ಹನೂರು (ನ.17) : ಮಹದೇಶ್ವರ ಬೆಟ್ಟದ ಕುಗ್ರಾಮಗಳಿಗೆ ಮೂಲಸೌಲಭ್ಯ ಕಲ್ಪಿಸಿ ನಂತರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸಿ ಇಲ್ಲದಿದ್ದರೆ ಕೈಬಿಡಿ ಎಂದು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಒತ್ತಾಯಿಸಿದರು. ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳಿಂದ ಕರೆಯಲಾಗಿದ್ದ ಪ್ರತಿಭಟನೆ ಮೆರವಣಿಗೆ ನಡೆಸಿ ಕೊಳ್ಳೇಗಾಲ ಮಲೆಮಾದೇಶ್ವರ ಬೆಟ್ಟದ ಚೆಕ್‌ಪೋಸ್ಟ್ ಬಳಿ ಪ್ರತಿಭಟನೆ ನಡೆಸಿ ಅವರ ಮಾತನಾಡಿದರು.
ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಕುಗ್ರಾಮಗಳಿಗೆ ಕುಡಿವ ನೀರಿನ ವ್ಯವಸ್ಥೆ, ರಸ್ತೆ, ವಿದ್ಯುತ್, ಕಾಡಿನ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯಕಾಪಾಡಿಕೊಳ್ಳಲು ಮಲೆಮಹದೇಶ್ವರ ಬೆಟ್ಟದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಹಾಗೂ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ನಮಗೆ ಬೇಡ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
undefined
ಚಾಮರಾಜನಗರ: ಬಂಡೀಪುರ ಅರಣ್ಯದಲ್ಲಿ ದಂಪತಿಗೆ ಹುಲಿರಾಯನ ದರ್ಶನ
ಈ ವೇಳೆ ಮಾತನಾಡಿದ ಅವರು ಅರಣ್ಯ ಇಲಾಖೆಯ ಉಪಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಎಲ್ಲಾ ತರದಲ್ಲೂ ಗ್ರಾಮಸ್ಥರಿಗೆ ಸ್ಪಂದಿಸುತ್ತಿದ್ದರು. ಆದರೆ, ವರ್ಗಾವಣೆ ನಂತರ ಈಗ ಬಂದಿರುವ ಡಿಸಿಎಫ್ ಸಂತೋಷ್ ಗ್ರಾಮಸ್ಥರಿಗೆ ಹಾಗೂ ರೈತರಿಗೆ ಸ್ಪಂದಿಸುತ್ತಿಲ್ಲ. ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಲು ಮನವಿ ಮಾಡಲಾಗಿತ್ತು. ಆದರೂ, ಅಧಿಕಾರಿ ಬರದೇ ಇರುವುದರಿಂದ ಸರ್ಕಾರ ಕೂಡಲೇ ವರ್ಗಾವಣೆ ಮಾಡಬೇಕು. ಇಂತಹ ಅಧಿಕಾರಿ ನಮಗೆ ಬೇಕಾಗಿಲ್ಲ ಎಂದು ಧಿಕ್ಕಾರ ಘೋಷಣೆ ಕೂಗಿದರು. ಸರ್ಕಾರ ಇದನ್ನು ಮನಗಂಡು ಕೂಡಲೇ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆಗೂ ಮುನ್ನ ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಗ್ರಾಮಸ್ಥರಿಗೆ ತೊಂದರೆ ಆಗದಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು
ಮಹಿಳಾ ಸಂಘಟನೆಗಳ ಬೇಡಿಕೆ: ಮಲೆಮಾದೇಶ್ವರ ಬೆಟ್ಟದಲ್ಲಿ ಸಮುದಾಯ ಆರೋಗ್ಯಕೇಂದ್ರ ನಿರ್ಮಿಸಲು ಕಳೆದ ಎರಡು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ 13 ಕೋಟಿ ಅನುದಾನ ನೀಡಿದ್ದಾರೆ.
ಆದರೆ, ಸಮುದಾಯ ಆರೋಗ್ಯ ಕೇಂದ್ರ ಕಾಮಗಾರಿ ಪ್ರಾರಂಭಿಸಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಬಂಧಪಟ್ಟಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರತಿಭಟನೆಯಲ್ಲಿ ಮಹಿಳಾ ಸಂಘಟನೆಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಭರವಸೆ: ಮಲೆಮಹದೇಶ್ವರ ಬೆಟ್ಟದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಮುಂದಿನ ದಿನಗಳಲ್ಲಿ ಮಲೆಮಾದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಆಗಮಿಸುವ ವೇಳೆ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್‌ಒ ವಿಶ್ವೇಶ್ವರಯ್ಯ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ರೈತ ಸಂಘದ ಸಂಘಟನಾ ಕಾರ್ಯದರ್ಶಿ ಹೊನ್ನೂರ್ ಬಸವಣ್ಣ ಮಾತನಾಡಿ, ಮಲೆಮಹದೇಶ್ವರ ಬೆಟ್ಟದ ಸುತ್ತಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸದ ಗ್ರಾ.ಪಂ. ಹಾಗೂ ಹಿರಿಯ ಅಧಿಕಾರಿಗಳು ಕಳೆದ ಐದು ವರ್ಷಗಳಿಂದ ಮಾಡಿದ ಅನುದಾನ ವೆಚ್ಚವನ್ನು ಸರ್ಕಾರ ತನಿಖೆಗೆ ಒಳಪಡಿಸಬೇಕು ಮತ್ತು ಮಲೆಮಹದೇಶ್ವರ ಬೆಟ್ಟಸುತ್ತಲಿನ ಗ್ರಾಮಗಳಲ್ಲಿ ಸೋಲಾರ್ ಪ್ಯಾನೆಲ್ ನೀಡಿದ್ದು, ಪದೇಪದೇ ದುರಸ್ತಿಗೆ ಒಳಗಾಗುತ್ತಿದೆ. ಕೂಡಲೇ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು. ಸೋಲಾರ್ ಘಟಕ ನಿರ್ಮಾಣ ಬಗ್ಗೆ ಸರ್ಕಾರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು
ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಲು ಸರ್ಕಾರದ ಸಚಿವರಿಂದಲೇ ವಿರೋಧ!
ಎಸಿಎಫ್ ನಂದಕುಮಾರ್ ಮಾತನಾಡಿ, ನಿಮ್ಮ ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲು ನಿಮ್ಮ ಮನವಿಯನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಹನೂರು ತಾಲೂಕು ಘಟಕದ ಅಧ್ಯಕ್ಷರಾದ ಚಂಗಡಿ ಕರಿಯಪ್ಪ, ಚನ್ನೂರು ಶಾಂತಕುಮಾರ್, ಕೆ. ವಿ. ಮಾದೇಶ್, ಮೈರಾಡ ಮಂಜುನಾಥ್, ಕೆಂಚಪ್ಪ , ನಾಗ, ಮಹಿಳಾ ಸ್ವಸಹಾಯ ಸಂಘಗಳು ರೈತ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಪೋಲಿಸ್ ಇಲಾಖೆ ಸೂಕ್ತ ಬಂದೋಬಸ್‌್ತ ಕಲ್ಪಿಸಲಾಗಿತ್ತು.