ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಬಳಿಯ ಕೊರಟಲದಿನ್ನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೈರೋಜ್ ಹಾಗೂ ಫಾಮೀದಾ ದಂಪತಿ ಪುತ್ರ ಸಮೀರ್ ಬಾಷಾ ಮೃತ ಬಾಲಕ.
ಚಿಕ್ಕಬಳ್ಳಾಪುರ (ನ.16) : ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಬಳಿಯ ಕೊರಟಲದಿನ್ನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೈರೋಜ್ ಹಾಗೂ ಫಾಮೀದಾ ದಂಪತಿ ಪುತ್ರ ಸಮೀರ್ ಬಾಷಾ ಮೃತ ಬಾಲಕ.
ಏನಿದು ಪ್ರಕರಣ: ಅಕ್ಟೋಬರ್ 30ರಂದು ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಸಮೀರ್ ಬಾಷಾಗೆ ನಾಯಿ ಕಚ್ಚಿದ ಹಿನ್ನೆಲೆಯಲ್ಲಿ ಆತನಿಗೆ ಪೋಷಕರು ಹೊಸೂರು ಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಯಿ ಕಡಿತಕ್ಕೆ ಇಂಜಕ್ಷನ್ ಕೊಡಿಸಿದ್ದಾರೆ. ನಂತರವೂ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಗೌರಿಬಿದನೂರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಾಲಕನನ್ನು ಕರೆತಂದಿದ್ದಾರೆ. ವೈದ್ಯರು ಪರಿಶೀಲಿಸಿ, ಬೆಂಗಳೂರು ಇಂದಿರಾಗಾಂಧಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಯೂ ಚಿಕಿತ್ಸೆ ಫಲಿಸದೇ ಬಾಲಕ ಅಸುನೀಗಿದ್ದಾನೆ. ಬಾಲಕನ ರಕ್ತ ಪರೀಕ್ಷೆಯಲ್ಲಿ ವಿಷ ಬಾಲಕನ ಮಿದುಳಿಗೆ ಪ್ರವೇಶಿಸಿರುವುದು ದೃಢಪಟ್ಟಿದೆ.
ವೈದ್ಯರ ನಿರ್ಲಕ್ಷ್ಯ ಬೆಳಕಿಗೆ : ತಮ್ಮ ಪುತ್ರನ ಮರಣ ಪ್ರಮಾಣ ಪತ್ರ ಪಡೆಯಲು ಪೋಷಕರು ಹೊಸೂರು ಸರ್ಕಾರಿ ಆಸ್ಪತ್ರೆಗೆ ಬಂದಾಗ, ಮಗುವಿಗೆ ನಾಯಿ ಕಡಿತಕ್ಕೆ ಲಸಿಕೆ ನೀಡಿದ ಬಗ್ಗೆ ವೈದ್ಯರು ಎಲ್ಲಿಯೂ ದಾಖಲು ಮಾಡದೇ ಇರುವುದು ಪತ್ತೆಯಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನಿಗೆ ಸಕಾಲದಲ್ಲಿ ಲಸಿಕೆ ಸಿಗದೇ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿ, ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನಿತ್ಯ ಸರಾಸರಿ 70 ಜನರಿಗೆ ಬೀದಿ ನಾಯಿ ಕಡಿತ!