ರಾಜ್ಯದ ತಾಲೂಕುಗಳಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣ: ಗೃಹ ಸಚಿವ ಪರಮೇಶ್ವರ್

Kannadaprabha News   | Kannada Prabha
Published : Jul 11, 2025, 11:57 PM IST
Dr G Parameshwar

ಸಾರಾಂಶ

ದ.ಕ ಜಿಲ್ಲೆಯ ಕಡಬ ಮತ್ತು ಮೂಲ್ಕಿ ಗೆ ಎರಡು ನೂತನ ಠಾಣೆಗಳು ಮಂಜೂರು ಮಾಡಲಾಗಿದ್ದು ತಲಾ ಮೂರು ಕೋಟಿ ರು.ಗಳಂತೆ ಬಿಡುಗಡೆ ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಳ್ಳಾಲ (ಜು.11): ರಾಷ್ಟೀಯ ಕಮಿಷನ್ ತೀರ್ಮಾನದಂತೆ ರಾಜ್ಯದ ಪ್ರತಿ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ಇರಬೇಕು ಎಂದು ತೀರ್ಮಾನಿಸಲಾಗಿದೆ. ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ. ದ.ಕ ಜಿಲ್ಲೆಯ ಕಡಬ ಮತ್ತು ಮೂಲ್ಕಿ ಗೆ ಎರಡು ನೂತನ ಠಾಣೆಗಳು ಮಂಜೂರು ಮಾಡಲಾಗಿದ್ದು ತಲಾ ಮೂರು ಕೋಟಿ ರು.ಗಳಂತೆ ಬಿಡುಗಡೆ ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಳ್ಳಾಲ ತಾಲೂಕಿನ ಕಂಬಳಪದವು ಬಳಿ ನೂತನ ಅಗ್ನಿಶಾಮಕ ಠಾಣೆಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು‌. ಅಗ್ನಿಶಾಮಕಕ್ಕೆ ರಾಜ್ಯದಲ್ಲಿ ಹೊಸ ಆವಿಷ್ಕಾರ ಮಾಡಲಾಗಿದೆ. ಬೇರೆ ದೇಶದಿಂದ ಅಮದು ಮಾಡಿ 90 ಮೀಟರ್ ಎತ್ತರದ ಏಣಿ ಬೆಂಗಳೂರಿಗೆ ತರಲಾಗಿದೆ. ಸಿಬ್ಬಂದಿಗೆ ಬೇಕಾಗುವ ವಾಹನಗಳನ್ನು ಸರ್ಕಾರದ ವತಿಯಿಂದ ನೀಡಲಾಗಿದ್ದು ವಾಹನಗಳಿಗೆ ಮುಖ್ಯಮಂತ್ರಿ 50 ಕೋಟಿ ರು. ಬಿಡುಗಡೆ ಮಾಡಿದ್ದಾರೆ ಎಂದು ವಿವರಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದ‌ರ್, ಉಳ್ಳಾಲ ತಾಲೂಕು ಆಗಿ ಘೋಷಣೆ ಅದ ಬಳಿಕ ವಿವಿಧ ಇಲಾಖೆಗಳ ಶಾಖೆ ಹಂತ ಹಂತವಾಗಿ ಬರುತ್ತಿದೆ. ರಾಜ್ಯಕ್ಕೆ ಮಾದರಿ ಅಗ್ನಿಶಾಮಕ ಕಚೇರಿ ಉಳ್ಳಾಲದಲ್ಲಿ ನಿರ್ಮಾಣ ಮಾಡಲಾಗುವುದು. ಮುಂದೆ ಕೊಣಾಜೆ ಪೊಲೀಸ್ ಠಾಣೆ ಮಾದರಿ ಆಗಿ ನಿರ್ಮಾಣ ಮಾಡುವ ಗುರಿ ಇದೆ ಎಂದರು.

ಅಗ್ನಿಶಾಮಕ ಇಲಾಖೆಯ ಉಪ ನಿರ್ದೇಶಕ ಈಶ್ವರ ನಾಯಕ್‌, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಫಜೀರು ಪಂಚಾಯಿತಿ ಅಧ್ಯಕ್ಷ ರಫೀಕ್ ಪಜೀರು, ಮುನ್ನೂರು ಪಂಚಾಯಿತಿ ಅಧ್ಯಕ್ಷೆ ರೆಹನಾ ಬಾನು, ಮಂಜನಾಡಿ ಗ್ರಾಪಂ ಅಧ್ಯಕ್ಷೆ ಸರೋಜಿನಿ, ಕೊಣಾಜೆ ಗ್ರಾಪಂ ಅಧ್ಯಕ್ಷೆ ಗೀತಾ ದಾಮೋದ‌ರ್ ಕುಂದ‌ರ್, ಬಾಳೆಪುಣಿ ಗ್ರಾಪಂ ಅಧ್ಯಕ್ಷೆ ಗೀತಾ ಭಂಡಾರಿ, ಕುರ್ನಾಡು ಗ್ರಾಪಂ ಅಧ್ಯಕ್ಷೆ ಪ್ರೇಮಾ ಗಟ್ಟಿ, ಕುರ್ನಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಕಾಜವ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೆರ, ರಮೇಶ್ ಶೆಟ್ಟಿ, ಮುಖಂಡರಾದ ಸೀತಾರಾಂ ಶೆಟ್ಟಿ ಪೆರ್ನ, ಜೆ.ಬಾವ, ಕಣಚೂರು ಮೋನು, ಹರ್ಷರಾಜ್ ಮುದ್ಯ ಮೊದಲಾದವರು ಉಪಸ್ಥಿತರಿದ್ದರು.

ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದರು. ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್‌ಆರ್‌ಆರ್‌ಒ) ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ಮಾಹಿತಿ ನೀಡುತ್ತಾರೆ. ಅವರನ್ನು ಪತ್ತೆ ಮಾಡಿ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಒಂದು ದಿನದಲ್ಲಿ ಮಾಡಿ ನಿಲ್ಲಿಸಲು ಸಾಧ್ಯವಿಲ್ಲ. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂಬ ಆರೋಪವಿದ್ದು, ಅಂಥವರು ಕಂಡುಬಂದರೆ ವಶಕ್ಕೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದು ತಿಳಿಸಿದರು. ಅಕ್ರಮ ನುಸುಳುಕೋರರ ಬಗ್ಗೆ ಮೃದು ಧೋರಣೆ ತೋರುವುದರಿಂದ ಏನು ಉಪಯೋಗ? ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಮತ ಹಾಕಿಸಿಕೊಳ್ಳುವಂತಹ ಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದರು.

PREV
Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?