
ತುರುವೇಕೆರೆ (ಜ. 12): ಜನರು ತಮ್ಮ ಆಸ್ತಿ, ಅಂತಸ್ತುಗಳನ್ನು ವೃದ್ಧಿ ಮಾಡಿಕೊಳ್ಳುವುದಕ್ಕಿಂತ ಮುಖ್ಯವಾಗಿ ತಮ್ಮ ಆರೋಗ್ಯವನ್ನು ಬಹಳ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕು ಎಂದು ಕೆರೆಗೋಡಿ ಮಠದ ಗುರುಪರದೇಶಿಕೇಂದ್ರ ಮಹಾ ಸ್ವಾಮೀಜಿ ಹೇಳಿದರು.
ಪಟ್ಟಣದ ಕೆ.ಹಿರಣ್ಣಯ ಬಯಲುರಂಗ ಮಂದಿರದ ಆವರಣದಲ್ಲಿ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ತುಮುಲ್ ರೈತ ಕಲ್ಯಾಣ ಟ್ರಸ್ಟ್ ಹಾಗೂ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಸಿದ್ದಗಂಗಾ ಆಸ್ಪತ್ರೆ, ನಾರಾಯಣ ಹೃದಯಾಲಯ, ದಂತ ವೈದ್ಯಕೀಯ ಆಸ್ಪತ್ರೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ರೈತರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಎಲ್ಲರು ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕಿದೆ. ತುಮುಲ್ ಅಧ್ಯಕ್ಷ ಮಹಾಲಿಂಗಯ್ಯ ರೈತಪರವಾದ ಕಾಳಜಿ ವಹಿಸಿ ರೈತರಿಗೆ ಅನುಕೂಲವಾಗುವಂತಹ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ತಾಲೂಕಿನ ರೈತ ಬಾಂಧವರು ಸದುಪಯೋಗಪಡಿಸಿಕೊಳ್ಳಬೇಕæ್ಳಂದು ಹೇಳಿದರು. ಹೀಗೆಯೇ ಇನ್ನಿತರ ಎಲ್ಲಾ ಸಂಘ ಸಂಸ್ಥೆಗಳು ಇಂತಹ ಆರೋಗ್ಯ ಶಿಬಿರವನ್ನು ನಡೆಸುವ ಮೂಲಕ ಬಡವರಿಗೆ ನೆರವಾಗಬೇಕೆಂದು ಶ್ರೀಗಳು ಕರೆ ನೀಡಿದರು.
ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ರೈತರು ಹಲವು ಕೆಲಸದ ಒತ್ತಡದಲ್ಲಿ ತನ್ನ ಆರೋಗ್ಯಗದ ಬಗ್ಗೆ ಗಮನ ನೀಡುವುದಿಲ್ಲ. ಇಂತಹ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಎಂ.ಡಿ.ಲಕ್ಷ್ಮೇನಾರಾಯಣ್ ಮಾತನಾಡಿ, ಮಹಾಲಿಂಗಯ್ಯ ತುಮುಲ್ ಅಧ್ಯಕ್ಷರಾಗಿ ಬಹಳ ಅಭಿವೃದ್ಧಿ ಮಾಡಿದ್ದಾರೆ. ಜನರ ಸೇವೆ ಮಾಡುವುದರ ಜೊತೆಗೆ ರೈತರಿಗೂ ಹಲವು ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಮಾಡಿದ್ದು ಇಂತಹ ಆರೋಗ್ಯ ಶಿಬಿರಗಳು ಇನ್ನು ಹೆಚ್ಚಾಗಿ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಸಿಬ್ಬಂದಿ ವರ್ಗ ಹಾಗೂ ಅಭಿಮಾನಿಗಳು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯನವರಿಗೆ ಬೆಳ್ಳಿಕಿರೀಟ ತೊಡಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿಯ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ತುಮುಲ್ ಅಧ್ಯಕ್ಷ ಸಿ.ವಿ. ಮಹಾಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕ ಎಸ್.ರುದ್ರಪ್ಪ, ಮಾಜಿ ಎಂಎಲ್‌ಸಿ ಬೆಮೆಲ್ ಕಾಂತರಾಜು ಮಾತನಾಡಿದರು. ತುಮುಲ್ ನಿರ್ದೇಶಕರಾದ ಹಳೇಮನೆ ಶಿವನಂಜಪ್ಪ, ಎಸ್.ಆರ್.ಗೌಡ, ಎಂ.ಕೆ.ಪ್ರಕಾಶ್, ಡಿ.ಕೃಷ್ಣಕುಮಾರ್, ಚನ್ನಮಲ್ಲಪ್ಪ, ಎಸ್.ವಿಜಯಕುಮಾರ್, ಟ್ರಸ್ಟ್ ಅಧ್ಯಕ್ಷ ಪ್ರಸಾದ್, ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾ¿åಪ್ಪ, ಮುಖಂಡರಾದ ಕೊಂಡಜ್ಜಿವಿಶ್ವನಾಥ್, ಜಿ.ಪಂ ಮಾಜಿ ಸದಸ್ಯರಾದ ಶ್ರೀನಿವಾಸ್, ಜಗದೀಶ್, ಎಂ.ಜಿ.ಶಿವರಾಮ್, ಸುರೇಶ್, ಡಾ. ಎಸ್. ಶಿವರಾಮ್, ಡಾ.ಎಸ್.ಪರಮೇಶ್, ಡಾ.ಶಿವಕುಮಾರ್, ಡಾ.ವೈ.ಪಿ. ಧರ್ಮೇಂದ್ರ, ಡಾ.ಕಾಂತರಾಜು ಸೇರಿದಂತೆ ತುಮುಲ್ ಒಕ್ಕೂಟದ ಅಧಿಕಾರಿಗಳು ಹಾಗೂ ರೈತ ಬಾಂಧವರು ಇದ್ದರು.
ಶಿಬಿರದಲ್ಲಿ ಹೃದಯ, ನರ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್, ಶಸ್ತ್ರ ಚಿಕಿತ್ಸೆ, ಗರ್ಭಿಣಿ ಮತ್ತು ಸ್ತ್ರೀ ರೋಗ, ದಂತ, ಕಿವಿ, ಮೂಗು ಮತ್ತು ಗಂಟಲು, ಮಕ್ಕಳ ಕಾಯಿಲೆ, ಕಣ್ಣು, ಚರ್ಮ, ಪಿತ್ತ, ಕೀಲು, ಮೂಳೆ, ಮಾನಸಿಕ, ಬಂಜೆತನ, ಗರ್ಭಕೋಶ ಕಾಯಿಲೆಗಳಿಗೆ ಸಂಬಂಧಿಸಿದಂತೆ ಸಾವಿರಾರು ರೈತರು ಆಗಮಿಸಿ ತಪಾಸಣೆ ಮಾಡಿಸಿಕೊಂಡರು. ಆರೋಗ್ಯ ಶಿಬಿರಕ್ಕೆ ಬಂದ ಸಾವಿರಾರು ರೋಗಿಗಳಿಗೆ ಊಟ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.