ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ ಆಕ್ರೋಶ| ಕಳೆದ 75 ದಿನಗಳಿಂದ ನಡೆಸುತ್ತಿರುವ ಹೋರಾಟಗಾರರಿಗೆ ಬೆಲೆ ಕೊಡದೆ ನಿರ್ಲಕ್ಷ| ಕೂಡಲೇ ಪ್ರಧಾನಿ ಮೋದಿ ದೇಶದ ರೈತರ ಕ್ಷಮೆ ಯಾಚಿಸಬೇಕು: ವಿಜಯಕುಮಾರ ಜಿ.ಆರ್|
ಆಳಂದ(ಫೆ.15): ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನು ಜಾರಿಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಮತ್ತು ಜನ ಸಾಮಾನ್ಯ ವಿರೋಧಿ ದೋರಣೆ ಅನುಸರಿಸಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಹಾಗೂ ದೆಹಲಿಯಲ್ಲಿ ರೈತರು ನಡೆಸಿದ ಹೋರಾಟಕ್ಕೆ ಬೆಂಬಲಿಸಿ ಶನಿವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಜನರ ಆಶೋತ್ತರಗಳನ್ನು ಗಾಳಿ ತೂರಿ ಬಂಡವಾಳ ಶಾಹಿ ಆಡಳಿತ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ರೈತರು ನಿಂತರ ಧರಣಿ ಸತ್ಯಾಗ್ರಹ ಕೈಗೊಂಡರು ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸುವ ಬದಲು ಅವರ ಮೇಲೆ ಪ್ರಕರಣ ದಾಖಲಿಸಿ ಪ್ರತಿಭಟನೆ ಹತ್ತಿಕ್ಕುವ ಹುನ್ನಾರ ನಡೆಸಿದೆ ಎಂದು ಟೀಕಿಸಿದರು.
ಕೂಡಲೇ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯದಿದ್ದಾರೆ ದೇಶಾದಾದ್ಯಂತ ರೈತರ ಚಳುವಳು ಮತ್ತಷ್ಟುಸ್ವರೂಪ ಪಡೆದುಕೊಳ್ಳಲಿದೆ ಕೂಡಲೇ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಕೆರಳಿದ ಕಲ್ಯಾಣ: ಸರ್ಕಾರದ ಬಳಿಗೆ ನಿಯೋಗಕ್ಕೆ ನಿರ್ಧಾರ
ಪ್ರತಿಭಟನೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ಬಸವರಾಜ ಪವಾಡಶೆಟ್ಟಿಮತ್ತಿತರು ಮಾತನಾಡಿದರು. ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀಲ ಮತ್ತು ಹಣಮಂತ ಭೂಸನೂರ, ಜಿಪಂ ಸದಸ್ಯ ಸಿದ್ಧರಾಮ ಪ್ಯಾಟಿ, ಪಂಡಿತ ಶೇರಿಕಾರ, ಅಪ್ಪಾರಾವ್ ಪಾಟೀಲ ದರ್ಗಾಶಿರೂರ, ಲಿಂಗರಾಜ ಪಾಟೀಲ, ರಾಜಶೇಖರ ಯಂಕಂಚಿ, ಮಹಾಂತಗೌಡ ಪಾಟೀಲ ಸಾಲೇಗಾಂವ, ಶರಣು ಭೂಸನೂರ, ಮಲ್ಲಯ್ಯ ಸ್ವಾಮಿ ಮಾದನಹಿಪ್ಪರಗಾ, ಅನೀಲ ರಾಜೋಳೆ, ಸಲಾಂ ಸಗರಿ ಇದ್ದರು.
ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ಕಳೆದ 75 ದಿನಗಳಿಂದ ನಡೆಸುತ್ತಿರುವ ಹೋರಾಟಗಾರರಿಗೆ ಬೆಲೆ ಕೊಡದೆ ನಿರ್ಲಕ್ಷ ಮಾಡುತ್ತಿದ್ದು, ಕೂಡಲೇ ಪ್ರಧಾನಿ ಮೋದಿ ದೇಶದ ರೈತರ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಯುವ ಮುಖಂಡ ವಿಜಯಕುಮಾರ ಜಿ.ಆರ್. ಆಗ್ರಹಿಸಿದರು.
ಶಹಾಬಾದ ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಪ್ರತಿಭಟಿಸಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತ್ತ, 75 ದಿನಗಳಿಂದ ಧರಣಿ ನಡೆಸುತ್ತಿರುವ ರೈತರಲ್ಲಿ ಸುಮಾರು 155 ಜನ ಮೃತ ಪಟ್ಟಿದ್ದಾರೆ, ಮೋದಿ ಅವರು ಈ ಚಳುವಳಿಯನ್ನು ನಿರ್ಲಕ್ಷಿಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಒಂದೆಡೆ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿದ್ದು, ರೈತರು ಬೀದಿಯಲ್ಲಿ ನಿಂತು ಹೋರಾಟ ನಡೆಸುವಂತಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಬಿಸಿಸಿ ಅಧ್ಯಕ್ಷ ಡಾ.ಎಂ.ಎ.ರಶೀದ ಮಾತನಾಡಿ ಕೇಂದ್ರ ಸರ್ಕಾರ 12 ಸಾವಿರ ರೈತರ ಮೇಲೆ ಹಾಕಿರುವ ಮೊಕದ್ದಮೆ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಬೆಳಗ್ಗೆ ನಗರದ ಡಾ. ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಬಿಸಿಸಿ ಅಧ್ಯಕ್ಷ ಡಾ.ಎಂ.ಎ.ರಶೀದ, ಜಿಪಂ.ಸದಸ್ಯ ಶಿವಾನಂದ ಪಾಟೀಲ, ಸುಭಾಷ ಪಂಚಾಳ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲ್‌ಪುಕರ್, ವಿಜಯಕುಮಾರ ಮುಟ್ಟತ್ತಿ, ಸುಭಾಷ ಪವಾರ, ಸುರೇಶ ನಾಯಕ, ಗಿರೀಶ ಕಂಬಾನೂರ, ಮೃತ್ಯುಂಜಯ ಸ್ವಾಮಿ ಹಿರೇಮಠ ಇದ್ದರು.