* ಕಲಬುರಗಿ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಅವಘಡ
* ವಿದ್ಯುತ್ ಶಾಕ್‌ನಿಂದಾಗಿ ಮೃತಪಟ್ಟ ರಮೇಶ
* ತಕ್ಷಣ ಚಿಕಿತ್ಸೆಗೆ ಕರೆದೊಯ್ದರೂ ಬದುಕುಳಿದಿಲ್ಲ
ಕಲಬುರಗಿ(ಡಿ.27): ಇಲ್ಲಿನ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ(Fire) ಅವಘಡದಲ್ಲಿ ಬೆಂಕಿ ನಂದಿಸಲು ನಡೆದ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ(Fire Department) ಸಿಬ್ಬಂದಿ ರಮೇಶ (55) ವಿದ್ಯುತ್ ಶಾಕ್‌ನಿಂದಾಗಿ(Electrocution) ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಸೂಪರ್ ಮಾರ್ಕೆಟ್‌ನಲ್ಲಿರುವ ಕೆನರಾ ಬ್ಯಾಂಕಿನ(Canara Bank) ಜನರೇಟರ್‌ನಲ್ಲಿ ಅವಘಡ ಸಂಭವಿಸಿ ಉಂಟಾದ ಬೆಂಕಿ ಎಲ್ಲೆಡೆ ವ್ಯಾಪಿಸಲಾರಂಭಿಸಿತು. ತಕ್ಷಣ ಸಾರ್ವಜನಿಕರು, ಮಳಿಗೆ ಮಾಲೀಕರು ಅಗ್ನಿ ಶಾಮಕ ಠಾಣೆಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಹಂತದಲ್ಲಿ ಒಳಗೆ ನುಗ್ಗಿ ಬೆಂಕಿ ನಂದಿಸುವಾಗ ಎಎಸ್‌ಒ ರಮೇಶಗೆ ವಿದ್ಯುತ್ ವೈರ್‌ಗೆ ತಗುಲಿದೆ.
ಇವರನ್ನು ತಕ್ಷಣ ಚಿಕಿತ್ಸೆಗೆ(Treatment) ಕರೆದೊಯ್ದರೂ ಬದುಕುಳಿದಿಲ್ಲ ಎಂದು ಅಗ್ನಿ ಶಾಮಕ ಠಾಣೆ ಮೂಲಗಳು ಹೇಳಿವೆ. ಪೇದೆ ಸಾವಿನ ನಂತರವೂ ಮುಂದುವರಿದ ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶ ಕಂಡಿದ್ದಾರೆ. ಬೆಂಕಿ ಯಾವ ಕಡೆಯೂ ಹೆಚ್ಚು ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಗೆ ಮೂಲ ಕಾರಣ ಏನು ಎಂಬುದು ಮೇಲ್ನೋಟಕ್ಕೆ ಗೊತ್ತಾದರೂ ಒಳಗಿನ ಅಸಲಿ ಕಾರಣ ಪತ್ತೆ ಹಚ್ಚುವ ಕೆಲಸ ಮುಂದುವರಿಸೋದಾಗಿ ಅಗ್ನಿ ಶಾಮಕ ಠಾಣೆ ಮೂಲ ತಿಳಿಸಿದೆ.
ಪಟಾಕಿ ಅಂಗಡಿಯಲ್ಲಿ ಸ್ಫೋಟ: ಐವರು ಸಾವು, 10 ಮಂದಿಗೆ ಗಾಯ!
ಅಗ್ನಿಶಾಮಕ ಲಾಂಛನದಲ್ಲಿ ಕನ್ನಡ ಬದಲು ಹಿಂದಿ ಹಾಕಿ ಎಡವಟ್ಟು..!
ತನ್ನ ಅಧಿಕೃತ ಲಾಂಛನದಲ್ಲೇ ಕನ್ನಡ(Kannada) ಭಾಷೆ ಬಳಕೆ ಮಾಡದೆ ಇಂಗ್ಲಿಷ್(English) ಹಾಗೂ ಹಿಂದಿ(Hindi) ಮಾತ್ರ ಬಳಕೆ ಮಾಡುವ ದಾಷ್ಟ್ರ್ಯ ತೋರಿದ ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆಯು ಕನ್ನಡಿಗರ ತೀವ್ರ ಕೆಂಗಣ್ಣಿಗೆ ಗುರಿಯಾದ ನಂತರ ತಪ್ಪು ತಿದ್ದುಕೊಂಡ ಘಟನೆ ಆಗಸ್ಟ್‌ನಲ್ಲಿ ನಡೆದಿತ್ತು.
