ಯುವ ಜನತೆ ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಭಾಗವಹಿಸಬೇಕು. ದೇಶದಲ್ಲಿ ಹಾಳಾಗಿರುವ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದರೆ ದೇಶವನ್ನು ಉಳಿಸಬೇಕೆಂದರೆ ಯುವಜನತೆಯ ಪಾತ್ರ ಅತ್ಯಂತ ಪ್ರಮುಖ ಎಂದು ಶಾಸಕ ಕೆ. ಹರೀಶ್‌ಗೌಡ ಹೇಳಿದರು.
ಮೈಸೂರು : ಯುವ ಜನತೆ ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಭಾಗವಹಿಸಬೇಕು. ದೇಶದಲ್ಲಿ ಹಾಳಾಗಿರುವ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದರೆ ದೇಶವನ್ನು ಉಳಿಸಬೇಕೆಂದರೆ ಯುವಜನತೆಯ ಪಾತ್ರ ಅತ್ಯಂತ ಪ್ರಮುಖ ಎಂದು ಶಾಸಕ ಕೆ. ಹರೀಶ್‌ಗೌಡ ಹೇಳಿದರು.
ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್ ಮತ್ತು ಪ್ರತಿಭಾ ವೇದಿಕೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಜೀವನದಲ್ಲಿ ಒಳ್ಳೆಯ ನಡತೆ, ಜ್ಞಾನ, ಮೌಲ್ಯ ಮತ್ತು ಕೌಶಲ್ಯಗಳನ್ನು ಕಲಿಸಿಕೊಟ್ಟ ತಂದೆ, ತಾಯಿ ಹಾಗೂ ಗುರು ಹಿರಿಯರನ್ನು ಎಂದೆಂದಿಗೂ ಮರೆಯಬಾರದು. ಹಿಂದಿನ ಕಾಲದ ವಿದ್ಯಾರ್ಥಿಗಳಲ್ಲಿ ಹೋರಾಟದ ಪ್ರವೃತ್ತಿ ಹೆಚ್ಚಾಗಿತ್ತು. ಆದರೆ ಇಂದಿನ ವಿದ್ಯಾರ್ಥಿಗಳಿಗೆ ರಾಜಕಾರಣದ ಬಗ್ಗೆ ಆಸಕ್ತಿ ಇಲ್ಲವಾಗಿದೆ ಎಂದರು.
ಯುವಕ- ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕಾರಣದಲ್ಲಿ ಪಾಲ್ಗೊಂಡಾಗ ದೇಶದ ಪ್ರಗತಿ ಸಾಧ್ಯ. ಯುವಶಕ್ತಿ ಮುಂದೆ ಯಾವ ಶಕ್ತಿಯೂ ದೊಡ್ಡದಲ್ಲ. ತಾವು ಮತ್ತು ಇತರ ಯುವ ಸಮುದಾಯ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿದ್ದನ್ನು ಸ್ಮರಿಸಿಕೊಂಡು,
ಗಾಯಕ ಮತ್ತು ಕನ್ನಡ ಚಲನಚಿತ್ರ ನಟ ನವೀನ್ ಸಜ್ಜು ಮಾತನಾಡಿ, ನಾನು ವೇದಿಕೆಗಾಗಿ ಕಷ್ಟಪಡುತ್ತಿದ್ದೆ. ನನ್ನ ಬದುಕಿನಲ್ಲಿ ಕಾಲೇಜು ದಿನಗಳನ್ನ ನೋಡದಿರುವುದಕ್ಕೆ ಬೇಸರವಿದೆ. ಆದರೆ ನನಗೆ ಆತ್ಮ ತೃಪ್ತಿಇದೆ. ಕಾರಣ ಈ ಬದುಕು ನನಗೆ ಒಂದು ವಿಶ್ವವಿದ್ಯಾನಿಲಯ ಕೊಡುವಷ್ಟು ಅನುಭವನ್ನು ಕೊಟ್ಟಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾಜನ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಟಿ. ವಿಜಯಲಕ್ಷ್ಮಿ ಮುರಳೀಧರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡು, ನಿಮ್ಮಲ್ಲಿರುವ ನ್ಯೂನತೆ ಸರಿಪಡಿಸಿಕೊಂಡು, ಛಲದಿಂದ ಮುನ್ನುಗ್ಗಿ, ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ಕೌಶಲ್ಯದ ಕಡೆಗೆ ಗಮನಹರಿಸಿ. ಅಧ್ಯಾಪಕರ ನಡುವೆ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ ಎಂದರು.
