ಸರ್ಕಾರದಿಂದ ಕಂದಾಯ ಗ್ರಾಮ ರಚನೆ: ನಾರಾಯಣಸ್ವಾಮಿ

By Kannadaprabha News  |  First Published Mar 28, 2023, 10:40 AM IST

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ತಾಂಡಾಗಳು, ಗೊಲ್ಲರಹಟ್ಟಿಗಳು, ವಡ್ಡರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿರಲಿಲ್ಲ. ಇದರ ಬಗ್ಗೆ ಈವರೆಗೂ ಯಾವುದೇ ಸರ್ಕಾರ ಗಮನ ಹರಿಸಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿ ಕ್ರಮ ಕೈಗೊಂಡ ಫಲವಾಗಿ ಇಂದು ತಾಂಡಾಗಳು, ಗೊಲ್ಲರಹಟ್ಟಿಗಳು, ವಡ್ಡರಹಟ್ಟಿಗಳು ಕಂದಾಯ ಗ್ರಾಮಗಳಾಗುತ್ತಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.


  ಶಿರಾ :  ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ತಾಂಡಾಗಳು, ಗೊಲ್ಲರಹಟ್ಟಿಗಳು, ವಡ್ಡರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿರಲಿಲ್ಲ. ಇದರ ಬಗ್ಗೆ ಈವರೆಗೂ ಯಾವುದೇ ಸರ್ಕಾರ ಗಮನ ಹರಿಸಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿ ಕ್ರಮ ಕೈಗೊಂಡ ಫಲವಾಗಿ ಇಂದು ತಾಂಡಾಗಳು, ಗೊಲ್ಲರಹಟ್ಟಿಗಳು, ವಡ್ಡರಹಟ್ಟಿಗಳು ಕಂದಾಯ ಗ್ರಾಮಗಳಾಗುತ್ತಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿಗಳ ನಿವೇಶನ ಮಂಜೂರಾತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು. ಹಲವಾರು ವರ್ಷಗಳಿಂದ ಗೊಲ್ಲರಹಟ್ಟಿಗಳು, ವಡ್ಡರಹಟ್ಟಿ, ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡದೆ ಅಲ್ಲಿ ವಾಸಿಸುತ್ತಿದ್ದ ನಿವಾಸಿಗಳಿಗೆ ತಮ್ಮ ಮನೆಯ ಹಕ್ಕುಪತ್ರ ಇಲ್ಲದೆ ವಾಸ ಮಾಡುತ್ತಿದ್ದರು. ಮುಖ್ಯಮಂತ್ರಿ , ಕಂದಾಯ ಸಚಿವ ಆರ್‌.ಅಶೋಕ ಅವರ ಇಚ್ಛಾಶಕ್ತಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಮಾರ್ಗದರ್ಶನದಿಂದ ತಾಂಡಗಳು, ಗೊಲ್ಲರಹಟ್ಟಿಗಳು, ವಡ್ಡರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಮೂಲಕ ಅಲ್ಲಿ ವಾಸ ಮಾಡುತ್ತಿದ್ದ ಜನತೆಯ ಆಸ್ತಿಗಳಿಗೆ ಬೆಲೆ, ಗೌರವ ತಂದುಕೊಟ್ಟಿದೆ ಎಂದರು.

Tap to resize

Latest Videos

ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಮಾತನಾಡಿ ತಾಂಡಗಳು, ಗೊಲ್ಲರಹಟ್ಟಿ, ವಡ್ಡರಹಟ್ಟಿಗಳು ಕಂದಾಯ ಗ್ರಾಮಗಳಾದ ಕಾರಣ ಅವುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಆಗುತ್ತಿರಲಿಲ್ಲ. ಅಲ್ಲಿ ವಾಸಿಸುತ್ತಿದ್ದ ನಿವಾಸಿಗಳಿಗೆ ತಾವು ವಾಸಿಸುವ ಜಾಗಕ್ಕೆ ಯಾವುದೇ ದಾಖಲೆಗಳು ಇಲ್ಲದೆ ಸರ್ಕಾರದಿಂದ ಸಿಗುವ ಯಾವುದೇ ಸವಲತ್ತುಗಳನ್ನು ಪಡೆಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ರಾಜ್ಯ ಸರ್ಕಾರ ತಾಂಡಗಳು, ಗೊಲ್ಲರಹಟ್ಟಿ, ವಡ್ಡರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಮೂಲಕ ಜನರಿಗೆ ಅವರ ಆಸ್ತಿಗಳಿಗೆ ಹಕ್ಕುಗಳನ್ನು ನೀಡಿದೆ. ಜಿಲ್ಲೆಯಲ್ಲಿಯೇ ಸುಮಾರು 1200 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಮಂಜೂರಾತಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ. ಎರಡುವರೆ ವರ್ಷಗಳಲ್ಲಿ ಶಕ್ತಿಮಿರಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮತ್ತೆ ನಮ್ಮದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಶಿರಾ ತಾಲೂಕನ್ನು ಕರ್ನಾಟಕದಲ್ಲಿ ನಂಬರ್‌ ಒನ್‌ ತಾಲೂಕನ್ನಾಗಿ ಅಭಿವೃದ್ಧಿಪಡಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ, ತಹಸೀಲ್ದಾರ್‌ ಮುರುಳೀಧರ್‌, ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಶಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್‌.ಮಾರುತೀಶ್‌, ಸದಸ್ಯ ನರಸಿಂಹರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್‌, ಶಿರಾ ತಾಲೂಕು ಬಗರ್‌ಹುಕುಂ ಸಮಿತಿ ಸದಸ್ಯ ಕೋಟೆ ರವಿ, ನಗರಸಭೆ ಸದಸ್ಯ ರಂಗರಾಜು, ಮುಖಂಡರಾದ ಮದಲೂರು ಮೂರ್ತಿ ಮಾಸ್ಟರ್‌, ಯಲಿಯೂರು ಮಂಜುನಾಥ್‌ ಸೇರಿದಂತೆ ಹಲವರು ಹಾಜರಿದ್ದರು.

