ದೇಶದ ಬಡ ಜನರು ಹಸಿವಿನಿಂದ ಬಳಲಬಾರದು ಎಂಬ ಮಹತ್ವಾ ಕಾಂಕ್ಷೆಯಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಆಹಾರ ಭದ್ರತೆಯ ಕಾಯ್ದೆ ಜಾರಿಗೊಳಿಸಿ ದೇಶದ ಸುಮಾರು 80 ಕೋಟಿ ಜನರಿಗೆ ಉಚಿತವಾಗಿ 5 ಕೆ.ಜಿ. ಅಕ್ಕಿ ಕೊಡುವ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದ್ದು ಕಾಂಗ್ರೆಸ್ ಸರ್ಕಾರ ಹೆಗ್ಗಳಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ : ದೇಶದ ಬಡ ಜನರು ಹಸಿವಿನಿಂದ ಬಳಲಬಾರದು ಎಂಬ ಮಹತ್ವಾ ಕಾಂಕ್ಷೆಯಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಆಹಾರ ಭದ್ರತೆಯ ಕಾಯ್ದೆ ಜಾರಿಗೊಳಿಸಿ ದೇಶದ ಸುಮಾರು 80 ಕೋಟಿ ಜನರಿಗೆ ಉಚಿತವಾಗಿ 5 ಕೆ.ಜಿ. ಅಕ್ಕಿ ಕೊಡುವ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದ್ದು ಕಾಂಗ್ರೆಸ್ ಸರ್ಕಾರ ಹೆಗ್ಗಳಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಮಂಗಳವಾರ ತಾಲೂಕಿನ ಲಕ್ಷ್ಮೇಸಾಗರ ಗ್ರಾಪಂ ವ್ಯಾಪ್ತಿಯ ಗಾಂಧಿ ನಗರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಬೆಲೆಯೇರಿಕೆಯಿಂದ ತತ್ತರಿಸಿದ್ದ ಕುಟುಂಬಕ್ಕೆ ಆರ್ಥಿಕ ಚೈತನ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದೆ. ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲಿ ಚುನಾವಣಾ ಪೂರ್ವ ನೀಡಿದ ಭರವಸೆಗಳಲ್ಲಿ ನಾಲ್ಕು ಭರವಸೆಯನ್ನು ಈಡೇರಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕಿರುವ ಬದ್ಧತೆ ಎಂದರು.
ಸಿಡಿಪಿಓ ರಾಜನಾಯಕ್ ಮಾತನಾಡಿ, ಯೋಜನೆಗೆ ಚಾಲನೆ ನೀಡಿದ ನಾಲ್ಕು ದಿನಗಳಲ್ಲಿ ಜಿಲ್ಲೆಯಲ್ಲಿಯೇ ಅತಿಹೆಚ್ಚು 19256 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಲಕ್ಷ್ಮಿಸಾಗರ ಗ್ರಾಪಂ ಅಧ್ಯಕ್ಷ ಮೀಠ್ಯಾ ನಾಯಕ್, ಇಒ ಅನಂತರಾಜು, ಮುಖಂಡರಾದ ಸೋರೆಕುಂಟೆ ಸತ್ಯನಾರಾಯಣ, ಪೆದ್ದರಾಜು, ಸಾಯಿಪ್ರಕಾಶ್, ಪಿಡಿಒ ಗಂಗಾಧರ್ ಸೇರಿದಂತೆ ಹಲವರು ಹಾಜರಿದ್ದರು.
ಗ್ಯಾರಂಟಿಗಳಿಂದ ವಿಪಕ್ಷಗಳ ಹೊಟ್ಟೆಗೆ ಬೆಂಕಿ
ಕನಕಪುರ (ಜು.25): ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ತಾಲೂಕಿನ ಸಾತನೂರು ಹೋಬಳಿಯ ಅಚ್ಚಲು ಸರ್ಕಾರಿ ಶಾಲೆ ಆವರಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಿಗೆ ಬಿಡಿಸಿಸಿ ಬ್ಯಾಂಕ್ ವತಿಯಿಂದ ಸಾಲ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೊಟ್ಟೆಉರಿಕೊಳ್ಳುತ್ತಿದ್ದಾರೆ.
ಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ: ವೀಡಿಯೋ ವೈರಲ್
ಗ್ಯಾರಂಟಿಗಳಿಂದ ಸರ್ಕಾರ ಮುಳುಗಿ ಹೋಯಿತು ಎಂದು ಬಾಯಿ ಬಡಿದುಕೊಳ್ಳುತ್ತಿದ್ದರು. ಅವರ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ತಿಂದಾಗ ಸರ್ಕಾರ ಮುಳುಗಲಿಲ್ಲ. ಈಗ ಬಡವರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿರುವುದು ವಿರೋಧಪಕ್ಷದ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮತ್ತು ಕುಮಾರಸ್ವಾಮಿ ಇಬ್ಬರು ಕೈ ಕೈ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ. ನಾವು ಅವರ ಕೇಳಿದ್ದಕ್ಕೆಲ್ಲ ಲೆಕ್ಕ ಕೊಡುವ ಪ್ರಶ್ನೆ ಬರುವುದಿಲ್ಲ. ನಮ್ಮ ಉದ್ದೇಶ ಈ ರಾಜ್ಯದ ಬಡವರ ಕಲ್ಯಾಣವಾಗಬೇಕು