ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಎಸ್ಐಟಿ ರಚನೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

By Govindaraj S  |  First Published Dec 9, 2023, 9:44 PM IST

ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಎಸ್ಐಟಿ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. 
 


ಬೆಂಗಳೂರು (ಡಿ.09): ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಎಸ್ಐಟಿ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. 2019 ರಿಂದ 2023 ಏಪ್ರಿಲ್ ವರೆಗೆ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶಿಸಿತ್ತು. 15 ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಗುತ್ತಿಗೆದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಡಿಸೆಂಬರ್ 19ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ಹೈಕೋರ್ಟಲ್ಲಿ  ಮತ್ತೆ ಆನ್‌ಲೈನ್‌ ಕಲಾಪ: ರಾಜ್ಯ ಹೈಕೋರ್ಟ್‌ನ ಮೂರು ಪೀಠಗಳಲ್ಲಿ ಸ್ಥಗಿತಗೊಂಡಿರುವ ವಿಡಿಯೊ ಕಾನ್ಫರೆನ್ಸ್ ಸೇವೆ ಸೋಮವಾರದಿಂದ ಪುನಾರಂಭವಾಗಲಿದೆ. ಸೋಮವಾರದಿಂದ ಪ್ರಾಯೋಗಿಕ (ಪೈಲಟ್) ಆಧಾರದಲ್ಲಿ ಮತ್ತೆ ವಿಡಿಯೋ ಕಾನ್ಫರೆನ್ಸ್‌ ಆರಂಭಿಸಲಾಗುತ್ತದೆ. ಈ ಸಂಬಂಧ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ. ಎಲ್ಲಾ ವಕೀಲರು, ಪಾರ್ಟಿ ಇನ್ ಪರ್ಸನ್ಸ್, ಕಕ್ಷಿದಾರರು (ದಾವೆದಾರರು) ಕಡ್ಡಾಯವಾಗಿ ಜೂಮ್ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಾಯಿತ ಬಳಕೆದಾರರನ್ನು ಮಾತ್ರ ನ್ಯಾಯಾಲಯದ ಕಲಾಪಕ್ಕೆ ಅನುಮತಿಸಲಾಗುವುದು ಎಂದು ಹೈಕೋರ್ಟ್‌ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tap to resize

Latest Videos

ಜೂಮ್‌ ವೇದಿಕೆ ಮೂಲಕ ಕಲಾಪಕ್ಕೆ (ವಿಡಿಯೋ ಕಾನ್ಫರೆನ್ಸ್‌) ಹಾಜರಾಗುವ ವಕೀಲರು, ಪಾರ್ಟಿ ಇನ್ ಪರ್ಸನ್ಸ್, ದಾವೆದಾರರು ಪ್ರಕರಣಗಳ ವಿಚಾರಣಾ ಪಟ್ಟಿ, ಪ್ರಕರಣದ ಸಂಖ್ಯೆ ಮತ್ತು ಹೆಸರನ್ನು ಉಲ್ಲೇಖಿಸಬೇಕು. ಎಲ್ಲಾ ಕೋರ್ಟ್ ಹಾಲ್‌ಗಳಲ್ಲಿ ಕಾಯ್ದಿರಿಸುವ ಕೊಠಡಿ ಇರಲಿದೆ. ಸರಿಯಾದ ಪ್ರಕರಣದ ಸಂಖ್ಯೆ ಉಲ್ಲೇಖಿಸಿರುವವರನ್ನು ಮಾತ್ರ ಕಲಾಪಕ್ಕೆ ಅನುಮತಿಸಲಾಗುತ್ತದೆ. ಭಾರತದ ಹೊರಗಿನಿಂದ ವಿಚಾರಣೆಯಲ್ಲಿ ಭಾಗವಹಿಸುವವರು ನ್ಯಾಯಾಂಗ ರಿಜಿಸ್ಟ್ರಾರ್ ಅವರಿಗೆ ಇ-ಮೇಲ್ (regjudicial@hck.gov.in) ಕಳುಹಿಸಿ ಅನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಇದೇ ಡಿ.4ರಂದು ಹೈಕೋರ್ಟ್‌ನ ಕೆಲ ಕೋರ್ಟ್‌ ಹಾಲ್‌ಗಳಲ್ಲಿ ವಿಡಿಯೊ ಕಾನ್ಫರೆನ್ಸ್ ವೇಳೆ ಅನುಚಿತ ಘಟನೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಡಿ.5ರಿಂದ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೊ ಕಾನ್ಫರೆನ್ಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

click me!