ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ದೇಶದ್ರೋಹದ ಕೇಸ್‌ ವಾಪಸ್ ಪಡೆಯಲು ಸಿದ್ದು ಆಗ್ರಹ

By Suvarna News  |  First Published Feb 6, 2020, 1:12 PM IST

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ| ಬೀದರ್‌ ಶಾಹೀನ್‌ ಸಂಸ್ಥೆಯಲ್ಲಿ ನಾಟಕ ಪ್ರದರ್ಶನ| ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ| 


ಬೀದರ್(ಫೆ.06): ಬೀದರ್‌ ನಗರದ ಶಾಹೀನ್‌ ಶಾಲೆಯ ಮಕ್ಕಳು ತಮಗಿಷ್ಟವಾಗದ ನಾಟಕ ಪ್ರದರ್ಶಿಸಿದರು ಎನ್ನುವ ಕ್ಷುಲ್ಲಕ ಕಾರಣಕ್ಕೆ ಮಕ್ಕಳು ಮತ್ತು ಹೆತ್ತವರ ಮೇಲೆ ಪೊಲೀಸರನ್ನು ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ‍್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ. 

 

ಬೀದರ್ ಶಾಲೆಯ ಮಕ್ಕಳು ತನಗೆ ಇಷ್ಟವಾಗದ ನಾಟಕ ಪ್ರದರ್ಶಿಸಿದರು ಎನ್ನುವ ಕ್ಷುಲಕ ಕಾರಣಕ್ಕೆ ಮಕ್ಕಳು ಮತ್ತು ಹೆತ್ತವರ ಮೇಲೆ ಪೊಲೀಸರನ್ನು ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ.
ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ‍್ಧಾಂತಿಕವಾಗಿ ದಿವಾಳಿಯಾಗಿದೆ.
1/4

— Siddaramaiah (@siddaramaiah)

Tap to resize

Latest Videos

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಶಾಹೀನ್‌ ಶಿಕ್ಷಣ ವಿರುದ್ಧ ಜನಾಕ್ರೋಶ

ಬೀದರ್‌ ನಗರ ಶಾಹೀನ್‌ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಸಂಭಾಷಣೆಯುಳ್ಳ ನಾಟಕ ಪ್ರದರ್ಶನಗೊಂಡಿತ್ತು. ಹೀಗಾಗಿ ಸಂಸ್ಥೆಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬಂಧಿತರಾಗಿ ಜಿಲ್ಲಾ ಕಾರಾಗೃಹದಲ್ಲಿರುವ‌ ಶಿಕ್ಷಕಿ ಫರೀಮಾ ಬೇಗಂ, ವಿಧ್ಯಾರ್ಥಿನಿಯ ತಾಯಿ ನವೀದಾ ಅವರನ್ನ ಬೀದರ್‌ ಕಾರಾಗೃಹದಲ್ಲಿ ಇಡಲಾಗಿದೆ. 

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬೀದರ್ ಶಾಲೆಯ ಮಕ್ಕಳ ನಾಟಕದಲ್ಲಿ ದೇಶದ್ರೋಹ ಕಂಡ ಕುರುಡು ಬಿಜೆಪಿಗೆ ಕಲ್ಲಡ್ಕದ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸದ ಕಾರ್ಯಾಚರಣೆಯ ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. 

 

ಬೀದರ್ ಶಾಲೆಯ ಮಕ್ಕಳ ನಾಟಕದಲ್ಲಿ ದೇಶದ್ರೋಹ ಕಂಡ ಕುರುಡು ಕ್ಕೆ ಕಲ್ಲಡ್ಕದ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸದ ಕಾರ್ಯಾಚರಣೆಯ ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ?
2/4

— Siddaramaiah (@siddaramaiah)

ಹೌದು, ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರಿಯಾಗುತ್ತಾನೆ. ದೆಹಲಿ ವಿಶ್ವವಿದ್ಯಾಲಯಗಳಿಗೆ ಪೊಲೀಸರನ್ನು ನುಗ್ಗಿಸಿದ, ಶಾಂತಿಯುತ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಪ್ರಚೋದನೆ ನೀಡಿದ ಸರ್ವಾಧಿಕಾರಿ ಮನಸ್ಸೇ ಬೀದರ್‌ನಲ್ಲಿ ಪುಟ್ಟಮಕ್ಕಳ ಮೇಲೆ ಸೇಡು ತೀರಿಸಲು ಹೊರಟಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಬೀದರ್‌ಗೆ ಅಸಾದುದ್ದಿನ್ ಓವೈಸಿ ಭೇಟಿ

ಹೌದು,
ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರಿಯಾಗುತ್ತಾನೆ.
ದೆಹಲಿ ವಿಶ್ವವಿದ್ಯಾಲಯಗಳಿಗೆ ಪೊಲೀಸರನ್ನು ನುಗ್ಗಿಸಿದ, ಶಾಂತಿಯುತ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಪ್ರಚೋದನೆ ನೀಡಿದ ಸರ್ವಾಧಿಕಾರಿ ಮನಸ್ಸೇ ಬೀದರ್ ನಲ್ಲಿ ಪುಟ್ಟಮಕ್ಕಳ ಮೇಲೆ ಸೇಡು ತೀರಿಸಲು ಹೊರಟಿದೆ.
3/4

— Siddaramaiah (@siddaramaiah)

ಬೀದರ್‌ನ ಶಾಹಿನ್ ವಿದ್ಯಾಸಂಸ್ಥೆ, ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣವನ್ನು ಪೊಲೀಸರು ತಕ್ಷಣ ವಾಪಸು ಪಡೆಯಲು ಆಗ್ರಹಿಸುತ್ತಿದ್ದೇನೆ. ಭ್ರಷ್ಟರನ್ನು ಖರೀದಿಸಿ ಅಧಿಕಾರದಲ್ಲಿರುವ ಸರ್ಕಾರ, ಜನವಿರೋಧಿ ಕೃತ್ಯಕ್ಕಿಳಿದರೆ ನಿರೀಕ್ಷೆಗಿಂತ ಮೊದಲೇ ನಾಶವಾಗಲಿದೆ ಎಂದು ಬರೆದುಕೊಂಡಿದ್ದಾರೆ. 


 

ಬೀದರ್ ನ ಶಾಹಿನ್ ವಿದ್ಯಾಸಂಸ್ಥೆ,ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣವನ್ನು ಪೊಲೀಸರು ತಕ್ಷಣ ವಾಪಸು ಪಡೆಯಲು ಆಗ್ರಹಿಸುತ್ತಿದ್ದೇನೆ.
ಭ್ರಷ್ಟರನ್ನು ಖರೀದಿಸಿ ಅಧಿಕಾರದಲ್ಲಿರುವ ಸರ್ಕಾರ, ಜನವಿರೋಧಿ ಕೃತ್ಯಕ್ಕಿಳಿದರೆ ನಿರೀಕ್ಷೆಗಿಂತ ಮೊದಲೇ ನಾಶವಾಗಲಿದೆ.
4/4

— Siddaramaiah (@siddaramaiah)
click me!