
ಉಡುಪಿ: ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ಆತ್ಮ*ಹತ್ಯೆ ಮಾಡಿಕೊಂಡಿರುವ ಮಾಜಿ ಶಾಸಕರ ಪುತ್ರ. ಸುದೀಪ್ ಅವರು ಹೆಬ್ರಿ ತಾಲೂಕು ನಿವಾಸಿಯಾಗಿದ್ದಾರೆ. ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಆರ್‌ಎಸ್‌ಎಸ್ ದೇಶ ಹಾಳು ಮಾಡಿಲ್ಲ: ಪ್ರಿಯಾಂಕ್ ಖರ್ಗೆಗೆ ಪ್ರಮೋದ್ ಮುತಾಲಿಕ್ ತಿರುಗೇಟು
ಸುದೀಪ್ ತಂದೆ ಹೆಚ್.ಗೋಪಾಲ್ ಭಂಡಾರಿ ಅವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ 2008ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ. ಹೆಚ್.ಗೋಪಾಲ್ ಭಂಡಾರಿ ಅವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ವೀರಪ್ಪ ಮೊಯ್ಲಿ ಪ್ರತಿನಿಧಿಸುತ್ತಿದ್ದರು. ಸದ್ಯ ಬಿಜೆಪಿಯ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಇದನ್ನೂ ಓದಿ: ಮಂತ್ರಿಯಾಗುವ ಅವಕಾಶವಿತ್ತು, ಪಕ್ಷಕ್ಕಾಗಿ ತ್ಯಾಗ ಮಾಡಿ ಲೋಕಸಭೆಗೆ ಸ್ಪರ್ಧಿಸಿದೆ: ಸಂಸದ ತುಕಾರಾಂ