ಕಲಬುರಗಿ: ಪ್ರೇಮ ಪ್ರಕರಣಕ್ಕೆ ಬಲಿಯಾಯ್ತಾ ಐದು ವರ್ಷದ ಪುಟ್ಟ ಮಗು?

Suvarna News   | Asianet News
Published : Dec 13, 2019, 02:44 PM ISTUpdated : Dec 13, 2019, 06:35 PM IST
ಕಲಬುರಗಿ: ಪ್ರೇಮ ಪ್ರಕರಣಕ್ಕೆ ಬಲಿಯಾಯ್ತಾ ಐದು ವರ್ಷದ ಪುಟ್ಟ ಮಗು?

ಸಾರಾಂಶ

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷದ ಬಾಲಕಿ ಸಾವು| ಜಿಲ್ಲೆಯ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದಲ್ಲಿ ನಡೆದ ಘಟನೆ| ಕಳೆದ ಒಂಬತ್ತು ದಿನಗಳ ಹಿಂದೆ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು|

ಕಲಬುರಗಿ(ಡಿ.13): ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷದ ಬಾಲಕಿ ಬಲಿಯಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದಲ್ಲಿ ಘಟನೆ ಇಂದು(ಶುಕ್ರವಾರ) ನಡೆದಿದೆ. ಮೃತ ಬಾಲಕಿಯನ್ನು ಶ್ವೇತಾ(5) ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನಲೆ 

ಕಳೆದ ಒಂಬತ್ತು ದಿನಗಳ ಹಿಂದೆ ಮನೆ ಮುಂದೆ ಆಟವಾಡುತ್ತಿದ್ದ ಶ್ವೇತಾ ಸಂಜೆ ಏಕಾಏಕಿ ನಾಪತ್ತೆಯಾಗಿದ್ದಳು. ಅದೇ ದಿನ ಬೆಳಿಗ್ಗೆ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗಳ ಕೂಡ ನಡೆದಿತ್ತು. ಮೃತ ಬಾಲಕಿಯ ಸಹೋದರ ಸಂಬಂಧಿ ಯುವತಿಯ ಜೊತೆ ಅನ್ಯ ಜಾತಿಯ ಯುವಕನ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿಯ ತಂದೆಯ ಜೊತೆಗೆ ಯುವಕನ ಕಡೆಯವರಿಂದ ಜಗಳ ನಡೆದಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇದೇ ದ್ವೇಷ ಇಟ್ಟುಕೊಂಡು ಯುವಕನ ಕಡೆಯವರು ನಮ್ಮ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಕೊಲೆಯಾದ ಬಾಲಕಿಯ ಹೆತ್ತವರು ಆರೋಪಿಸಿದ್ದಾರೆ. ಹೆತ್ತವರ ನಡುವೆ ಕೂಸು ಬಡವಾಯ್ತು ಅನ್ನೋ ಹಾಗೆ ಎರಡು ಕುಟುಂಬಗಳ ನಡುವಿನ ಜಗಳದಿಂದ ಇನ್ನೂ ಬದುಕಿ ಬಾಳಬೇಕಾಗಿದ್ದ ಪುಟ್ಟ ಮಗು ಸಾವನ್ನಪ್ಪಿದ್ದು ಮಾತ್ರ ವಿಪರ್ಯಾಸವೇ ಸರಿ.

ಡಿಸೆಂಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್