ಇಲಾಖೆಯು ಹೊಸ ವಿನ್ಯಾಸದ ಲಾಂಛನವನ್ನು ಇಲಾಖೆಯ ಅಧಿಕೃತ ಫೇಸ್‌ಬುಕ್(Facebook) ಖಾತೆಯಲ್ಲಿ ಪ್ರಕಟಿಸಿತ್ತು. ಆದರೆ, ಲಾಂಛನದಲ್ಲಿ ಕನ್ನಡ ಭಾಷೆ ಬಳಕೆ ಮಾಡದೆ ಕೇವಲ ಇಂಗ್ಲಿಷ್ ಹಾಗೂ ಹಿಂದಿ ಭಾಷೆಯನ್ನು ಮಾತ್ರ ಬಳಕೆ ಮಾಡಿತ್ತು.
ಲಿಂಗಸೂಗೂರು: ಕೃಷ್ಣಾ ನದಿಗೆ ಏಕಾಏಕಿ ನೀರು ಬಿಡುಗಡೆ, ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯ ರಕ್ಷಣೆ
ಇದು ಕನ್ನಡಿಗರನ್ನು(Kannadigas) ಕಂಗೆಡಿಸಿದ್ದು, ಕನ್ನಡ ಅಧಿಕೃತ ಭಾಷೆಯಾಗಿರುವ ಕರ್ನಾಟಕದಲ್ಲೇ(Karnataka) ಕನ್ನಡ ಬಳಕೆ ಮಾಡದೆ ಹಿಂದಿ ಭಾಷೆ ಬಳಕೆ ಮಾಡಿರುವುದನ್ನು ಖಂಡಿಸಿ ‘ಹಿಂದಿ ಗುಲಾಮಗಿರಿ ನಿಲ್ಲಿಸಿ’ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಅಭಿಯಾನವನ್ನು ಕನ್ನಡಪ್ರೇಮಿ ನೆಟ್ಟಿಗರು ಆರಂಭಿಸಿದರು. ‘ಕರ್ನಾಟಕದ ಅಧಿಕೃತ ಭಾಷೆ ಕನ್ನಡವಾಗಿರುವಾಗ ಉತ್ತರ ಭಾರತದ ಭಾಷೆ ಹಿಂದಿಯನ್ನು ಕರ್ನಾಟಕದಲ್ಲಿ ಬಳಸುತ್ತಿರುವುದು ಏಕೆ? ಮೊದಲು ಹಿಂದಿ ತೆಗೆದು ಕನ್ನಡ ಹಾಕಿ. ಕರ್ನಾಟಕದ ಸರ್ಕಾರಿ ಸಂಸ್ಥೆಗಳಲ್ಲಿ ಕನ್ನಡಕ್ಕೇ ಜಾಗವಿಲ್ಲವೇ?’ ಎಂದು ನೂರಾರು ಮಂದಿ ಕಮೆಂಟ್ ಮಾಡಿದ್ದರು.
ಇದರಿಂದ ಎಚ್ಚೆತ್ತುಕೊಂಡ ಇಲಾಖೆಯು ‘ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ(Karnataka State Fire and Emergency Services) ಮತ್ತು ತುರ್ತು ಸೇವೆಗಳು’ ಎಂದು ಕನ್ನಡ ಭಾಷೆಯಲ್ಲಿರುವ ಪರಿಷ್ಕೃತ ಲಾಂಛನವನ್ನು ಪ್ರಕಟಿಸಿತು. ಹಿಂದಿ-ಇಂಗ್ಲಿಷ್ ಲಾಂಛನ ಪೋಸ್ಟ್ ಮಾಡಿದ್ದ ನಾಲ್ಕು ಗಂಟೆಗಳ ಬಳಿಕ ಸಂಪೂರ್ಣ ಕನ್ನಡದಲ್ಲಿರುವ ಲೋಗೋ ಹಾಕಿತು. ಆದರೆ, ಹಿಂದಿ-ಇಂಗ್ಲಿಷ್ ಪೋಸ್ಟ್‌ಅನ್ನು ಅಳಿಸಿಲ್ಲ. ಜತೆಗೆ ತನ್ನ ತಪ್ಪಿಗೆ ಕನ್ನಡಿಗರ ಕ್ಷಮೆಯಾಚಿಸಿಲ್ಲ. ಹೀಗಾಗಿ ಇಲಾಖೆ ಕುರಿತು ಕನ್ನಡ ಪೇಮಿ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ(Social Media) ಆಕ್ರೋಶ ವ್ಯಕ್ತಪಡಿಸಿದ್ದರು.