ಪ್ರಾಂಶುಪಾಲೆ ಡಾ.ಬಿ.ಆರ್. ಜಯಕುಮಾರಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಸತ್ ಮತ್ತು ಪ್ರತಿಭಾ ವೇದಿಕೆ ಮೂಲಕ ನಾಯಕತ್ವ ಗುಣ ಬೆಳೆಸಿಕೊಳ್ಳಿ. ನಿಮ್ಮ ಕೌಶಲ್ಯ, ಪ್ರತಿಭೆ ಹೊರಹಾಕಲು ಕಾಲೇಜು ಅವಕಾಶ ಕಲ್ಪಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದರು.
ವಿದ್ಯಾರ್ಥಿ ಸಂಸತ್ ಸಂಚಾಲಕ ಡಾ.ಎಂ.ಆರ್. ಕ್ಯಾಪ್ಟನ್ ಇಂದ್ರಾಣಿ ಮಾತನಾಡಿದರು. ಸಂಸದೀಯ ಮಂಡಳಿಯ ಹಿರಿಯ ಸದಸ್ಯ ವಿದ್ಯಾರ್ಥಿಗಳಾದ ಶಶಾಂಕ್ ಎಂ.ಎಸ್. ಗೌಡ, ಕೆ.ಬಿ. ಸುಮಂತ್, ಕೆ.ಎಂ. ಹಂಸ, ಜೆ. ರಕ್,ಇತಾ, ಹರ್ಷಿತಾ ಮತ್ತು ಭಾನುಪ್ರಕಾಸ್‌ಅವರನ್ನು ಸನ್ಮಾನಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್. ತಿಮ್ಮೇಗೌಡ, ಪತ್ರಿಭಾ ವೇದಿಕೆ ಸಂಚಾಲಕ ಎಂ. ನಾಗೇಶ ಇದ್ದರು.
ಗುತ್ತಿಗೆದಾರರ ಸಂಘದ ವಿರುದ್ದ ಗಂಭೀರ ಆರೋಪ
ಬೆಂಗಳೂರು (ಅ.14): ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ಟ್ರಾನ್ಸ್‌ಫರ್ ನಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆಮೇಲೆ ದಾಳಿ ಮಾಡಿದರೆ ಇನಷ್ಟು ಕಮಿಷನ್ ಹಣ ಹೊರ ಬರಲಿದೆ ಎಂದು ಹೇಳಿದರು.
42 ಕೋಟಿ ಹಣದ ಮೂಲವನ್ನು ಬಾಯ್ಬಿಟ್ಟ ಅಂಬಿಕಾಪತಿ ಪುತ್ರ ಪ್ರದೀಪ್: 15 ವರ್ಷದ ಹಣವಂತೆ ಇದು!
ಕಲೆಕ್ಷನ್ ಸೆಂಟರ್: ಗುತ್ತಿಗೆದಾರರ ಸಂಘದವರು ನಮ್ಮ ಮೆಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿದ್ದರು. ಈಗ ಕಾಂಟ್ರಾಕ್ಟರ್ ಅಸೋಷಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಈ ಹಿಂದೆ ಇದೇ ವ್ಯಕ್ತಿ ಲಂಚ ಕೊಟ್ಟಿರುವ ಆರೋಪ ಬಂದಾಗ ಆತ ನಾನು ಕಾಂಟ್ರಾಕ್ಟ್ ಮಾಡಿಲ್ಲ ಅಂತ ಹೇಳಿದ್ದರು. ಕಾಂಟ್ರಾಕ್ಟರ್ ಮತ್ತು ಸರ್ಕಾರ ಒಂದಾಗಿ ರಾಜ್ಯ ಲೂಟಿ ಮಾಡಿದ್ದಾರೆ. ಅಕ್ರಮ ಹಣ ಸಂಗ್ರಹದ ಹಿನ್ನೆಲೆಯಲ್ಲಿ ಮನಿ ಲ್ಯಾಂಡರಿಂಗ್ ಆಕ್ಟನಲ್ಲಿ ಇಡಿ ತನಿಖೆ ಆಗಬೇಕು. ಭ್ರಷ್ಟಾಚಾರ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.