
ಸಿದ್ದಾಪುರ(ಮಾ.29): ತಾಲೂಕಿನ ನಾಣಿಕಟ್ಟಾ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕದವರು ಉರಿಯುತ್ತಿದ್ದ ಬೆಂಕಿಯನ್ನು ನಿಯಂತ್ರಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.
ತಾಲೂಕಿನಿಂದ ಸುಮಾರು 25 ಕಿಮೀ ದೂರದಲ್ಲಿರುವ ಮಾಳದ ಮನೆ (ನಾಣಿಕಟ್ಟಾ) ಗ್ರಾಮ ಅರಣ್ಯ ಸಮಿತಿ ವ್ಯಾಪ್ತಿಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಸುತ್ತಮುತ್ತಲಿನ ಪ್ರದೇಶದ ವ್ಯಾಪ್ತಿಯನ್ನು ವ್ಯಾಪಿಸಿತ್ತು.
ಗೋವಾದಿಂದ ಕಾರವಾರಕ್ಕೆ ಎಲೆಕ್ಟ್ರಿಕ್ ಬಸ್ ಸೇವೆ
ಜಲಾವು ಕಟಾವು ಮಾಡಿದ ಮರಕ್ಕೆ ಬೆಂಕಿ ತಗುಲಿ ಹೆಚ್ಮಿನ ಮರದ ತುಂಡುಗಳು ಬೆಂಕಿಗೆ ಆಹುತಿಯಾಗುತ್ತಿದ್ದವು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.