Davanagere News: ಸರಣಿ ಸ್ಪೋಟಕ ಪಟಾಕಿ ನಿಷೇಧ, ಹಸಿರು ಪಟಾಕಿಗಷ್ಟೇ ಅನುಮತಿ

By Kannadaprabha News  |  First Published Oct 23, 2022, 10:16 AM IST

ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರ ಘನತ್ಯಾಜ್ಯ ವಸ್ತುಗಳಿಂದ ಮಾಲಿನ್ಯಉಂಟಾಗುವುದರಿಂದ ಸರಣಿ ಸ್ಪೋಟಕ ಪಟಾಕಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯನ್ನು ಜಿಲ್ಲಾದ್ಯಂತ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.


ದಾವಣಗೆರೆ (ಅ.23): ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರ ಘನತ್ಯಾಜ್ಯ ವಸ್ತುಗಳಿಂದ ಮಾಲಿನ್ಯಉಂಟಾಗುವುದರಿಂದ ಸರಣಿ ಸ್ಪೋಟಕ ಪಟಾಕಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯನ್ನು ಜಿಲ್ಲಾದ್ಯಂತ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಚ್‌ ಆದೇಶ ಮತ್ತು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಸೂಚನೆಗಳನ್ನು ಪಾಲಿಸಲು ಮತ್ತು ಅಧಿಕೃತವಾಗಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಪರವಾನಗಿ ಪಡೆದ ಪರವಾನಿಗೆದಾರರು ಸಹ ಸುಪ್ರೀಂ ಕೋರ್ಚ್‌ ಆದೇಶವನ್ನು ತಪ್ಪದೇ ಪಾಲನೆ ಮಾಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Deepavali 2022; ದಿನಕ್ಕೆ ಎರಡು ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Latest Videos

undefined

ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಚ್ಚುವಂತಿಲ್ಲ. ಹಸಿರು ಪಟಾಕಿಗಳನ್ನು ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟಗಾರರು ನಿಗದಿತ ಸ್ಥಳದಲ್ಲೇ ಮಾತ್ರ ಮಾರಾಟ ಮಾಡಬೇಕು. ಪರವಾನಿಗೆದಾರರು ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರ ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು ಎಂದು ಅವರು ಸೂಚಿಸಿದ್ದಾರೆ.

ಪರವಾನಿಗೆಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮತ್ತು ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಬೇರೆ ಸ್ಥಳ ಮತ್ತು ದಿನಾಂಕಗಳಲ್ಲಿ ಅಂಗಡಿ ತೆರೆಯ ಬಾರದು. ದೀಪಾವಳಿ ಹಬ್ಬದ ಸಂಬಂಧ ನರಕ ಚತುರ್ದಶಿ ಅ.24ಕ್ಕೆ, ದೀಪಾವಳಿ ಅಮವಾಸ್ಯೆ 25ಕ್ಕೆ, ಬಲಿಪಾಢ್ಯಮಿ 26ಕ್ಕೆ ಇರುತ್ತದೆ. ಹಬ್ಬದ ಸಮಯದಲ್ಲಿ ಪಟಾಕಿಗಳನ್ನು ರಾತ್ರಿ 8ರಿಂದ 10 ಗಂಟೆ ಒಳಗಾಗಿ ಮಾತ್ರ ಸಿಡಿಸಬೇಕು. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿ ಪೂರ್ವಕವಾಗಿ ಆಚರಿಸುವ ಸಂಬಂಧ ಮತ್ತು ಹಸಿ ರು ಪಟಾಕಿ ಕುರಿತಂತೆ ಸರ್ಕಾರದ ಆದೇಶನವನ್ನು ಕಡ್ಡಾಯವಾಗಿ ಅನುಸರಿಸಬೇಕು. ಸುಪ್ರೀಂ ಕೋರ್ಚ್‌ ಪಟಾಕಿ ಬಳಕೆ ಕುರಿತಂತೆ ನೀಡಿದ ನಿರ್ದೇಶನಗಳ ಆದೇಶದ ಪ್ರತಿಯು ಕರ್ನಾಟಕ ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಹಸಿರು ಪಟಾಕಿ ಸಿಡಿತ ಪ್ರಕ್ರಿಯೆಯು ನಿಗದಿತ ಅವದಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಮತ್ತು ಉಲ್ಲಂಘನೆ ಮಾಡಿ ದವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸಂಬಂಧಿಸಿದ ಇಲಾಖೆಗಳಿಗೆ ಆದೇಶ ನೀಡಿದ್ದಾರೆ.

ಪಟಾಕಿ ವಿಷಕಾರಿ ಹೊಗೆ ಉಸಿರಾಟದ ಸಮಸ್ಯೆಯ ಅಪಾಯ ಹೆಚ್ಚಿಸುತ್ತೆ ಎಚ್ಚರ..!

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹೈಸ್ಕೂಲ್‌ ಮೈದಾನದಲ್ಲಿ ತಾತ್ಕಾಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪಟಾಕಿ ಮಾರಾಟಕ್ಕೂ ಸುಪ್ರೀಂ ಕೋರ್ಚ್‌ ಆದೇಶ, ಸರ್ಕಾರದ ಮಾರ್ಗಸೂಚಿ ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಸೂಚಿಸಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವರ್ಷಕ್ಕೊಮ್ಮೆ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾ ರಾಟ ಮಾಡುತ್ತಿದ್ದ ಪಟಾಕಿ ಮಾರಾಟಗಾರರು ಈಗಿನ ಪರಿಸ್ಥಿತಿಯಲ್ಲಿ ಪಟಾಕಿ ಮಾರಾಟದಿಂದಲೇ ಹಿಂದೆ ಸರಿಯುವಂತಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದಪಟಾಕಿ ಮಾರಾಟ ಮಾಡದಂತೆ ಇರುವುದೂ ಸಹ ಇದಕ್ಕೆ ಕಾರಣವೆನ್ನಲಾಗಿದೆ.

click me!