ಏ.06): ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಗೇಟ್ ಹಾಡಿ ದೊಡ್ಡ ಹಡ್ಲು ಭಾಗದ ದುಬಾರೆ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡು, ಅಪಾರ ನಷ್ಟಸಂಭವಿಸಿದೆ.
ಸುಮಾರು 12 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಸಣ್ಣಪುಟ್ಟಕಾಡು ಪ್ರಾಣಿಗಳು, ಸರೀಸೃಪಗಳೂ ಆಹುತಿಯಾಗಿವೆ.
ದುಬಾರೆ ಶಿಬಿರದಿಂದ ತಪ್ಪಿಸಿಕೊಂಡಿದ್ದ ಆನೆ 2 ವರ್ಷದ ಬಳಿಕ ಸೆರೆ ...
ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ 50ಕ್ಕೂ ಅಧಿಕ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಹಾಡಿಯ ನಿವಾಸಿಗಳ ಸಹಕಾರದಿಂದ ಬೆಂಕಿ ನಂದಿಸಲಾಗಿದೆ.
ವ್ಯಾಪಕವಾಗಿ ಬೆಂಕಿ ಹರಡುವ ಸಾಧ್ಯತೆ ಇತ್ತು. ಆದರೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.