ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆಯ ವೈದ್ಯ ಹಾಗೂ ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ಜರುಗಿದೆ.
ಹಾವೇರಿ (ಏ.7) : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆಯ ವೈದ್ಯ ಹಾಗೂ ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ಜರುಗಿದೆ.
ಜಿಲ್ಲಾಸ್ಪತ್ರೆಯ ಪ್ರಸೂತಿ ತಜ್ಞ ಡಾ. ಉಮೇಶ(Dr Umesh disttrict surgeon haveri) ಕೆಳಗಿನಮನಿ ಹಾಗೂ ಹೊಮ್ಮರಡಿ ಗ್ರಾಮ(Hommareddy village)ದ ಆಶಾ ಕಾರ್ಯಕರ್ತೆ ದ್ರಾಕ್ಷಾಯಣಿ ಚಿಕ್ಕನಂದಿ ಅವರನ್ನು ಲೋಕಾಯುಕ್ತ ಪೊಲೀಸರು(Karnataka Lokayukta police) ಬಂಧಿಸಿದ್ದಾರೆ. ವೀರೇಶ ಶಿವ್ವಪ್ಪ ಹಾದರಗೇರಿ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಸೋದರಿ ಸಂಬಂಧಿ ಲಕ್ಷ್ಮಿ ಅವರಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು ವೈದ್ಯ ಡಾ. ಉಮೇಶ, ಆಶಾ ಕಾರ್ಯಕರ್ತೆ ದ್ರಾಕ್ಷಾಯಣಿ . 4 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು . 2000 ಮುಖಂಡವಾಗಿ ಪಡೆದಿದ್ದರು. ಉಳಿದ . 2000 ವೈದ್ಯ ಉಮೇಶ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಹೊಸರಿತ್ತಿ ಗ್ರಾಮದಲ್ಲಿರುವ ವೈದ್ಯರ ಮನೆಯನ್ನು ಲೋಕಾಯುಕ್ತ ಪೊಲೀಸರು ಶೋಧನೆ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
undefined
ಗದಗ: ಲಂಚ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಏಜೆಂಟ್, ಕಂದಾಯ ನಿರೀಕ್ಷಕ ಪರಾರಿ..!
ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಪಿಎಸ್‌ಐ
ಬೀದರ್: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಹಾಗೂ ಕಾನ್‌ಸ್ಟೇಬಲ್ ಸಿಕ್ಕಿಬಿದ್ದಿದ್ದಾರೆ.
ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್, ಕಾನ್‌ಸ್ಟೇಬಲ್ ಪರಶುರಾಮರೆಡ್ಡಿ ಅವರನ್ನು ಲೋಕಾಯುಕ್ತ ಬಲೆಗೆ ಬೀಳಿಸಲಾಗಿದೆ. ದೂರುದಾರ ಇರ್ಷಾದ್ ಪಟೇಲ್ ಎಬುವವರಿಂದ ಪೊಲೀಸ್ ಠಾಣೆಯಲ್ಲಿಯೆ ಬುಧವಾರ ಸಂಜೆ 21 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಬೆಂಗಳೂರು: ಸರ್ಕಾರಿ ಅಧಿಕಾರಿಗಳನ್ನೇ ಸುಲಿಗೆ ಮಾಡುತ್ತಿದ್ದ ರೆಡ್ಡಿ ಗ್ಯಾಂಗ್..!
ಅನುಮತಿ ಪಡೆದು ಮೂರು ಲಾರಿ ಮುಖಾಂತರ ಮರಳು ಸಾಗಾಣಿಕೆ ನಡೆಸುತ್ತಿದ್ದ ಇರ್ಷಾದ್ ಪ್ರತಿ ಲಾರಿಗೆ ಪ್ರತಿ ತಿಂಗಳು 7 ಸಾವಿರ ರು. ನೀಡುವಂತೆ ಬೇಡಿಕೆ ಇಟ್ಟಿದ್ದರೆಂದು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಲೋಕಾಯುಕ್ತ ಡಿಎಸ್‌ಪಿ ಓಲೇಕಾರ ನೇತೃತ್ವದ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ.