ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯ ಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉಡುಪಿ/ಮಂಗಳೂರು (ಜೂ.7) ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯ ಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು, ನಾಗರಿಕರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಮಕ್ಕಳು ಮತ್ತು ನಾಗರಿಕರು ಸಮುದ್ರ, ನದಿ ತೀರಕ್ಕೆ ಹೋಗದಂತೆ ಹಾಗೂ ಅಪಾಯಕಾರಿ ವಿದ್ಯುತ್ ಕಂಬ, ಮರ, ಕಟ್ಟಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ ಸಂಭವಿಸುವ ಪ್ರದೇಶಗಳ ಜನರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸಲಹೆ ಮಾಡಿದೆ.
undefined
ಕರ್ನಾಟಕದ ಕರಾವಳಿಗೆ ಈಗ ಚಂಡಮಾರುತ ಲಗ್ಗೆಯ ಭೀತಿ: 3 ದಿನ ಭಾರೀ ಮಳೆ
ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರವಹಿಸಬೇಕು ಎಂದು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಪೊರ್‌ಜಾಯ್ ಚಂಡಮಾರುತದಿಂದ ಮುಂಗಾರು ಮಳೆ ವಿಳಂಬ: ಕರಾವಳಿಯಲ್ಲಿಯೂ ಆತಂಕ
ಕಂಟ್ರೋಲ್ ರೂಂ
ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ 24*7 ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ತುರ್ತು ಸಂಪರ್ಕಕ್ಕೆ 1077 ಅಥವಾ 0824 2442590 ಸಂಪರ್ಕಿಸಬಹುದು.