ಸಚಿವ ಬಿ ಸಿ ಪಾಟೀಲ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

Suvarna News   | Asianet News
Published : Mar 08, 2020, 08:39 PM IST
ಸಚಿವ ಬಿ ಸಿ ಪಾಟೀಲ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಸಾರಾಂಶ

ಬಿ ಸಿ ಪಾಟೀಲಗೆ ಸಾಲ ಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ|ನಾನು ಅಧಿಕಾರದಿಂದ ಇಳಿಯುವಾಗ ಬರಿ ಘೋಷಣೆ ಮಾಡಿಲ್ಲ.ಬದಲಿಗೆ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ|ತೆವಲಿಗೆ ಮಾತನಾಡಿಕೊಂಡು ಸುಳ್ಳು ಹೇಳಿಕೊಂಡು ಓಡಾಡೋದು ಬೇಡ|

ಮೈಸೂರು[ಮಾ.08]: ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ ರಾಜ್ಯದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನ ಸ್ಥಗಿತ ಮಾಡಿದೆ.‌ ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ನನ್ನ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಅಂತ ಗಲಾಟೆ ಮಾಡಿದ್ದಾರೆ. ಅದು ಸಹ ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಅಂತ ಕೇಳಿದ್ದಾರೆ. ಸಿಎಂ ನೆರೆ ಹಾವಳಿಯ ಜನರಿಗೆ ಹಣ ಬಿಡುಗಡೆ ಮಾಡಿ ಅಂತ ಹೇಳಿದ್ದಾರೆ. ಆದರೂ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೇವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ದ ಹೆಚ್‌ಡಿಕೆ ಗರಂ ಆಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆ ಯಪ್ಪನಿಗೆ ಸಾಲ ಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ.ಸಾಲ ಮನ್ನಾದ ಬಗ್ಗೆ ಆ ಕೃಷಿ ಸಚಿವರಿಗೆ ವಿಷಯವೇ ಗೊತ್ತಿಲ್ಲ ಅನ್ಸುತ್ತೆ. ನಾನು ಅಧಿಕಾರದಿಂದ ಇಳಿಯುವಾಗ ಬರಿ ಘೋಷಣೆ ಮಾಡಿಲ್ಲ. ಬದಲಿಗೆ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ನಾನು ಹೊಂದಿಸಿಕೊಟ್ಟಿದ್ದ 800 ಕೋಟಿ ಹಣವನ್ನ ಇನ್ನು ಬಿಡುಗಡೆ ಮಾಡದೆ ಇಟ್ಟುಕೊಂಡಿದ್ದಾರೆ. ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸುವುದು ಇಲಾಖೆಯ ಕೆಲಸವಾಗಿದೆ. ತೆವಲಿಗೆ ಮಾತನಾಡಿಕೊಂಡು ಸುಳ್ಳು ಹೇಳಿಕೊಂಡು ಓಡಾಡೋದು ಬೇಡ ಎಂದು ಬಿ.ಸಿ.ಪಾಟೀಲ್ ವಿರುದ್ದ ಹೆಚ್‌ಡಿಕೆ ಕೆಂಡಾಮಂಡಲರಾಗಿದ್ದಾರೆ. 

PREV
click me!

Recommended Stories

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಕಾಲಲ್ಲಿ ಹಾಕಿ ತುಳಿದ ಪಾಗಲ್ ಪ್ರೇಮಿ!
Uttar kannada: ಅಯ್ಯೋ.. ಸಾವಿನ ದುಃಖ; ನೀರಲ್ಲೇ ಸಾಗಿದ ಶವ; ಹೊನ್ನಾವರದಲ್ಲಿ ತಲೆ ಸಮಾಜವೇ ತಲೆ ತಗ್ಗಿಸುವಂಥ ಘಟನೆ!