ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

By Kannadaprabha News  |  First Published Aug 28, 2021, 9:30 AM IST

*  ಕಾಂಗ್ರೆಸ್‌ ಮತ್ತು ಬಿಜೆಪಿ ಬಗ್ಗೆ ಅಸಮಾಧಾನ ಗೊಂಡಿರುವ ಉತ್ತರ ಕರ್ನಾಟಕದ ಜನ 
*  ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲ
* ಜೆಡಿಎಸ್‌ ಮತ್ತೆ ಅಧಿ​ಕಾರಕ್ಕೆ ಬರಲಿದೆ 


ಚನ್ನಪಟ್ಟಣ(ಆ.28):ಮೈಸೂರು ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಗೊಳ್ಳುವುದರಿಂದ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಯಾವುದೇ ನಷ್ಟವಾಗುವುದಿಲ್ಲ. 2008ರಲ್ಲಿ ಒಂದು ಕಾರಣ ಹೇಳಿಕೊಂಡು ಅವರು ಬಿಜೆಪಿಗೆ ಹೋಗಿದ್ದರು. ಈಗ ಮತ್ತೊಂದು ಕಾರಣ ಹೇಳಿಕೊಂಡು ಕಾಂಗ್ರೆಸ್‌ಗೆ ಹೋಗುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

"

Tap to resize

Latest Videos

undefined

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಕಳೆದ ಎರಡು ದಿನಗಳಿಂದ ನಾನು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಅಲ್ಲಿನ ಜನರ ಜೊತೆ ಮಾತನಾಡಿದ್ದೇನೆ. ಅವರು ಕಾಂಗ್ರೆಸ್‌ ಮತ್ತು ಬಿಜೆಪಿ ಬಗ್ಗೆ ಅಸಮಾಧಾನ ಗೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

GTD ನಿರ್ಗಮನದಿಂದ ಜೆಡಿಎಸ್‌ ಮೇಲೆ ಪರಿಣಾಮ : ಉಳಿಯೋದು 3 ಮಾತ್ರ

2023ರ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಜೆಡಿಎಸ್‌ ಪರವಾಗಿ ಜನಾದೇಶ ರೂಪುಗೊಳ್ಳಲಿದೆ. ನಮ್ಮ ಪಕ್ಷ ಮತ್ತೆ ಅಧಿ​ಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 
 

click me!