ತಾಂಡಾಗಳಿನ್ನು ಕಂದಾಯ ಗ್ರಾಮ

ಕಲಬುರಗಿ (ಆ.20): ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೆ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಅರ್.ಅಶೋಕ ಘೋಷಿಸಿದ್ದಾರೆ‌. ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಇಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯ 453 ತಾಂಡಾಗಳನ್ನು ಪೈಲೇಟ್ ಯೋಜನೆಯಡಿ ಕೈಗೆತ್ತಿಕೊಂಡು ಕಂದಾಯ ಗ್ರಾಮಗಳನ್ನಾಗಿ ಮುಂದಿನ ಎರಡು ತಿಂಗಳಲ್ಲಿ ಮಾಡಲಾಗುವುದು. ಇದಲ್ಲದೆ ಪ್ರಸ್ತುತ ತಾಂಡಾ, ಹಟ್ಟಿಯಲ್ಲಿ (ಶಾಲಾ-ಕಾಲೇಜು, ಸ್ಮಶಾನ ಹೊರತುಪಡಿಸಿ) ಅನಧಿಕೃತವಾಗಿ ವಾಸಿಸುವರನ್ನು ಅಧಿಕೃತಗೊಳಿಸಿ ಎಷ್ಟು ವಿಸ್ತೀರ್ಣದಲ್ಲಿ ಇದ್ದಾರೆ ಅಷ್ಟು ಜಾಗದ ನಿವೇಶನ, ಮನೆ ಅವರ ಹೆಸರಿಗೆ ನೋಂದಣಿ ಮಾಡಿಸಿ ಮನೆ ಕಟ್ಟಲು ಆರ್ಥಿಕ ಸಹಾಯಧನ ನೀಡಲಾಗುವುದು. ರಾಜ್ಯದಲ್ಲಿ ಏಕಕಾಲದಲ್ಲಿ  30 ಸಾವಿರ ಜನರಿಗೆ ಹಕ್ಕು ಪತ್ರ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಕೃಷಿ ಕಾರ್ಮಿಕರ ಮಕ್ಕಳಿಗೂ ಸ್ಕಾಲರ್ಶಿಪ್: 10 ಎಕರೆ ಒಳಗೆ ಉಳುಮೆ ಮಾಡುತ್ತಿರುವ ಕೃಷಿ ಕೂಲಿ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ನಿಟ್ಟಿನಲ್ಲಿ ಇಂಜಿನೀಯರಿಂಗ್, ವೈದ್ಯಕೀಯ, ಶಿಕ್ಷಣ, ವಕೀಲ ವೃತ್ತಿಯ ಉನ್ನತ ಶಿಕ್ಷಣ ಪಡೆಯಲು ಅವರ ಮಕ್ಕಳಿಗೂ ವಿದ್ಯಾರ್ಥಿ ವೇತನ ನೀಡಲಾಗುವುದು. ಸವಿತಾ, ಕುಂಬಾರ, ಬಡಿಗೇರ್ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ. ಉದ್ಯೋಗ ನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಮನೆ‌-ಮನೆಗೆ ಕಂದಾಯ ದಾಖಲೆಗಳು ಅಭಿಯಾನದಲ್ಲಿ 50 ಸಾವಿರ ಜನರಿಗೆ ಜಾತಿ, ಆದಾಯ, ಪಹಣಿ ಪತ್ರಗಳನ್ನು ನೀಡಲಾಗಿದೆ. ಕಳೆದ 10 ಗ್ರಾಮ ವಾಸ್ತವ್ಯದಲ್ಲಿ ಇಂದಿಲ್ಲಿ ದಾಖಲೆ ಪ್ರಮಾಣದಲ್ಲಿ 28,900 ಜನರಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದ ಅವರು ಇದು ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಪ್ರತಿಫಲ ಎಂದರು

click me!