* ನದಿ ತೀರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ
* ಕಳೆದೊಂದು ವಾರದಿಂದ ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ
* ಕಾಳಜಿ ಕೇಂದ್ರಗಳನ್ನ ತೆರೆಯಲು ನಿರ್ಧಾರ
ಯಾದಗಿರಿ(ಸೆ.12): ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಭೀಮಾ ನದಿಗೆ ಮತ್ತೆ ಪ್ರವಾಹ ಆತಂಕ ಎದುರಾಗಿದೆ. ಭೀಮಾ ನದಿ ತೀರಕ್ಕೆ ಯಾರು ತೆರಳದಂತೆ ಹಾಗೂ ನದಿಯಲ್ಲಿ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ.
ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದ ವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಜನತೆಗೆ ಡಿಸಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
undefined
ಪೋಷಕರೆದುರೇ ನದಿಗೆ ಹಾರಿದ್ದ ಯುವತಿ : ಭೀಮೆಯಲ್ಲಿ ಶವ ಪತ್ತೆ
ಭೀಮಾ ನದಿಗೆ ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. 3 ರಿಂದ 4 ಲಕ್ಷ ನೀರು ಬಂದ್ರೆ ತೊಂದರೆಯಾಗುತ್ತದೆ. ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರರ ಜತೆ ಸಭೆ ನಡೆಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭೀಮಾ ನದಿ ತೀರದ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಜಿಲ್ಲಾಧಿಕಾರಿಯವರು ಮನವಿ ಮಾಡಿದ್ದಾರೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ನಾಯ್ಕಲ್ ಸೇರಿದಂತೆ ಹಲವಾರು ಗ್ರಾಮಗಳ ಮನೆಗಳಿಗೆ ಹಾನಿಯಾಗಿದೆ. ಯಡ್ಡಳ್ಳಿ ಸೇತುವೆ ಕೊಚ್ಚಿ ಹೋಗಿದೆ. ಈ ಬಗ್ಗೆ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳನ್ನ ತೆರೆಯಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.