
ವಿಜಯಪುರ(ಜು.21): ಶಾರ್ಟ್ ಸರ್ಕ್ಯೂಟ್‌ನಿಂದ ಗೋಡೌನ್‌ಗೆ ಬೆಂಕಿ ಬಿದ್ದ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಗೋಡೌವನ್‌ನಲ್ಲಿದ್ದ ಬೆಲೆ ಬಾಳುವ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿವೆ. ಪಟ್ಟಣದ ರೈಲು ನಿಲ್ದಾಣ ರಸ್ತೆಯಲ್ಲಿ ರಿಲಯನ್ಸ್ ಪೆಟ್ರೋಲ್ ಪಂಪ್ ಹತ್ತಿರ ಗೋಡೌವನ್‌ನಲ್ಲಿ ಘಟನೆ ಸಂಭವಿಸಿದೆ.
ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಪೈಪುಗಳು, ಸ್ಪಿಂಕ್ಲರ್ ಪೈಪುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ: ಇಡೀ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ದುರುಳರು, ತಾಯಿ, ಮಗಳು ಸಜೀವ ದಹನ..!
ಶಶಿಧರ ಟೆಂಗಳೆ ಎಂಬುವರಿಗೆ ಸೇರಿದ ಗೋಡೌನ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಲಕ್ಷಾಂತರ ಮೌಲ್ಯದ ಕೃಷಿ ಸಂಬಂಧಿಸಿದ ವಸ್ತುಗಳು ಸುಟ್ಟು ಕರಕಲಾಗಿವೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.